Site icon Vistara News

Road Accident: ಕಳಸದಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು; ಹೊಸೂರು ರಸ್ತೆಯಲ್ಲಿ ಅಪಘಾತಕ್ಕೆ ಹಾರಿಹೋಯಿತಾ ಮೂವರ ಪ್ರಾಣ

#image_title

ಚಿಕ್ಕಮಗಳೂರು: ಕಳಸ ತಾಲೂಕಿನ ಗಂಗನಕುಡಿಕೆ ಗ್ರಾಮದಲ್ಲಿ (Road Accident) ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ. ಪ್ರಪಾತದಿಂದ ಉರುಳಿ ಮನೆಯ ಗೋಡೆಗೆ ಗುದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪ್ರವಾಸಿಗರು ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಹೊರಟಿದ್ದರು. ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು ನೇರ ಪ್ರಪಾತಕ್ಕೆ ಬಿದ್ದಿದ್ದಾರೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ರಕ್ಷಿಸಲಾಗಿದೆ. ಸ್ವಲ್ಪ ಯಾಮಾರಿದರು ಮನೆಯ ಮೇಲೆ ಕಾರು ಬಿದ್ದು ಪ್ರಾಣಹಾನಿ ಸಂಭವಿಸುತ್ತಿತ್ತು.

ಈ ಸಂಬಂಧ ಕಳಸ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಪ್ರಪಾತಕ್ಕೆ ಬಿದ್ದ ಕಾರನ್ನು ಮೇಲಕ್ಕೆ ಎತ್ತುವ ಕೆಲಸ ಮಾಡಿದ್ದಾರೆ.

ಉರುಳಿ ಬಿದ್ದ ಸಿಮೆಂಟ್‌ ಮಿಕ್ಸರ್‌ ಲಾರಿ

ಹೊರನಾಡಿನಲ್ಲಿ ಉರುಳಿ ಬಿದ್ದ ಸಿಮೆಂಟ್ ಮಿಕ್ಸರ್ ಲಾರಿ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿನಲ್ಲಿ ಕಾಂಕ್ರೀಟ್ ಸುರಿಯುತ್ತಿದ್ದಾಗ ಸಿಮೆಂಟ್ ಮಿಕ್ಸರ್ ಲಾರಿಯೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಪವಾಡ ಸದೃಶ ರೀತಿಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅನ್ನಪೂರ್ಣೇಶ್ವರಿ ದೇವಾಲಯದ ಕೆಳಭಾಗದ‌‌ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು ಭಾರೀ ದುರಂತವೊಂದು ತಪ್ಪಿದೆ. ಅಪಘಾತದ ದೃಶ್ಯ ಕಂಡು ಸ್ಥಳೀಯರು ಕ್ಷಣಕಾಲ ಆತಂಕಕ್ಕೆ ಒಳಗಾಗಿದ್ದರು.

ಹೊಸೂರು ರಸ್ತೆಯಲ್ಲಿ ಭೀಕರ ಅಪಘಾತ

ಬೆಂಗಳೂರಿನ ಹೊಸೂರು ಜಂಕ್ಷನ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗದಿಂದ ಬಂದ ಟ್ರಕ್‌ವೊಂದು ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಹಾಗು ಕಾರುಗಳ ಮೇಲೆ ಹರಿದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಶನಿವಾರ (ಮಾ.25) ಬೆಳಗ್ಗೆ 8 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Murder case: ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್‌ ಶವ ಪತ್ತೆ; ಕೊಲೆ ಶಂಕೆ

ಟ್ರಕ್‌ ಚಾಲಕನ ನಿಯಂತ್ರಣಕ್ಕೆ ಸಿಗದೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪರಿಣಾಮ ಡಿವೈಡರ್‌ನಲ್ಲಿದ್ದ ಕಂಬಿಗಳೆಲ್ಲವೂ ಚೆಲ್ಲಾಪಿಲ್ಲಿ ಆಗಿವೆ. ಬಸ್ ಸಿಸಿಟಿವಿಯಲ್ಲಿ ಅಪಘಾತದ ಭೀಕರ ದೃಶ್ಯ ಸೆರೆ ಆಗಿದೆ. ಅತಿ ವೇಗದ ಪರಿಣಾಮ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version