Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ - Vistara News

ಕರ್ನಾಟಕ

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Road Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ಭೀಕರ ಅಪಘಾತ ನಡೆದಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ (Road Accident) ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ.

ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಕಾರು ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ.

ಈಜಲು ತೆರಳಿದ್ದ ಯುವಕ ನೀರು ಪಾಲು

ಕೊಡಗು: ಕೊಡಗಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದ್ದು, ನೀರಿನಲ್ಲಿ ಈಜಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದು, ಯುವಕನಿಗಾಗಿ ಮುಂದುವರೆದ ಶೋಧಕಾರ್ಯ ನಡೆಯುತ್ತಿದೆ.

ಮೈಸೂರು ಮೂಲದ ಶಶಿ (30) ನೀರುಪಾಲಾದ ಯುವಕ. ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಯುವಕ-ಯುವತಿಯರ ತಂಡ ಬಂದಿತ್ತು. ಕುಶಾಲನಗರ ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು, ಸ್ಥಳೀಯರು ಹಾಗೂ ಅಗ್ನಿಶಾಮ‌ಕ ಸಿಬ್ಬಂದಿಯಿಂದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Road Accident

ಬೆಳಗಾವಿ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಏಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ. ತಾಯಿ ಮಗ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

MUDA site scandal: ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಜಮೀನು ಸ್ವಾಧೀನವಾಗಿತ್ತು, ಅದಕ್ಕೆ ಪರ್ಯಾಯವಾಗಿ ಸೈಟ್‌ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

VISTARANEWS.COM


on

MUDA site scandal
Koo

ರಾಮನಗರ: ಬಿಜೆಪಿ ಸರ್ಕಾರ ಅವಧಿಯಲ್ಲೇ ಸಿಎಂ ಹೆಂಡತಿಯವರ ಜಮೀನು ಸ್ವಾಧೀನ ಆಗಿದೆ. ಅವರು ಡಿನೋಟಿಫಿಕೇಷನ್ ಮಾಡಿಕೊಂಡಿಲ್ಲ. ಸಿಎಂ ಹೆಂಡತಿ ಯಾಕೆ ಅಕ್ರಮ (MUDA site scandal) ಮಾಡುತ್ತಾರೆ. ಅವರ ಆಸ್ತಿ ಇತ್ತು, ಅದು ಹೋಗಿದೆ. ಪರ್ಯಾಯ ಸೈಟ್ ಕೊಡಬೇಕು, ಕೊಟ್ಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರು ಮುಡಾದಲ್ಲಿ ಅಕ್ರಮ ಆರೋಪಗಳ ಬಗ್ಗೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿ, ಅವರ ಜಮೀನು ಪಡೆದ ಹಿನ್ನೆಲೆಯಲ್ಲಿ ಇನ್ಸೆಂಟೀವ್ ಸ್ಕೀಮ್ ಅಡಿ ಮುಡಾ ಸೈಟ್‌ ನೀಡಿದೆ. ಡಿನೋಟಿಫೈ ಮಾಡದೆ ಇನ್ಸೆಂಟಿವ್ ತಗೊಂಡಿರೊದ್ದಕ್ಕೆ ಖುಷಿ ಪಡಬೇಕು. ಅವರು ಅರ್ಹರಿದ್ದಾರೆ, ತೆಗೆದುಕೊಂಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಅಧಿಕಾರಿಗಳ ಸಸ್ಪೆಂಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಮುಖ್ಯಮಂತ್ರಿಗಳು ಭ್ರಷ್ಟಾಚಾರ ವಿರುದ್ಧವಾಗಿ ಕಠಿಣವಾಗಿ ಇರುತ್ತಾರೆ. ಯಾರೆ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು, ತನಿಖೆ ಆಗಬೇಕು ಅಂತ ಹೇಳಿದ್ದಾರೆ. ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ. ನನಗೂ ಆ ನಾಗೇಂದ್ರ ವಿಚಾರದಲ್ಲಿ ಡೌಟ್ ಇತ್ತು. ಈ ಬಗ್ಗೆ ವಿಚಾರಿಸಿದಾಗ ನಮ್ಮ ಮಂತ್ರಿಗಳು ಅದರಲ್ಲಿ ಭಾಗಿಯಾಗಿಲ್ಲ ಎಂಬುವುದು ತಿಳಿದುಬಂದಿದೆ ಎಂದರು.

ಬೇರೆ ಯಾರೂ ಅಕ್ರಮ ಮಾಡಿಲ್ಲ ಅಂತ ಹೇಳೋದಿಲ್ಲ. ಆದರೆ ಮಿನಿಸ್ಟರ್ಸ್‌ ಯಾರೂ ಭಾಗಿಯಾಗಿಲ್ಲ. ಆ ವಿಚಾರದಲ್ಲಿ ನನಗೆ ಸಮಾಧಾನ ಇದೆ. ಅವಶ್ಯಕತೆ ಇದ್ದರೆ ಎಲ್ಲರನ್ನೂ ವಿಚಾರಣೆ ಮಾಡುತ್ತಾರೆ‌, ಎಷ್ಟೋ ಸಲ ನಮ್ಮನ್ನೇ ವಿಚಾರಿಸಿಲ್ಲವೇ ಎಂದು ಹೇಳಿದರು.

ಇದನ್ನೂ ಓದಿ | Karnataka CM: ಸಿದ್ದು- ಡಿಕೆಶಿ ಇಬ್ಬರ ಜಗಳ ಮೂರನೆಯವರಿಗೆ ಲಾಭ? ಆ ಮೂರನೆಯವರು ಇವರೇ!

ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಯಾರೂ ಚರ್ಚೆ ಮಾಡದಂತೆ ಕೈ ನಾಯಕರಿಗೆ ಸೂಚನೆ ನೀಡಿದ್ದೀರಿ ಎಂಬ ಪ್ರಶ್ನೆ ಕೇಳುತ್ತಿದ್ದಂತೆ ಉತ್ತರಿಸದೆ ಡಿಸಿಎಂ ನಿರ್ಗಮಿಸಿದರು.

ಪತ್ನಿಗೆ ಕಾನೂನು ಪ್ರಕಾರವೇ ಮುಡಾ ಸೈಟ್‌; ಬಿಜೆಪಿ ಕಾಲದಲ್ಲೇ ನೀಡಲಾಗಿತ್ತು ಎಂದ ಸಿದ್ದರಾಮಯ್ಯ

MUDA site Cm Siddaramaiah says his wife was given MUDA site during BJP regimescandal

ಬೆಂಗಳೂರು: ಮೈಸೂರಿನಲ್ಲಿ ಮುಡಾ ನಿವೇಶನ ಹಂಚಿಕೆ ಹಗರಣದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರದ ಆದೇಶ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೂ ಮುಡಾ ಸೈಟ್‌ (MUDA site scandal) ಹಂಚಿಕೆಯಾಗಿದೆ ಎಂಬ ವಿಷಯ ತಿಳಿದುಬಂದಿದೆ. ಪತ್ನಿಗೆ ನೀಡಿರುವ 50:50 ಅನುಪಾತದ ನಿವೇಶನಗಳ ಬಗ್ಗೆ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ಇದ್ದ ಜಾಗವನ್ನು 1997ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದು, ಆ ಭೂಮಿಗೆ 2021ರಲ್ಲಿ ಪರಿಹಾರ ಕೊಟ್ಟಿತ್ತು ಎನ್ನಲಾಗಿದೆ. ಈ ಬಗ್ಗೆ ನಗರದಲ್ಲಿ ಮಂಗಳವಾರ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ನಿವೇಶನ ಹಂಚಿಕೆ ಬಿಜೆಪಿಯವರ ಕಾಲದಲ್ಲಿ ಆಗಿದ್ದು, ನನ್ನ ಹೆಂಡತಿಗೆ ಈ ಹಿಂದೆಯೇ ಸೈಟ್ ಹಂಚಲಾಗಿತ್ತು. 3 ಎಕರೆ 16 ಗುಂಟೆ ಜಮೀನು ನನ್ನ ಹೆಂಡತಿ ಹೆಸರಲ್ಲಿತ್ತು. ನನ್ನ ಬಾಮೈದ ತೆಗೆದಕೊಂಡಿದ್ದ ಜಾಗವನ್ನು ನನ್ನ ಹೆಂಡತಿಗೆ ದಾನ ಕೊಟ್ಟಿದ್ದ. ಅದನ್ನು ನಾನು ಅಧಿಕಾರದಲ್ಲಿ ಇದ್ದಾಗ ಖರೀದಿ ಮಾಡಿರಲಿಲ್ಲ‌. ಕಾನೂನಿನ ಪ್ರಕಾರವೇ ನಮಗೆ ಸೈಟ್‌ ಹಂಚಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಪ್ರಕಾರವೇ ನಮಗೆ 50:50 ನಿವೇಶನ ಕೊಡುವುದಾಗಿ ಮುಡಾದವರು ಹೇಳಿದ್ದರು. ಮಲ್ಲಿಕಾರ್ಜುನ್ ಎಂಬ ನನ್ನ ಬಾಮೈದ ಹರಿಶನ ಕುಂಕುಮ ಕೊಡುವಾಗ ನನ್ನ ಪತ್ನಿಗೆ ಗಿಫ್ಟ್ ಕೊಟ್ಟಿದ್ದ. ಆದರೆ ಅದನ್ನು ಮುಡಾದವರು ಸೈಟ್ ಮಾಡಿ ಹಂಚಿಬಿಟ್ಟರು. ಬಳಿಕ ನಮಗೆ ಜಮೀನು ಇಲ್ಲದಂತಾಯಿತು. ಅದಕ್ಕೆ ಮುಡಾದವರು ಬೇರೆ ಕಡೆ 50:50 ಸೈಟ್‌ ಕೊಟ್ಟಿದ್ದಾರೆ, ಇದು ತಪ್ಪಾ ಎಂದು ಸಿಎಂ ಪ್ರಶ್ನಿಸಿದ್ದಾರೆ.

Continue Reading

ಹಾಸನ

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

Wild Animals Attack : ಕರೆಯದೇ ಮದುವೆಗೆ ಬಂದ ಕೋತಿಯೊಂದು ರಂಪಾಟವನ್ನೇ ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರ ಮೇಲೂ ಎರಗಿದೆ. ಮತ್ತೊಂದು ಕಾಡಾನೆ, ಕರಡಿ ಪ್ರತ್ಯಕ್ಷಗೊಂಡು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

wild animals Attack
Koo

ಹಾಸನ: ಮದುವೆ ಮನೆಗೆ ನುಗ್ಗಿದ ಕೋತಿಯೊಂದು ರಂಪಾಟ (Wild Animals Attack) ನಡೆಸಿದೆ. ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ್ದಲ್ಲದೇ, ಊಟ ಮಾಡಲು ಹೋದವರಿಗೂ ತೊಂದರೆ ಕೊಟ್ಟಿದೆ. ಇಷ್ಟು ಮಾತ್ರವಲ್ಲದೇ ಮದುವೆಗೆ ಬಂದವರಿಗೆ ಮಂಗ (Monkey Attack) ಕಚ್ಚಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಘಟನೆ ನಡೆದಿದೆ.

wild Animals Attack

ಹಿರಿಸಾವೆಯ ನುಗ್ಗೆಹಳ್ಳಿ ರಸ್ತೆಯಲ್ಲಿ ನಡೆಯುತ್ತಿದ್ದ ಮದುವೆಗೆ ಕರೆಯದೇ ಬಂದ ಕೋತಿ ಕಾಟಕ್ಕೆ ಜನರು ಹೈರಣಾದರು. ಡೈನಿಂಗ್ ಹಾಲ್‌ನಲ್ಲಿ ಊಟ ಮಾಡುತ್ತಿದ್ದವರಿಗೂ ಕಿರಿಕಿರಿ ಮಾಡಿ, ಊಟ ಕಸಿದುಕೊಂಡಿದೆ. 8-10 ಮಂದಿ ಮೇಲೆ ದಾಳಿ ಮಾಡಿ ಕಚ್ಚಿದೆ. ಸುಶೀಲಮ್ಮ, ಲೀಲಾವತಿ, ನಿಂಗೇಗೌಡ, ಗೌರಮ್ಮ, ಗಿರಿಜಮ್ಮ , ತಿಮ್ಮೇಗೌಡ, ಗಿರಿಗೌಡ ಎಂಬುವವರಿಗೆ ಕೋತಿ ಕಚ್ಚಿದ್ದು, ಗಾಯಾಳುಗಳಿಗೆ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುತ್ತಮುತ್ತಲಿನ ಹಳ್ಳಿಯಲ್ಲಿ ಓಡಾಡುತ್ತಿರುವ ಕೋತಿ ಹಿಡಿದು ಸ್ಥಳಾಂತರ ಮಾಡಲು ಆಗ್ರಹಿಸಿದ್ದಾರೆ.

wild animals Attack

ಇದನ್ನೂ ಓದಿ: Leopard attack : ರಸ್ತೆ ಮೇಲೆ ಸತ್ತಂತೆ ಬಿದ್ದಿದ್ದ ಚಿರತೆ; ಮುಟ್ಟಲು ಹೋದ ಬೈಕ್‌ ಸವಾರ, ಕ್ಯಾಬ್‌ ಚಾಲಕನ ಮೇಲೆ ದಾಳಿ

wild Animals Attack

ವಿಜಯನಗರದ ಎಪಿಎಂಸಿ ಆವರಣಕ್ಕೆ ಎಂಟ್ರಿ ಕೊಟ್ಟ ಕರಡಿ

ಇತ್ತೀಚೆಗೆ ಕರಡಿಗಳ ಹಾವಳಿ ಹೆಚ್ಚಾಗಿದೆ. ವಿಜಯನಗರದ ಹಗರಿಬೊಮ್ಮನ ಹಳ್ಳಿಯಲ್ಲಿರುವ ಎಪಿಎಂಸಿ (APMC) ಆವರಣದಲ್ಲಿ ಕರಡಿಯೊಂದು ಪತ್ತೆಯಾಗಿದೆ. ಮಂಗಳವಾರ ಬೆಳಗಿನ ಜಾವ ಕರಡಿ ಓಡಾಟ ಕಂಡು ರೈತರು ಹೌಹಾರಿದ್ದಾರೆ. ಕರಡಿ ಓಡಾಟವು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಹಿಂದೆಯೂ ನಾನಾ ಕಡೆ ಕರಡಿ ಪ್ರತ್ಯಕ್ಷವಾಗಿತ್ತು.

wild animals Attack

ಕೊಡಗಿನಲ್ಲಿ ಆಟೋ ಜಖಂ ಮಾಡಿದ ಕಾಡಾನೆ

ಕೊಡಗಿನಲ್ಲಿ ಆನೆ -ಮಾನವ ಸಂಘರ್ಷ ಮುಂದುವರಿದಿದೆ. ಮನೆ ಸಮೀಪ ನಿಲ್ಲಿಸಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದೆ. ನಾಪೋಕ್ಲು ಸಮೀಪದ ಕಕ್ಕಬ್ಬೆಯ ಗ್ರಾಮದ ನಾಲಡಿ ವಾಟೆಕಾಡು ಎಂಬಲ್ಲಿ ಘಟನೆ ನಡೆದಿದೆ. ವಾಟೆಕಾಡು ನಿವಾಸಿ ದೇವಯ್ಯ ಎಂಬುವರ ಆಟೋವನ್ನು ಜಖಂಗೊಳಿಸಿ, ಸಮೀಪದ ತೋಟದಲ್ಲೂ ದಾಂಧಲೆ ನಡೆಸಿ ಕಾಲ್ಕಿತ್ತಿದೆ. ಆನೆ ಹಾವಳಿಯಿಂದ ಮುಕ್ತಿ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

wild Animals Attack

ಕೊಪ್ಪಳದಲ್ಲಿ ನಿಲ್ಲದ ಕರಡಿ ಆತಂಕ

ಕಳೆದ ಒಂದು ವಾರದಿಂದ ಕೊಪ್ಪಳ ಸುತ್ತಮುತ್ತ ಕರಡಿ ಪ್ರತ್ಯಕ್ಷಗೊಳ್ಳುತ್ತಿದೆ. ಇದೀಗ ಬಸ್‌ನಲ್ಲಿ ಹೋಗುತ್ತಿರುವವರಿಗೆ ಕರಡಿಯೊಂದು ದರ್ಶನ ಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಿ – ಮಾಟಲದಿನ್ನಿ ಮಧ್ಯೆ ಕರಡಿ ಕಾಣಿಸಿಕೊಂಡಿದೆ. ಮಂಗಳವಾರ ಮುಂಜಾನೆ ಬಸ್‌ವೊಂದಕ್ಕೆ ಕರಡಿಯು ಅಡ್ಡಬಂದಿದೆ. ಇದನ್ನೂ ಪ್ರಯಾಣಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Alert: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ (Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು (KSRTC Recruitment 2024). ಈ ಕುರಿತಾದ ವಿವರ ಇಲ್ಲಿದೆ (Job Alert).

ಎಲ್ಲೆಲ್ಲಿ?

ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ. ಆಯಾ ಬಸ್‌ ಡಿಪೋಗಳು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಅಲ್ಲದೆ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ. ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ಇದನ್ನು ಗಮನಿಸಿ

ಹೊರಗುತ್ತಿಗೆ ನೇಮಕಾತಿ ಇದಾಗಿರುವುದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ: ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading

ಕರ್ನಾಟಕ

Bike Accident: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು, ಇಬ್ಬರಿಗೆ ಗಾಯ

Bike Accident: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ಅಪಘಾತ ನಡೆದಿದೆ. ಟಿವಿಎಸ್‌ ಎಕ್ಸೆಲ್‌ ಹಾಗೂ ಹೀರೋ ಸ್ಪ್ಲೆಂಡರ್ ಪ್ಲಸ್‌ ಮುಖಾಮುಖಿ ಡಿಕ್ಕಿಯಾಗಿ ಸವಾರರೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Bike Accident
Koo

ಬಾಗಲಕೋಟೆ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಾಯಗಳಾಗಿರುವ ಘಟನೆ (Bike Accident) ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಖಂಡಿ ಬಳಿ ನಡೆದಿದೆ. ಸಿದ್ದರಾಮಯ್ಯ ಸಂಗಯ್ಯ ಹಿಡಕಲ್ಲ (60) ಮೃತ ದುರ್ದೈವಿ.

ಟಿವಿಎಸ್‌ ಸೂಪರ್ ಎಕ್ಸೆಲ್‌ನಲ್ಲಿ ಜಮಖಂಡಿಯಿಂದ ಮಧುರಖಂಡಿಗೆ ಸಿದ್ದರಾಮಯ್ಯ ಹೊರಟಿದ್ದರು. ಈ ವೇಳೆ ತೇರದಾಳದಿಂದ ಜಮಖಂಡಿ ಕಡೆ ಬರುತ್ತಿದ್ದ ತಾಯಿ, ಮಗನಿದ್ದ ಹೀರೋ ಸ್ಪ್ಲೆಂಡರ್ ಪ್ಲಸ್‌ ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಸ್ಥಳದಲ್ಲೇ ಎಕ್ಸೆಲ್‌ ಸವಾರ ಸಿದ್ದರಾಮಯ್ಯ ಹಿಡಕಲ್ಲ ಮೃತಪಟ್ಟಿದ್ದಾರೆ.

ಮತ್ತೊಂದು ಬೈಕ್‌‌‌ನಲ್ಲಿದ್ದ ಗಾಯಾಳುಗಳು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Student Death : ಅಮ್ಮನ ಸೀರೆಯಲ್ಲಿ ನೇಣು ಬಿಗಿದುಕೊಂಡಳು ಅಪ್ರಾಪ್ತೆ

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

ಬೆಂಗಳೂರು: ವಾಟರ್ ಟ್ಯಾಂಕರ್ ವಾಹನಕ್ಕೆ ಯುವಕನೊರ್ವ (Road Accident) ಬಲಿಯಾಗಿದ್ದಾನೆ. ಕಿರಣ್ ಕುಮಾರ್ (21) ಮೃತಪಟ್ಟವನು. ಬೆಂಗಳೂರಿನ ಕೊತ್ತನೂರು ದಿಣ್ಣೆ ಆರ್‌ಬಿಐ ಲೇಔಟ್‌ನಲ್ಲಿ ಬೆಳಗ್ಗೆ 9.30ಕ್ಕೆ ಈ ಅಪಘಾತ ಸಂಭವಿಸಿದೆ.

ಬೇಕರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಕಿರಣ್‌ ಕುಮಾರ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಟ್ಯಾಂಕರ್‌ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಕಿರಣ್‌ ತಲೆ ಮೇಲೆ ಟ್ಯಾಂಕರ್‌ ಹರಿದಿದೆ. ಅಪಘಾತದಲ್ಲಿ ಕಿರಣ್‌ ಕುಮಾರ್‌ ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಎಸ್‌ ಲೇಔಟ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಾಟರ್‌ ಟ್ಯಾಂಕರ್‌ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Self Harming: ಅಳಿಯನಿಂದ ಕೊಲೆಯಾದ ಪುತ್ರ, ಅಗಲಿಕೆ ಸಹಿಸದೆ ತಾಯಿ ಆತ್ಮಹತ್ಯೆ

ಸ್ಕೂಟರ್‌ಗೆ ಗುದ್ದಿದ ಕಾರು; ಹಾರಿ ಬಿದ್ದ ವೃದ್ಧ ಸ್ಪಾಟ್‌ ಡೆತ್‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೆ ವೃದ್ಧನೊರ್ವ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಡಿವೈಡರ್ ಬಳಿ ರಸ್ತೆ ದಾಟುವಾಗ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಹಾರಿ ಬಿದ್ದ ವೃದ್ಧ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು ಗ್ರಾಮಾಂತರದ ದಾಬಸ್ ಪೇಟೆ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮೇಶ್ವರ ಗೇಟ್ ಬಳಿ ಅಪಘಾತ ನಡೆದಿದೆ. ನಾರನಹಳ್ಳಿ ಗ್ರಾಮದ ಮಾಳಪ್ಪ (80) ಮೃತ ದುರ್ದೈವಿ. ರಾಮೇಶ್ವರ ಗೇಟ್‌ನಲ್ಲಿ ರಸ್ತೆ ದಾಟುವಾಗ ದಾಬಸ್ ಪೇಟೆ ಕಡೆಯಿಂದ ಬಂದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಾಳಪ್ಪ ಸಾವನ್ನಪ್ಪಿದ್ದಾರೆ. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Continue Reading
Advertisement
Narendra Modi
ದೇಶ17 mins ago

Narendra Modi: ಪ್ರಜಾಪ್ರಭುತ್ವ, ಜಾತ್ಯತೀತತೆ, ಏಳಿಗೆಯೇ ನಮ್ಮ ಆದ್ಯತೆ; ಸಂಸತ್ತಿನಲ್ಲಿ ಮೋದಿ ಹೇಳಿಕೆ

MUDA site scandal
ಕರ್ನಾಟಕ19 mins ago

MUDA site scandal: ಮುಡಾ ನಿವೇಶನ ಹಗರಣ; ಸಿಎಂ ಹೆಂಡತಿ ಯಾಕೆ ಅಕ್ರಮ ಮಾಡುತ್ತಾರೆ ಎಂದ ಡಿಕೆಶಿ!

Rahul Dravid
ಕ್ರಿಕೆಟ್23 mins ago

Rahul Dravid : ಕ್ರಿಕೆಟ್ ಬುದ್ಧ ನಕ್ಕು ನಲಿದಾಡಿದಾಗ, ಅರಿವಿಲ್ಲದೇ ಕೆನ್ನೆಗೆ ಜಾರಿತ್ತು ಭಾವಾತಿಶಯದ ಅಶ್ರುಧಾರೆ – ಸಲಾಂ ಜಾಮಿ ಭಾಯ್!

SEBI
ವಾಣಿಜ್ಯ24 mins ago

SEBI: ಅದಾನಿ ವರದಿ: ಹಿಂಡನ್‌ಬರ್ಗ್‌ಗೆ ಸೆಬಿಯಿಂದ ಶೋಕಾಸ್ ನೋಟಿಸ್

wild animals Attack
ಹಾಸನ35 mins ago

Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

IND vs ZIM
ಕ್ರೀಡೆ54 mins ago

IND vs ZIM: ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡಲ್ಲಿ ದಿಢೀರ್​ ಬದಲಾವಣೆ ಮಾಡಿದ ಬಿಸಿಸಿಐ

Job Alert
ಉದ್ಯೋಗ1 hour ago

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Narendra Modi
ದೇಶ1 hour ago

Narendra Modi Live: ಕೆಲವೇ ಕ್ಷಣಗಳಲ್ಲಿ ಸಂಸತ್‌ನಲ್ಲಿ ಮೋದಿ ಭಾಷಣ; ಲೈವ್‌ ಇಲ್ಲಿ ವೀಕ್ಷಿಸಿ

Akhilesh Yadav
ದೇಶ1 hour ago

Akhilesh Yadav: ಎಲ್ಲ ಕ್ಷೇತ್ರ ಗೆದ್ದರೂ ಇವಿಎಂಗಳನ್ನು ನಂಬಲ್ಲ ಎಂದ ಅಖಿಲೇಶ್‌ ಯಾದವ್;‌ ಮತ್ತೆ ವಿವಾದ

Viral Video
Latest2 hours ago

Viral Video: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ23 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌