Site icon Vistara News

Road Accident : ಬೈಕ್‌ಗೆ ಡಿಕ್ಕಿ ಹೊಡೆದ ಟ್ರಾಕ್ಟರ್‌; ಪ್ರಾಣ ಬಿಟ್ಟ ಸವಾರ

Road Accident in yadagiri

ಯಾದಗಿರಿ: ಯಾದಗಿರಿ ಜಿಲ್ಲೆಯ (yadagiri news) ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದ ಬಳಿ ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಬೈಕ್‌ಗೆ ಡಿಕ್ಕಿ (Road Accident) ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವರಾಜ (35) ಮೃತ ದುರ್ದೈವಿ.

ಶಿವರಾಜ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಚಾಲಕರಾಗಿದ್ದು, ಯಾದಗಿರಿ ಡಿಪೋದಲ್ಲಿ ಕೆಲಸ (Bus Driver) ಮಾಡುತ್ತಿದ್ದರು. ಬಾದ್ಯಾಪುರನಿಂದ ಸುರಪುರಗೆ ಕೆಲಸಕ್ಕೆ ಹಾಜರಾಗಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರ ಆಕ್ರಂದನ

ಕೃಷಿ ಹೊಂಡದಲ್ಲಿ ಯುವಕನ ಶವ ಪತ್ತೆ

ಕೋಲಾರ (Kolar News) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚಲ್ದಿಗಾನಹಳ್ಳಿಯ ಕೃಷಿ ಹೊಂಡದಲ್ಲಿ ಯುವಕನ ಶವ ಪತ್ತೆ ಆಗಿದೆ. ಚಲ್ದಿಗಾನಹಳ್ಳಿ ಗ್ರಾಮದ ರಾಕೇಶ್ (17) ಎಂದು ತಿಳಿದು ಬಂದಿದೆ. ರಾಕೇಶ್‌ ಚಿಂತಾಮಣಿ ಕಾಲೇಜಿನಲ್ಲಿ ಡಿಪ್ಲೋಮಾ ಓದುತ್ತಿದ್ದ. ಯುವಕನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಶ್ರೀನಿವಾಸಪುರ ಪಟ್ಟಣ ಪೊಲೀಸರು ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಬೈಕ್‌ಗಳ ನಡುವೆ ಅಪಘಾತ

ಮೈಸೂರು: ಬೈಕ್‌ಗಳ ನಡುವೆ ಭೀಕರ ಅಪಘಾತ (Two biked collide each other) ಸಂಭವಿಸಿ ತಾತ ಮೃತಪಟ್ಟು, ಮೊಮ್ಮಗ ಗಾಯಗೊಂಡ ಘಟನೆ ಹುಣಸೂರಿನಲ್ಲಿ ಸಂಭವಿಸಿದೆ. ಹುಣಸೂರು ನಗರದ ಬ್ಯಾಂಕ್ ಆಫ್ ಬರೋಡಾ ಬಳಿ ನಡೆದ ಅಪಘಾತದಲ್ಲಿ (Road accident) ಹುಣಸೂರು ತಾಲೂಕಿನ ರೆಡ್ಡಿಕೊಪ್ಪಲಿನ ರಾಮಶೆಟ್ಟಿ (72) ಮೃತಪಟ್ಟಿದ್ದಾರೆ.

ರಾಮ ಶೆಟ್ಟಿ ಅವರು ತಮ್ಮ ಮೊಮ್ಮಗ ವಿನಯ್‌‌ನನ್ನು ಕೂರಿಸಿಕೊಂಡು ಬೈಕ್‌ನಲ್ಲಿಸ ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಬುಲೆಟ್‌ ಬೈಕ್‌ ಅವರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಹೊಡೆತಕ್ಕೆ ಬೈಕ್‌ ರಾಮ ಶೆಟ್ಟಿ ಅವರ ಬೈಕ್‌ ಉರುಳಿಬಿದದ್ದಿದೆ. ಕೆಳಗೆ ಬಿದ್ದ ರಾಮ ಶೆಟ್ಟಿ ತಲೆ ಮತ್ತು ಕೈಕಾಲುಗಳಿಗೆ ತೀವ್ರವಾಗಿ ಪೆಟ್ಟಾಗಿತ್ತು. ಅವರನ್ನು ಕೂಡಲೇ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ. ಮೃತಪಟ್ಟರು. ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್‌ಗೆ ಕಾರುಗಳು ಡಿಕ್ಕಿಯಾಗಿ ಮೂರು ಸಾವು

ಮಂಗಳವಾರ ಮುಂಜಾನೆ ಪಿರಿಯಾಪಟ್ಟಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಎರಡು ಕಾರುಗಳು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಪ್ರಾಣ ಕಳೆದುಕೊಂಡಿದ್ದರು.

ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದ ಬಳಿ ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಕೆಟ್ಟು ನಿಂತಿತ್ತು. ಮಂಗಳವಾರ ಮುಂಜಾನೆ 4.30ರ ಹೊತ್ತಿಗೆ ಈ ಟ್ರ್ಯಾಕ್ಟರ್​ಗೆ ಎರಡು ಕಾರುಗಳು ಡಿಕ್ಕಿಯಾಗಿವೆ. ಎರಡೂ ಕಾರುಗಳಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ.

ಮುದಾಸೀರ್, ಮುಜಾಯಿದ್​, ಅಹ್ಮದ್​ ಪಾಷಾ ಮೃತಪಟ್ಟವರು. ಇನ್ನು ಗಾಯಗೊಂಡ ಮೂವರ ಹೆಸರು ಗೊತ್ತಾಗಿಲ್ಲ. ಎರಡೂ ಕಾರುಗಳೂ ಪಿರಿಯಾಪಟ್ಟಣದಿಂದ ಹುಣಸೂರಿಗೆ ಪ್ರಯಾಣ ಮಾಡುತ್ತಿದ್ದವು. ಬೆಳಗಿನ ಜಾವದ ಕತ್ತಲಲ್ಲಿ ಸರಿಯಾಗಿ ಕಾಣಿಸದೆ ಟ್ರ್ಯಾಕ್ಟರ್​ಗೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version