Site icon Vistara News

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Car Accident

ಮಂಗಳೂರು: ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ (Road Accident) ಸಂಭವಿಸಿ ಮೂವರು ದುರ್ಮರಣ ಹೊಂದಿರುವ ಘಟನೆ ಕಾಸರಗೋಡು ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಮಂಗಳವಾರ ನಡೆದಿದೆ.

ಕೇರಳದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೊನ್ ಸೇರಿ ಮೂವರು ಮೃತರು. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಒಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಗೂ ಗಾಯಗಳಾಗಿರುವುದು ಕಂಡುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಡಿಕ್ಕಿ ಹೊಡೆದ ನಂತರ ಆಂಬ್ಯುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

ಇದನ್ನೂ ಓದಿ | Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

ಚಿಕ್ಕಬಳ್ಳಾಪುರ: ಕಲ್ಲು ಕೂಚ (ಕಂಬ) ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ (Road Accident), ಕಂಬಗಳಡಿ ಸಿಲುಕಿಕೊಂಡು ಮೂವರು ಕಾರ್ಮಿಕರು (laborers death) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ- ಗೌರಿಬಿದನೂರು (Chikkaballapur news) ಮಾರ್ಗದ ಕಣಿವೆ ಬಳಿ ದುರ್ಘಟನೆ ನಡೆದಿದೆ.

ಕೋಲಾರದ ಮಾಲೂರಿನ ಚಿಕ್ಕತಿರುಪತಿಯಿಂದ ಮಂಚೇನಹಳ್ಳಿಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಚಾಲಕನ‌ ನಿಯಂತ್ರಣ ತಪ್ಪಿ‌ ಪಲ್ಟಿಯಾಗಿದೆ. ಕ್ಯಾಂಟರ್‌ನ ಹಿಂಬದಿಯಲ್ಲಿ ಸಾಗಿಸಲಾಗುತ್ತಿದ್ದ ಕಲ್ಲಿನ ಕಂಬಗಳ ಮೇಲೆ ಕುಳಿತಿದ್ದ ಕೂಲಿ ಕಾರ್ಮಿಕರು, ಈ ಕಲ್ಲುಗಳಡಿ ಸಿಲುಕಿಕೊಂಡು ದಾರುಣವಾಗಿ ಸಾವಿಗೀಡಾದರು.

108 ಸಿಬ್ಬಂದಿ ಮುಷ್ಕರದ ಹಿನ್ನೆಲೆಯಲ್ಲಿ ಕರೆ ಕಳುಹಿಸಿದರೂ ಆಂಬ್ಯುಲೆನ್ಸ್ ಸಮಯಕ್ಕೆ ಸರಿಯಾಗಿ ಬರಲಿಲ್ಲ. ಆಂಬ್ಯುಲೆನ್ಸ್ ಬಂದಿದ್ದರೆ ಜೀವಗಳನ್ನು ಉಳಿಸಬಹುದಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಸ್ಥಳಕ್ಕೆ‌ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ

ಕೊರಟಗೆರೆ: ಸಾಲದ ಬಾಧೆ ತಾಳಲಾರದೇ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕಬ್ಬಿಗೆರೆ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (38) ಮೃತಪಟ್ಟ ರೈತ. ಜಮೀನಿನಲ್ಲಿ ಬೋರ್‌ವೆಲ್ ಕೊರೆಸಲು ರೈತ ರಾಜಣ್ಣ ಹಲವು ಖಾಸಗಿ ಫೈನಾನ್ಸ್‌ಗಳಲ್ಲಿ 12 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದು, ಜಮೀನಿನಲ್ಲಿ 5ಕ್ಕೂ ಹೆಚ್ಚು ಕೊಳವೆ ಬಾವಿಗಳನ್ನು ಕೊರೆಸಿದ್ದು ನೀರು ಸಿಗದ ಕಾರಣ ಮನನೊಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

ತನ್ನ ಸ್ನೇಹಿತರ ಬಳಿಯೂ ಸಾಲ ಪಡೆದಿದ್ದು, ಕಳೆದ ಭಾನುವಾರ ತಡರಾತ್ರಿ ತನ್ನ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಪೊಲೀಸ್ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಎರಡು ವರ್ಷದಿಂದ ಮಳೆ ಇಲ್ಲದೆ ಬೆಳೆಗಳೆಲ್ಲವೂ ನಾಶವಾಗಿ ರೈತ ಮಾಡಿರುವ ಸಾಲ ತೀರಿಸಲಾಗದೆ ನೇಣು ಹಾಕಿಕೊಳ್ಳುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ನಡೆಯುತ್ತಿವೆ. ಹಣದ ವಸೂಲಿಗೆ ಬರುತ್ತಿರುವ ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಬೇಕು. ಮಳೆ ಇಲ್ಲದೆ ಬೆಳೆ ಇಲ್ಲದೆ ರೈತ ಎಲ್ಲಿಂದ ಸಾಲವನ್ನು ಕಟ್ಟುತ್ತಾನೆ? ಈ ಘಟನೆಗಳ ಬಗ್ಗೆ ಕೊಡಲೇ ಸರ್ಕಾರ ಗಮನ ಹರಿಸಬೇಕು. ರೈತರ ಪ್ರಾಣವನ್ನು ಉಳಿಸಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದರಾಜು ಆಗ್ರಹಿಸಿದ್ದಾರೆ.

Exit mobile version