Site icon Vistara News

Road Accident: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲಿ ಪ್ರಾಣಬಿಟ್ಟ ಮೂವರು ಯುವಕರು

#image_title

ದಾವಣಗೆರೆ: ಇಲ್ಲಿನ ಆನಗೋಡ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ (Road Accident) ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ.

ಘಟನೆಯಲ್ಲಿ ಪರಶುರಾಮ್ (24), ಸಂದೇಶ (23), ಶಿವು (26) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಯುವಕರು ದಾವಣಗೆರೆಯ ರಾಮನಗರದ ನಿವಾಸಿಗಳೆಂದು ತಿಳಿದುಬಂದಿದೆ. ದಾವಣಗೆರೆ ತಾಲೂಕಿನ ಕಾಟಿಹಳ್ಳಿ ಗ್ರಾಮದ ದೇವಿ ಕಾರ್ಯದಲ್ಲಿ ಊಟ ಮಾಡಿ ವಾಪಸ್ಸಾಗುವ ವೇಳೆ ಅಪಘಾತ ನಡೆದಿದೆ.

ಇದನ್ನೂ ಓದಿ: Valentine Week: ಪ್ಯಾನ್‌ ಇಂಡಿಯಾ ಸಿನಿಮಾವಾಗಿ ಮತ್ತೆ ರಿಲೀಸ್‌ ಆದ ʻದಿಲ್‌ವಾಲೆ ದುಲ್ಹನಿಯಾ ಲೇ ಜಾಯೇಂಗೆʼ: ವ್ಯಾಲೆಂಟೈನ್ಸ್ ವೀಕ್‌ಗೆ ಬಂಪರ್‌!

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಯುವಕರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version