Site icon Vistara News

Road Accident : ಲಾರಿಗೆ ಡಿಕ್ಕಿ ಹೊಡೆದ ಕಾರು ಜಖಂ; ಐವರು ಗಂಭೀರ

Car accident

ರಾಮನಗರ: ಇಲ್ಲಿನ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ಪಕ್ಕದ ರಸ್ತೆಗೆ ಪಲ್ಟಿ ಆಗಿದೆ.

ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಂಟೈನರ್

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿ ಸಮೀಪದ ಮಾಯಸಂದ್ರ ಕೆರೆಗೆ ನಿಯಂತ್ರಣ ತಪ್ಪಿ ಕಂಟೈನರ್ ಉರುಳಿ ಬಿದ್ದಿದೆ. ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿ ಹೊಡೆದು ಕಂಟೈನರ್‌ ಕೆರೆಗೆ ಉರುಳಿದೆ. ಚಾಲಕ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕ್ರೈನ್ ಮೂಲಕ ಕಂಟೈನರ್ ಮೇಲೆತ್ತುವ ಕಾರ್ಯ ಮುಂದುವರಿದಿದೆ.

ಇದನ್ನೂ ಓದಿ: Road accident : ಇಬ್ಬರು ಮಕ್ಕಳ ಬಲಿ ಪಡೆದ ಅಪಘಾತಕ್ಕೆ ಟ್ವಿಸ್ಟ್‌ ; ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಯುಪುತ್ರ ಶರಣು

ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಅಪ್ಪ ಸ್ಥಳದಲ್ಲೇ ಸಾವು!

ದೊಡ್ಡಬಳ್ಳಾಪುರ: ಮಗಳನ್ನು ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದ ಅಪ್ಪ ಮಗಳ ಕಣ್ಣೆದುರಲ್ಲೇ (Father dies in accident) ಒದ್ದಾಡಿ ಪ್ರಾಣ (Road Accident) ಕಳೆದುಕೊಂಡಿದ್ದಾರೆ. ಮಗಳು ಕೂಡಾ ಗಂಭೀರವಾಗಿ ಗಾಯಗೊಂಡು (Daughter injured) ಆಸ್ಪತ್ರೆ ಸೇರಿದ್ದಾಳೆ. ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಈ ದುರಂತ ನಡೆದಿರುವುದು ದೊಡ್ಡಬಳ್ಳಾಪುರ (Doddaballapura news) ನಗರದ ಎಪಿಎಂಸಿ ಮಾರುಕಟ್ಟೆ ಬಳಿ.

ಗುರುವಾರ ಮುಂಜಾನೆ ಬೈಕ್‌ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ ಅಪ್ಪನನ್ನು ವೆಂಕಟೇಶ್‌ (45) ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮುದ್ದನಾಯಕನ ಪಾಳ್ಯದ ನಿವಾಸಿಯಾಗಿರುವ ವೆಂಕಟೇಶ್ ಅವರು ಎಂದಿನಂತೆ ತಮ್ಮ ಮಗಳು ಯಶಸ್ವಿನಿ (15)ಯನ್ನು ಶಾಲೆಗೆ ಬಿಡಲೆಂದು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.

ಅವರು ನಗರದ ಎಪಿಎಂಸಿ ಬಳಿ ಸಾಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮವಾಗಿ ಬೈಕ್‌ ಲಾರಿಯ ಒಳಭಾಗಕ್ಕೆ ಹೋಗಿದೆ. ಡಿಕ್ಕಿಯ ರಭಸಕ್ಕೆ ವೆಂಕಟೇಶ್‌ ಮತ್ತು ಯಶಸ್ವಿನಿ ಹಾರಿ ಬಿದ್ದಿದ್ದು, ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ವೆಂಕಟೇಶ್‌ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ ಯಶಸ್ವಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆಯುತ್ತಿದ್ದಂತೆಯೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version