Site icon Vistara News

Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ

Road Accident

Road Accident

ಕೋಲಾರ/ಬೆಂಗಳೂರು: ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದ ಬಳಿ ಲಾರಿ ಹಾಗೂ ಈಚರ್ ನಡುವೆ ಮುಖಾಮುಖಿ (Road Accident) ಡಿಕ್ಕಿಯಾಗಿದ್ದು, ಈಚರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಹಾಗೂ ಸಹಾಯಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಜ್ಜುಗುಜ್ಜಾದ ಲಾರಿ ಮುಂಭಾಗ

ಮುಳಬಾಗಿಲು ಹಾಗೂ ಶ್ರೀನಿವಾಸಪುರ ಹೆದ್ದಾರಿಯಲ್ಲಿ ಮುಂಜಾನೆ ಸುಮಾರು 3 ಗಂಟೆಯ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಕರ ರಸ್ತೆ ಅಪಘಾತ

ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧೆ ಬಲಿ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಬಳಿ ತಡರಾತ್ರಿ 12.30ರ ಸುಮಾರಿಗೆ ಅಪರಿಚಿತ ವಾಹನವೊಂದು ವೃದ್ಧೆಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡ ವೃದ್ಧೆ (65) ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತವೆಸಗಿದ ವಾಹನದ ಮಾಹಿತಿ ಲಭ್ಯವಾಗಿಲ್ಲ. ಮೈಕೋ‌ ಲೇಔಟ್ ಸಂಚಾರಿ ಠಾಣೆಯಲ್ಲಿ ಹಿಟ್ ಆ್ಯಂಡ್‌ ರನ್ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಮುಂದುವರಿಸಲಾಗಿದೆ.

ಕ್ಷಣಾರ್ಧದಲ್ಲಿ ಸುಟ್ಟು ಭಸ್ಮವಾದ ಟೆಂಪೋ ವಾಹನ

ಬೆಂಗಳೂರಿನ ಶೇಷಾದ್ರಿಪುರಂ 2ನೇ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಟೆಂಪೋಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಳಗ್ಗೆ 5.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವಾಹನ ಸುಟ್ಟು ಕರಕಲಾಗಿದೆ. ಚಾಲಕನೊಬ್ಬ ರಾತ್ರಿ ಮನೆ ಬಳಿ ಟೆಂಪೋ ಪಾರ್ಕಿಂಗ್ ಮಾಡಿ ಹೋಗಿದ್ದರು.

ಸುಟ್ಟು ಕರಕಲಾದ ವಾಹನ

ಮುಂಜಾನೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಆದರೆ ಸಿಬ್ಬಂದಿ ಬರುವ ವೇಳೆಗೆ ಪೂರ್ತಿ ಉರಿದು ಹೋಗಿದೆ. ಶೇಷಾದ್ರಿಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕನಿಗೆ ಡಿಕ್ಕಿ ಹೊಡೆದ ಕಾರು; ಪಾರಾಗಿದ್ದೇ ಪವಾಡ

ಬೆಂಗಳೂರಿನ ವರ್ತೂರು ರಸ್ತೆಯಲ್ಲಿ ಕಾರೊಂದು ಡಿಕ್ಕಿ ಹೊಡೆದಿದ್ದು, ಬಾಲಕನೊಬ್ಬ ಪವಾಡ ಸದೃಶವಾಗಿ ಪಾರಾಗಿದ್ದಾನೆ. ಬಾಲಕ ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ಚಲಿಸುತ್ತಿದ್ದ ಕಾರಿಗೆ ದಿಢೀರ್ ಅಡ್ಡ ಬಂದಿದ್ದಾನೆ. ಎಡಬದಿಯಿಂದ ಮುಂದೆ ಸಾಗುತ್ತಿದ್ದಂತೆ, ಬಲಗಡೆಯಿಂದ ಕಾರು ಬಂದಿದೆ.

ಬಾಲಕ ಪಾರಾದ ಚಿತ್ರಣ

ಇದನ್ನೂ ಓದಿ: Road accident : ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿಯಾಗಿ ಇಬ್ಬರ ದುರ್ಮರಣ; ಟ್ರ್ಯಾಕ್ಟರ್‌ಗೆ ಬೈಕ್‌ ಬಡಿದು ಪಿಡಿಒ ಸಾವು

ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಬಾಲಕ ರಸ್ತೆ ಮೇಲೆ ಬೀಳುತ್ತಿದ್ದಂತೆ ಚಾಲಕ ಬ್ರೇಕ್‌ ಹಾಕಿ ನಿಲ್ಲಿಸಿದ್ದರಿಂದ ಅಪಾಯ ತಪ್ಪಿದೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿ ತಾನೇ ಎದ್ದು ಬಂದಿದ್ದಾನೆ. ಕಾರು ಚಾಲಕನ ಸಮಯಪ್ರಜ್ಞೆಯಿಂದ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಅಪಘಾತದ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version