ಬೆಳಗಾವಿ: ಇಲ್ಲಿನ ಗಣಾಚಾರಿ ಶಿಕ್ಷಣ ಸಂಸ್ಥೆಯ ಎಕ್ಸಲಂಟ್ ಎಜುಕೇಷನ್ ಸೊಸೈಟಿಗೆ ಸೇರಿದ ಶಾಲಾ ವಾಹನವು (Road Accident) ಪಲ್ಟಿಯಾಗಿದೆ. ಸುಮಾರು 37 ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ.
ಹಾರೂಗೊಪ್ಪ ಗ್ರಾಮದಿಂದ ಮರಕುಂಬಿ ಗ್ರಾಮದಲ್ಲಿರುವ ಗಣಾಚಾರಿ ಶಾಲೆಗೆ ಮಕ್ಕಳನ್ನು ತರುವಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಎಲ್ಲ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಪುಟ್ಟ ವಾಹನದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕೂರಿಸಿಕೊಂಡು ಹೋಗುತ್ತಿದ್ದ ಆರೋಪ ಕೇಳಿ ಬಂದಿದೆ.
ಸಾಮರ್ಥ್ಯಕ್ಕಿಂತ ಹೆಚ್ಚು ಮಕ್ಕಳನ್ನು ಕರೆದೊಯ್ಯುವಾಗ ಚಾಲಕನ ನಿಯಂತ್ರಣ ತಪ್ಪಿದೆ. ವಾಹನ ಪಲ್ಟಿಯಾಗುತ್ತಿದ್ದಂತೆ ಓಡಿ ಹೋಗಿ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸಣ್ಣ ಪುಟ್ಟ ಗಾಯದಿಂದ ಪ್ರಾಣಾಪಾಯದಿಂದ ಎಲ್ಲ ಮಕ್ಕಳು ಪಾರಾಗಿದ್ದಾರೆ. ಇತ್ತ ವಾಹನ ಬದಲಾಯಿಸಿ ಎಂದು ಎಷ್ಟು ಹೇಳಿದರೂ ಸಹ ಕೇಳುತ್ತಿಲ್ಲ ಎಂದು ಪೋಷಕರು ಕಿಡಿಕಾರಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೊಸೂರು ಮೇನ್‌ರೋಡಲ್ಲಿ Hit and run
ಆನೇಕಲ್ (ಬೆಂಗಳೂರು): ಲಾರಿಯೊಂದು ಬೈಕ್ ಡಿಕ್ಕಿ ಹೊಡೆದು (Road accident) ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ (two youths dead) ಕಳೆದುಕೊಂಡ Hit and run ಅಪಘಾತ ಹೊಸೂರು ಮುಖ್ಯರಸ್ತೆಯಲ್ಲಿ (Hosur Main Road) ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.
ಮಂಗನಪಾಳ್ಯ ನಿವಾಸಿ ಮಂಜಪ್ಪ (32) ಮೃತ ಸವಾರರಲ್ಲಿ ಒಬ್ಬರು. ಇನ್ನೊಬ್ಬರ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಬೆಳಗ್ಗೆ 10 ಗಂಟೆಯ ಸುಮಾರಿಗೆ ಈ ಅಪಘಾತ ನಡೆದಿದೆ.
ಇದನ್ನೂ ಓದಿ: Murder case : ಹೆಂಡತಿಯನ್ನು ಕತ್ತರಿಯಿಂದ ಇರಿದು ಕೊಂದ ಅನುಮಾನ ಪಿಶಾಚಿ ಗಂಡ
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಬಳಿ ಮಂಜಪ್ಪ(32) ಮತ್ತು ಇನ್ನೊಬ್ಬರು ಬೈಕ್‌ನಲ್ಲಿ ಸಾಗುತ್ತಿದ್ದಾಗ ಹಿಂಬದಿಯಿಂದ ಧಾವಿಸಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಹೊಡೆತಕ್ಕೆ ಬೈಕ್ ಉರುಳಿ ಬಿದ್ದು ಇಬ್ಬರೂ ಸವಾರರು ರಸ್ತೆಗೆ ಬಿದ್ದರು. ಒಬ್ಬರ ಮೇಲೊಬ್ಬರು ಬಿದ್ದ ಅವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಡಿಕ್ಕಿ ಹೊಡೆದ ಲಾರಿ ಅಲ್ಲಿ ನಿಲ್ಲಿಸದೆ ಪರಾರಿಯಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ