Site icon Vistara News

Road Accident: ಬೈಕ್‌ಗೆ ಶಾಲಾ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

accident at Hubballi

ಹಗರಿಬೊಮ್ಮನಹಳ್ಳಿ: ಬೈಕ್ ಸವಾರನಿಗೆ ಶಾಲಾ ಬಸ್ (School Bus) ಡಿಕ್ಕಿ ಹೊಡೆದ ಪರಿಣಾಮ ಬೈಕ್ (Bike) ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ತಾಲೂಕಿನ ಬಾಚಿಗೊಂಡನಹಳ್ಳಿ ಮತ್ತು ಹಗರಿಕ್ಯಾದಿಗಿಹಳ್ಳಿ ಮಧ್ಯದ ರಸ್ತೆಯಲ್ಲಿ ಬುಧವಾರ ಜರುಗಿದೆ. ಏಣಿಗಿ ಬಸಾಪುರ ಗ್ರಾಮದ ಕಲ್ಗುಡಿ ನಾಗರಾಜ್ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: KSOU Scam: ಕೆಎಸ್‌ಒಯು ಹಗರಣದ ತನಿಖೆಗೆ ಸಿಬಿಐ ಎಂಟ್ರಿ

ಮೃತ ನಾಗರಾಜ್ ತಮ್ಮ ಊರಿಂದ ವೈಯಕ್ತಿಕ ಕಾರ್ಯನಿಮಿತ್ತ ಬಾಚಿಗೊಂಡನಹಳ್ಳಿ ಗ್ರಾಮದಲ್ಲಿ ಹೋಗುವಾಗ ಎದುರಿಗೆ ವೇಗವಾಗಿ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗಳಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಅಪಘಾತವಾಗುತ್ತಿದ್ದಂತೆ ಶಾಲಾ ಬಸ್ ಚಾಲಕ ಪರಾರಿಯಾಗಿದ್ದಾನೆ. ಹಗರಿಬೊಮ್ಮನಹಳ್ಳಿ ಪಿ.ಎಸ್.ಐ ಸೇರಿದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version