Site icon Vistara News

Road Accident: ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

Road Accident in Kanakagiri taluk

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ (Bangalore-Mysore Highway) ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿ (Road Accident) ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.

ಒಂದೇ ಬೈಕ್‌ನಲ್ಲಿದ್ದ ಮೂವರಿಗೆ ಹಿಂಬದಿಯಿಂದ ಬಂದ ಮತ್ತೊಂದು ‌ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಅವಘಡದಲ್ಲಿ ಕಾಲು ಮುರಿದಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. ಮೃತರು ಯಾವ ಊರಿನವರು, ಹೆಸರು ಎಲ್ಲವೂ ತಿಳಿದು ಬರಬೇಕಿದೆ.

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ

ರಾಮನಗರ ತಾಲೂಕಿನ ಬಸವನಪುರ ಗೇಟ್ ಬಳಿ ಬೈಕ್‌ಗೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸವಾರ ಗಂಭೀರ ಗಾಯಗೊಂಡಿದ್ದಾರೆ. ಶಿವಕುಮಾರ್ (36) ಗಾಯಗೊಂಡವರು.

ಶಿವಕುಮಾರ್‌ ಕೊಳ್ಳೇಗಾಲದಿಂದ ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವಾಹನವೂ ರಭಸವಾಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ರಾಮನಗರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಇದನ್ನೂ ಓದಿ: Murder Case: ಆಸ್ತಿಗಾಗಿ ತಮ್ಮನ ಮೇಲೆ ಕಾರು ಹರಿಸಿದ ಅಣ್ಣ; ಹತ್ಯೆಕೋರನಿಗಾಗಿ ಪೊಲೀಸರ ಹುಡುಕಾಟ

ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಅಪಘಾತ ಮಾಡಿ ಪರಾರಿಯಾದವರಿಗೆ ಹುಡುಕಾಟ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version