Site icon Vistara News

Road Accident | ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ, ಶಿಕ್ಷಕ ಸಾವು

Teacher Death Shiralakoppa road accident

ಶಿರಾಳಕೊಪ್ಪ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸಮೀಪದ ತಡಗಣಿ ಉಡುಗಣಿ ಗ್ರಾಮದ ನಡುವಿನ ರಸ್ತೆಯ ತಿರುವಿನಲ್ಲಿ ಗುರುವಾರ (ಜ.೫) ಬೆಳಗ್ಗೆ ಬೊಲೆರೊ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ (Road Accident) ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ದೊಡ್ಡಜೋಗಿಹಳ್ಳಿಯ ಪ್ರಾಥಮಿಕ ಶಾಲಾ ಶಿಕ್ಷಕ ರವಿ ಬಿ (೪೭). ಕಣಸೋಗಿ ಗ್ರಾಮಕ್ಕೆ ಸಂಬಂಧಿಯ ಶವ ಸಂಸ್ಕಾರಕ್ಕೆ ಶಿಕಾರಿಪುರದಿಂದ ಬರುತ್ತಿರುವಾಗ ಅಪಘಾತ ಸಂಭವಿಸಿದೆ.

ಆನವಟ್ಟಿ ಸಮೀಪದ ತಲ್ಲೂರು ಗ್ರಾಮದವರಾದ ಇವರು ಶಿಕಾರಿಪುರದ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಮೃತರಿಗೆ ಪತ್ನಿ, ಮಗ, ಮಗಳು ಇದ್ದಾರೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಮತ್ತು ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಲೋಕೇಶ್, ಸಂಘಟನಾ ಕಾರ್ಯದರ್ಶಿ ಚಂದ್ರಾನಾಯ್ಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಧುಕೇಶವ, ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ | Narayana guru | ನಾರಾಯಣ ಗುರು ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ

Exit mobile version