Site icon Vistara News

Road Accident : ಖಾಸಗಿ ಬಸ್ ಪಲ್ಟಿ; 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Road Accident

ಚಿತ್ರುದುರ್ಗ/ಚಿಕ್ಕಮಗಳೂರು: ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ (Bus Accident) ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗಿಡ್ಡಾಪುರ ಬಳಿ ಈ ಅಪಘಾತ (Road Accident) ನಡೆದಿದೆ.

ಪಲ್ಟಿಯಾದ ಬಸ್‌

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಗರಣಿ ಕ್ರಾಸ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಎದುರುಗಡೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್‌ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರೆಲ್ಲರೂ ಸೇರಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕಾಫಿ ಶಾಪ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಎದೆ ಝಲ್‌ ಎನಿಸುತ್ತದೆ. ತಿರುವಿನಲ್ಲಿ ಕಾರು ನೇರವಾಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಖಾಲಿ ಜಾಗದಲ್ಲಿ ಬಿದ್ದಿದೆ. ಕೂಡಲೇ ಸ್ಥಳೀಯರೆಲ್ಲವೂ ಓಡಿ ಹೋಗಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version