Road accident : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರನಿಗೆ ಗಂಭೀರ ಗಾಯ - Vistara News

ಕರ್ನಾಟಕ

Road accident : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರನಿಗೆ ಗಂಭೀರ ಗಾಯ

ರಿಪ್ಪನ್‌ಪೇಟೆ ಸಮೀಪದ ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ (Road accident) ಹಿನ್ನೆಲೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸಿಲುಕಿಕೊಂಡಿದ್ದಾರೆ.

VISTARANEWS.COM


on

Road accident Shivamogga
ಚಲಿಸುತ್ತಿದ್ದ ಬೈಕ್‌ ಮೇಲೆ ಮರ ಬಿದ್ದಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು (Road accident) ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ. ಹಿಂಬದಿಯ ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನೆಲೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸಿಲುಕಿಕೊಂಡಿದ್ದಾರೆ. ತಕ್ಷಣ ಸ್ಥಳೀಯರು ಹಾಗೂ ಹೆದ್ದಾರಿಪುರ ಗ್ರಾಪಂ ಸದಸ್ಯ ಪ್ರವೀಣ್ ಸುಳುಗೋಡು ಇಬ್ಬರನ್ನು ಹೊರತೆಗೆದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ.

ಮಂಜುನಾಥ್ ಎಂಬುವವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿರುವುದರಿಂದ ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಹಿನ್ನಲೆಯಲ್ಲಿ ಮೂಗೂಡ್ತಿ-ತಳಲೆ ಸಂಚಾರ ವ್ಯತ್ಯಯವಾಗಿದ್ದು, ಮರ ತೆರವುಗೊಳಿಸುವ ಕಾರ್ಯಾಚರಣೆ ಇನ್ನಷ್ಟೇ ನಡೆಯಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : Road Accident : ಸ್ಕೂಟಿಯಲ್ಲಿದ್ದ ಅಜ್ಜ ಮೊಮ್ಮಗನನ್ನು ಎರಡು ಕಿ.ಮೀ. ಎಳೆದೊಯ್ದ ಲಾರಿ! ಇಬ್ಬರೂ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

Murder Case: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ಕೊಲೆ ನಡೆದಿದೆ. ವಿಚ್ಛೇದನ ಪಡೆದು ದೂರವಾಗುತ್ತಾಳೆ ಎಂದು ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿದ್ದಾನೆ.

VISTARANEWS.COM


on

Murder Case
Koo

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಪತಿ ಕೊಲೆ ಮಾಡಿರುವ ಘಟನೆ (Murder Case) ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ ನಗರದಲ್ಲಿ ನಡೆದಿದೆ. ಹೆಂಡ್ತಿ ತನ್ನನ್ನು ಬಿಟ್ಟು ಬೇರೆಯಾಗುತ್ತಾಳೆ ಎಂದು ಬೇಸರದಿಂದ ಪತಿ ಚಾಕು ಇರಿದು ಕೊಲೆ ಮಾಡಿದ್ದಾನೆ.

ಶಿಯಾಪತ್ ಉನ್ನಿಸ ಕೊಲೆಯಾದ ಮಹಿಳೆ. ನೂರುಲ್ಲಾ ಪತ್ನಿಯ ಕೊಲೆ ಮಾಡಿದ ಗಂಡ. ಆರೋಪಿ ನೂರುಲ್ಲಾನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಗಂಡ-ಹೆಂಡತಿ ವಿಚ್ಛೇದನ ತೆಗೆದುಕೊಳ್ಳಲು ನಿರ್ಧರಿಸಿದ್ದರು. ಕಳೆದ ಐದು ದಿನಗಳಿಂದ ಹೆಂಡತಿಯಿಂದ ಗಂಡ ದೂರವಿದ್ದ. ಸೋಮವಾರ ಹೆಂಡತಿ ಉನ್ನೀಸಾ ಮನೆ ಖಾಲಿ ಮಾಡುತ್ತಿದ್ದಳು. ಈ ವೇಳೆ ಏಕಾಏಕಿ ಗಂಡ ಬಂದು ಹೆಂಡತಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆ

ರಾಯಚೂರು: ತಾಲೂಕಿನ ಯರಮರಸ್ ಬಳಿಯ ದಂಡ್ ಗ್ರಾಮದಲ್ಲಿ ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸುನೀತಾ (26) ಎಂಬ ಯುವತಿಯ ಶವ ಬೆಡ್ ರೂಮ್‌ನಲ್ಲಿ ರಕ್ತ ಸಿಕ್ತವಾಗಿ ಪತ್ತೆಯಾಗಿದೆ.

ಮೃತ ಯುವತಿ ದೇಹದ‌ ಮೇಲೆ ಚಾಕುವಿನಿಂದ ಹಲ್ಲೆ ಗುರುತು ಪತ್ತೆಯಾಗಿದ್ದು, ಒಲ್ಲದ ಮನಸ್ಸಿನಿಂದ ಮದುವೆಗೆ ಒಪ್ಪಿಕೊಂಡಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗುತ್ತಿದೆ. ಮನೆಯವರ ಮದುವೆ‌ ಪ್ರಸ್ತಾಪಕ್ಕೆ‌ ಯುವತಿ ಮನನೊಂದಿದ್ದಳು. ಜತೆಗೆ ತಾಯಿ‌, ಅಣ್ಣನ ಜತೆ ಮನಸ್ತಾಪ ಇತ್ತು. ಇದೇ ಕಾರಣಕ್ಕೆ ಎಷ್ಟೋ ಬಾರಿ ಯುವತಿ ಮನೆ ಬಿಟ್ಟು ಹೋಗಿದ್ದಳಂತೆ. ಮದುವೆ ಪ್ರಸ್ತಾಪದಿಂದ ಮಾನಸಿಕ‌ ಸ್ಥಿಮಿತ ಕಳೆದುಕೊಂಡಿದ್ದ ಸುನೀತಾ, ಏ.26ರಂದು ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಾಯಿ ಮತ್ತು ಅಣ್ಣ ಹೇಳಿದ್ದಾರೆ.

ಆದರೆ, ತಂಗಿಯ ಮರಣದ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಅಕ್ಕ ದೂರು ದಾಖಲು ಮಾಡಿದ್ದಾಳೆ. ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Continue Reading

ಕೊಪ್ಪಳ

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Lok Sabha Election 2024: ಹಿಂದಿನ ಬಿಜೆಪಿ ಸರ್ಕಾರದ 40 % ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah inaugurated by prajadhwani lok sabha election campaign meeting at kushtagi
Koo

ಕೊಪ್ಪಳ: ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೆ ಪ್ರಧಾನಿ ಯಾರಾಗ್ತಾರೇ? ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ ಎಂದು ಸಿಎಂ ಸಿದ್ದರಾಮಯ್ಯ (Lok Sabha Election 2024) ಹೇಳಿದ್ದಾರೆ.

ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ ಹತಾಶೆಯಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಮೋದಿ ಕಳೆದ ಹತ್ತು ವರ್ಷದಲ್ಲಿ ಪ್ರಮಾಣಿಕ ಆಡಳಿತ ನಡೆಸಲಿಲ್ಲ. ರೈತರಿಗೆ ಜನಪರ ಕಾರ್ಯಕ್ರಮ ಜಾರಿ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಶ್ವಾಸನೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಈವರೆಗೂ ಶಕ್ತಿ ಯೋಜನೆಯಡಿ 200 ಕೋಟಿ ಜನ ಸೌಲಭ್ಯ ಪಡೆದಿದ್ದಾರೆ. ಬಡವರೆಲ್ಲಾ ಕಾಂಗ್ರೆಸ್ ಪರ ಆಗ್ತಾರೆ ಅಂತ ಮೋದಿಯವರು ಅಕ್ಕಿ ನೀಡದೇ ರಾಜ್ಯದ ಜನತೆಗೆ ದ್ರೋಹ ಮಾಡಿದ್ರು. ಹೀಗಾಗಿ ಅಕ್ಕಿ ಬದಲಾಗಿ ಐದು ಕೆಜಿ ಅಕ್ಕಿಯ ಹಣ ಫಲಾನುಭವಿ ಅಕೌಂಟ್‌ಗೆ ಹಾಕುತ್ತಿದ್ದೇವೆ ಎಂದರು.

ದೇಶದಲ್ಲಿ ಹಿಂದುಳಿದ, ದಲಿತ, ಎಸ್‌ಟಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಆದರೆ, ಮೋದಿಯವರು ಮೀಸಲಾತಿ ವಿರುದ್ಧ ಇದ್ದಾರೆ. ಜಾತಿ ಜಾತಿಗಳ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಬಿಜೆಪಿಗರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದರು.

ಕಾಂಗ್ರೆಸ್‌ನ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅಂಬಾನಿ, ಅದಾನಿಯಂತಹ ಬಂಡವಾಳಶಾಹಿ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ಒಪ್ಪದ ಮೋದಿ ಯಾರ ಪರ ಎನ್ನುವುದನ್ನು ದೇಶದ ಜನರಿಗೆ ಮನವರಿಕೆಯಾಗಿದೆ‌ ಎಂದು ಆರೋಪಿಸಿದರು‌‌.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಹತ್ತು ವರ್ಷದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ? ಎಷ್ಟು ಅಭಿವೃದ್ಧಿ ಮಾಡಿದರು? ರೈತರ ಬದುಕಿನಲ್ಲಿ ಬದಲಾವಣೆ ಆಯ್ತಾ? ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ 15 ಲಕ್ಷ ಬಂತಾ? ಬಿಜೆಪಿ ನುಡಿದಂತೆ ನಡೆದಿದ್ದಾರಾ? ಎಂದು ಆಲೋಚಿಸಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಗ್ಯಾರಂಟಿ ಅನುಷ್ಠಾನಗೊಳಿಸಿ, ರಾಜ್ಯದ ಬಡವರ ಹಿತ ಕಾಪಾಡಿದ್ದೇವೆ ಎಂದರು.

ಇಲ್ಲಿನ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನವಲಿಯಲ್ಲಿ ಅಣೆಕಟ್ಟು ಕಟ್ಟಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ ನಮ್ಮ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದು, ಚುನಾವಣೆ ನಂತರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜತೆ ಚರ್ಚೆ ಮಾಡಿ, ರೈತರ ಬದುಕು ರಕ್ಷಿಸುತ್ತೇವೆ ಎಂದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಬಡವರಿಗಾಗಿ ಕಾರ್ಯಕ್ರಮ ರೂಪಿಸಿದ್ದರೆ ಅದು ಕಾಂಗ್ರೆಸ್ ಪಕ್ಷ. ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಗ್ಯಾರಂಟಿಯಿಂದ ನಿಮ್ಮ ಹೊಟ್ಟೆ ತುಂಬುತ್ತಿದೆಯೇ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ನಮ್ಮ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಿದೆವು ಎಂದು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಡಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಮಾತನಾಡಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಈ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ, ಮಾಜಿ ವಿಪ ಸಭಾಪತಿ ವಿ.ಆರ್.ಸುದರ್ಶನ, ವೆಂಕಟರಾಮಯ್ಯ, ವಿಪ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪುರ, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ, ರಾಜ್ಯ ಕಾರ್ಯದರ್ಶಿ ಸಿದ್ದನಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ, ಮುಖಂಡರಾದ ಬಸವರಾಜಸ್ವಾಮಿ ಮಳೇಮಠ, ಅಮರೇಶ ಕರಡಿ, ಕೃಷ್ಣ ಎಂ. ಇಟ್ಟಂಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

DK Shivakumar: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

DCM D K Shivakumar Latest statement in Belagavi
Koo

ಬೆಳಗಾವಿ/ಕೂಡ್ಲಿಗಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಳಗಾವಿಯಲ್ಲಿ ಮತ್ತು ಕೂಡ್ಲಿಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಪ್ರಜ್ವಲ್ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್‌ಡಿಎ ನಾಯಕರು ಉತ್ತರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಪೆನ್‌ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು.

ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ

ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ್ದ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶವಾಗಿದೆ ಎಂದು ಆರೋಪಿಸಿದ್ದ ಬಗ್ಗೆ ಕೇಳಿದಾಗ, ಪ್ರಧಾನಮಂತ್ರಿಗಳು ಯಾವ ರೀತಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಈ ಕಾರಣಕ್ಕೆ ನಮ್ಮ ರಾಜ್ಯಕ್ಕೆ ಜನ ಬಹಳ ಉತ್ಸುಕತೆಯಿಂದ ಬರುತ್ತಿದ್ದಾರೆ. ಈ ಕಾರಣಕ್ಕೆ ವಾಜಪೇಯಿ ಅವರು ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ಭಾರತದ ಇತರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದಿದ್ದರು. ನಿಮಗೆ ಮತ ಸಿಗಲಿಲ್ಲ ಎಂದು ಕರ್ನಾಟಕ ರಾಜ್ಯದ ಬಗ್ಗೆ ಸುಳ್ಳು ಮಾತನಾಡಿದರೆ ಅದು ಭಾರತಕ್ಕೆ ಮಾಡುವ ಅಪಮಾನ. ವಿದೇಶಿಗರು ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ದೇಶದಲ್ಲೇ ಅತ್ಯುತ್ತಮ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆ ಇರುವ ರಾಜ್ಯ ಕರ್ನಾಟಕ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಭರ್ಜರಿ ಜಯ ಸಾಧಿಸಲಿದೆ

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತಿದೆ ಎಂದು ಕೇಳಿದಾಗ, ಕಾಂಗ್ರೆಸ್ ಪಕ್ಷ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಉತ್ತರ ಭಾಗದ ಕ್ಷೇತ್ರಗಳಲ್ಲೂ ಭರ್ಜರಿ ಜಯ ಸಾಧಿಸಲಿದೆ. ಉತ್ತರ ಕ್ಷೇತ್ರಗಳಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಸಂಸತ್ ಸ್ಥಾನಗಳಲ್ಲಿ ನಾವು ಈ ಹಿಂದಿನ ದಾಖಲೆ ಮುರಿಯುತ್ತೇವೆ ಎಂದರು.

Continue Reading

ಕರ್ನಾಟಕ

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Murder Case: ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Murder Case
Koo

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ (Murder Case) ಅಂತ್ಯವಾಗಿರುವುದು ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ವಿಚಾರವಾಗಿ ಇಬ್ಬರ ನಡುವೆ ಜಗಳ ಆರಂಭವಾಗಿದ್ದು, ಪರಸ್ಪರ ಚಾಕು ಇರಿದುಕೊಂಡಿದ್ದರಿಂದ ಮಗಳು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಹಿತಿ(18) ಕೊಲೆಯಾದ ಯುವತಿ. ಪದ್ಮಜಾ (60) ಮಗಳನ್ನು ಕೊಲೆಗೈದ ತಾಯಿ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂಜೆ ಚಾಕುವಿನಿಂದ ಪರಸ್ಪರ ಇರಿದು ಕೊಂಡಿದ್ದರಿಂದ ಮಂಗಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾಳೆ. ತಾಯಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಕೇಸ್‌; ಇಬ್ಬರು ಶಂಕಿತ ಉಗ್ರರಿಗೆ 14 ದಿನ ನ್ಯಾಯಾಂಗ ಬಂಧನ

ಹೆತ್ತ ತಾಯಿಯ ಮೇಲೆಯೇ ಮಗ ಹಲ್ಲೆ; ಅನ್ನ, ನೀರು ಕೊಡದೆ ಹಿಂಸೆ

ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಹೆತ್ತ ಮಕ್ಕಳಿಗೆ ಚಿತ್ರ ಹಿಂಸೆ ಕೊಟ್ಟಿರೋದನ್ನು ನೋಡಿದ್ದೆವು. ಆದರೆ ಈಗ ಹೆತ್ತ ತಾಯಿಯನ್ನೇ ಹೊಡೆಯುವ ಮೂಲಕ ಮಗ ಅಮಾನವೀಯವಾಗಿ ನಡೆದುಕೊಂಡಿರುವುದು ಕಂಡುಬಂದಿದೆ.

ಚಂದ್ರಮ್ಮ (75) ಹಲ್ಲೆಗೊಳಗಾದವರು. ಮುನಿರತ್ನ (45) ಹಲ್ಲೆ ಮಾಡಿದ ಮಗ. ಕತ್ತರಿಗುಪ್ಪೆಯ ಶ್ರೀನಿವಾಸ ನಗರದಲ್ಲಿ ಘಟನೆ ನಡೆದಿದೆ. ಒಂದು ವರ್ಷದಿಂದ ಮನೆಯ ಹೊರಗಡೆ ತಾಯಿ ಮಲಗಿಸುತ್ತಿದ್ದ ಮಗ, ಆಕೆಗೆ ಸರಿಯಾಗಿ ಊಟ ಕೂಡ ನೀಡದೆ ಹಿಂಸೆ ನೀಡುತ್ತಿದ್ದ. ಕಾರಣ ಕೇಳಿದರೆ ಮೂತ್ರ ವಿಸರ್ಜನೆ ಮಾಡಿಕೊಳ್ಳುತ್ತಿರುವ ಕಾರಣ ಹೊರಗೆ ಮಲಗಿಸುತ್ತಿರುವುದಾಗಿ ಮಗ ಹೇಳಿದ್ದಾನೆ.

ಇವರು ತಿರುಪತಿ ಮೂಲದವರಾಗಿದ್ದು, ಮುನಿರತ್ನ ತನ್ನ ಮದುವೆಗೂ ಮುನ್ನ ತಾಯಿಯನ್ನು ಅಡುಗೆ ಮಾಡಲು ಮನೆಗೆ ಕರೆತಂದಿದ್ದ. ಮದುವೆಯಾದ ಬಳಿಕ ತಾಯಿಯನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎನ್ನಲಾಗಿದೆ. ಬೆಂಗಳೂರಿನ ಕತ್ತರಿಗುಪ್ಪೆಯ ಶ್ರೀನಿವಾಸ ನಗರಕ್ಕೆ ಬಂದು 2 ವರ್ಷವಾಗಿದೆ. ಸೊಸೆ ಸ್ವಂತ ತಾಯಿಯಂತೆ ನೋಡಿಕೊಳ್ಳುತ್ತಿದ್ದಳು. ಆದರೆ ಮಗ ತಾಯಿಗೆ ಚಿತ್ರ ಹಿಂಸೆ ನೀಡುತ್ತಿದ್ದ. ಹೀಗಾಗಿ ಮನೆಯ ಅಂಗಳದಲ್ಲಿ ತಾಯಿ ಇರುತ್ತಿದ್ದಳು.

ಇದನ್ನೂ ಓದಿ | Stab wound: ಗರ್ಲ್‌ಫ್ರೆಂಡ್‌ನ ಚುಚ್ಚಿ ಕೊಲ್ಲೋ ಮುನ್ನ ಗೂಗಲ್‌ ಸರ್ಚ್‌ ಮಾಡಿದ್ದ ಹಂತಕ!

ಸೊಸೆ ತಾಯಿಯನ್ನು ನೋಡಿಕೊಳ್ಳುತ್ತಿದ್ದಳು ಎನ್ನುವ ಕಾರಣಕ್ಕೆ ಹೆಂಡತಿಯ ಜತೆಗೂ ಜಗಳವಾಡುತ್ತಿದ್ದ. 2 ದಿನದ ಹಿಂದೆ ಹೆಂಡತಿ ಜಗಳವಾಡಿ ತವರುಮನೆಗೆ ಹೋಗಿದ್ದಳು. ಹೀಗಾಗಿ ತಾಯಿ ಚಂದ್ರಮ್ಮನ ಮೇಲೆ ಮಗ ಹಲ್ಲೆ ಮಾಡಿದ್ದಾನೆ, 2 ದಿನದಿಂದ ತಾಯಿಗೆ ಅನ್ನ, ನೀರು ನೀಡಿಲ್ಲ. ನಶೆಯಲ್ಲಿ ಇಲ್ಲದ ಸಮಯದಲ್ಲೂ ಇದೆ ಸ್ಥಿತಿಯಲ್ಲಿ ಮುನಿರತ್ನ ಇರುತ್ತಿದ್ದ ಎನ್ನಲಾಗಿದೆ.

Continue Reading
Advertisement
KKR vs DC
ಕ್ರೀಡೆ4 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ13 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ20 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ40 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ42 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ52 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ1 hour ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌