Site icon Vistara News

Road Accident | ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್; ಸ್ಥಳದಲ್ಲಿ ಒಬ್ಬ ಸಾವು, ಮತ್ತೊಬ್ಬ ಗಂಭೀರ

Road Accident

ತಮಿಳುನಾಡು/ಬೆಂಗಳೂರು: ಇಲ್ಲಿನ ಸೂಳಗಿರಿಯ ಚಿನ್ನಾರ್ ಬಳಿ ಟೆಂಪೋ ಟ್ರಾವೆಲರ್‌ವೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ (Road Accident) ಹೊಡೆದ ಪರಿಣಾಮ ವಾಹನದ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಕೃಷ್ಣಗಿರಿಗೆ ತರಕಾರಿ ತುಂಬಿಸಿಕೊಂಡು ಹೋಗುತ್ತಿದ್ದಾಗ ಈ ಅಪಘಾತವಾಗಿದೆ.

ಟೆಂಪೋ ಟ್ರಾವೆಲರ್‌ನಲ್ಲಿದ್ದ ನಾಲ್ವರಲ್ಲಿ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮತ್ತಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಳಗಿರಿ ಹೆದ್ದಾರಿಯಲ್ಲಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಆದ ಕಾರಣ ರಸ್ತೆ ಮೇಲೆ ತರಕಾರಿ ಹಾಗೂ ವಾಹನದ ಬಿಡಿ ಭಾಗ ಚೆಲ್ಲಾಡಿತ್ತು.

ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Road accident | ಅಪಘಾತದಲ್ಲಿ ಮೃತಪಟ್ಟ ಸವದತ್ತಿ ಯಲ್ಲಮ್ಮ ಭಕ್ತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Exit mobile version