Site icon Vistara News

Road Accident | ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ; ಸಿಂದಗಿ ಸಿಪಿಐ, ಪತ್ನಿ ದುರ್ಮರಣ

ನೇಲೋಗಿ ಕ್ರಾಸ್

ಕಲಬುರಗಿ: ಇಲ್ಲಿನ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ (Road Accident) ಹೊಡೆದ ಪರಿಣಾಮ ಸ್ಥಳದಲ್ಲಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ದುರ್ಮರಣ ಹೊಂದಿದ್ದಾರೆ.

ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ವೇಳೆ ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.

ತೀವ್ರ ಗಾಯಗೊಂಡ ದಂಪತಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದು, ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Theft case | ಏಳು ಮಂದಿ ಖತರ್ನಾಕ್‌ ಕಳ್ಳರು, ಸುಲಿಗೆಕೋರರ ಬಂಧನ: 2೦ ಲಕ್ಷ ಮೌಲ್ಯದ ಸೊತ್ತು ವಶ

Exit mobile version