Site icon Vistara News

Road Accident | ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್‌ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಕಲಬುರಗಿ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ (Road Accident) ಜೇವರ್ಗಿ ಹತ್ತಿರದ ಗೌನಳ್ಳಿ ಕ್ರಾಸ್ ಬಳಿ ನಡೆದಿದೆ.

ತಾಲೂಕಿನ ಹಾಗರಗುಂಡಗಿ ಗ್ರಾಮದ ಸಂಜೀವ ಕುಮಾರ ವಜಾಪುರ್ (30) ಹಾಗೂ ಟೆಂಪೋ ಟ್ರಾವೆಲರ್ ಚಾಲಕ ಅಪ್ಪರಾಯ ಬಿರಾದಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಟಿ ವಾಹನದಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಚಾಲಕ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಟಿಟಿ ವಾಹನದ ಮುಂಭಾಗ ನುಜ್ಜುಗುಜ್ಜಾಗಿದೆ. ವಾಹನದ ಅವಶೇಷಗಳಡಿ ಸಿಲುಕಿದ ಡ್ರೈವರ್ ಮೃತ ದೇಹ ತೆಗೆಯಲು ಪೊಲೀಸರು ಪರದಾಡಿದರು.

ಹಾಗರಗುಂಡಗಿ ಗ್ರಾಮದ ಒಂದೆ ಕುಟುಂಬದವರಾದ ಇವರು, ಒಂದು ವಾರದ ಹಿಂದೆ ಕರ್ನಾಟಕ ಯಾತ್ರೆಗೆ ತೆರಳಿ ಮರಳುತ್ತಿದ್ದರು. ಊರು ಸಮೀಪ ಇರುವಂತೆಯೇ ದುರ್ಘಟನೆ ನಡೆದಿದೆ. ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇನ್ನೂ ಅರ್ಧ ಗಂಟೆಯಲ್ಲಿ ಗ್ರಾಮ ಸೇರುತ್ತಿದ್ದರು. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Accident news | ಬೆಂಗಳೂರು- ಮೈಸೂರು ದಶಪಥದಲ್ಲಿ ಅಪಘಾತ, 2 ಸಾವು, ಹಲವರಿಗೆ ಗಾಯ

Exit mobile version