Road closed | ಅಣ್ಣ-ತಮ್ಮಂದಿರ ಜಗಳದಿಂದ ರಸ್ತೆಗೆ ಮುಳ್ಳುಕಂಟಿ; ದಲಿತ ಕಾಲೋನಿ ಸಂಪರ್ಕ ಕಡಿತ - Vistara News

ಕರ್ನಾಟಕ

Road closed | ಅಣ್ಣ-ತಮ್ಮಂದಿರ ಜಗಳದಿಂದ ರಸ್ತೆಗೆ ಮುಳ್ಳುಕಂಟಿ; ದಲಿತ ಕಾಲೋನಿ ಸಂಪರ್ಕ ಕಡಿತ

ದಲಿತರ ಕಾಲೋನಿ ಸಂಪರ್ಕಿಸುವ ರಸ್ತೆಗೆ ಮುಳ್ಳುಕಂಟಿ ಹಾಕಿ ರಸ್ತೆ ಬಂದ್‌ (Road closed) ಮಾಡಿರುವ ಘಟನೆ ನಡೆದಿದೆ. ಅಣ್ಣ-ತಮ್ಮಂದಿರ ಜಗಳದಿಂದ ರಸ್ತೆ ಸಂಪರ್ಕ ಕಡಿತ ಮಾಡಿದ್ದು ದಲಿತರು ಊರೊಳಗೆ ಹೋಗಲು ಆಗದೆ ಸಮಸ್ಯೆ ಅನುಭವಿಸುತ್ತಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗದಗ: ಇಲ್ಲಿನ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಸವರ್ಣೀಯರು ದಲಿತರ ಕಾಲೋನಿ ಸಂಪರ್ಕಿಸುವ ರಸ್ತೆಗೆ ಮುಳ್ಳುಕಂಟಿ ಹಾಕಿ ರಸ್ತೆ ಬಂದ್ (Road closed) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Road closed

ಹುಲ್ಲೂರು ಗ್ರಾಮದಿಂದ ಅರಹುಣಸಿಗೆ ಸಂಪರ್ಕ ಮಾಡುವ ಪಕ್ಕದ ರಸ್ತೆಗೆ ಬೇಲಿ ಹಾಕಿದ್ದಾರೆ. ಇದರಿಂದ ಸುಮಾರು 400 ಜನ ದಲಿತರು ಊರೊಳಗೆ ಹೋಗಲು ಆಗದೆ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

Road closed

ದಲಿತರು ಓಡಾಡುವ ರಸ್ತೆ ಜಾಗ ನಮಗೆ ಸೇರಿದ್ದು ಎಂದು ರೈತ ಬಸನಗೌಡ ಚೌರೆಡ್ಡಿ ಎಂಬುವವರು ದಾರಿಗೆ ಬೇಲಿ ಹಾಕಿದ್ದಾರೆ. ಆದರೆ 1975ರಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಜಾಗ ಇದು ಎಂದು ದಲಿತರು ವಾದ ಮಾಡುತ್ತಿದ್ದಾರೆ. 1974-75ರಲ್ಲಿ ದಲಿತರ ಕಾಲೋನಿಗಾಗಿ ಸುಮಾರು ಎರಡು ಎಕರೆ 38 ಗುಂಟೆ ಜಾಗವನ್ನು ಸರ್ಕಾರದವರು ಖರೀದಿ ಮಾಡಿದ್ದರು. ಆದರೆ, ಇದರಲ್ಲಿ 3 ಗುಂಟೆ ಜಾಗ ತಮ್ಮದೆಂದು ಚೌರೆಡ್ಡಿ ಕುಟುಂಬ ವಾದ ಮಾಡುತ್ತಿದೆ.

Road closed

3 ಗುಂಟೆ ಜಾಗಕ್ಕಾಗಿ ಚೌರೆಡ್ಡಿ ಕುಟುಂಬದ ಅಣ್ಣ-ತಮ್ಮಂದಿರು ಜಗಳ ಮಾಡುತ್ತಿದ್ದು, ಜಗಳದ ನೆಪ ಹೇಳಿ ಆ ದಾರಿಯನ್ನು ಬಂದ್ ಮಾಡಿ ದರ್ಪ ತೋರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಲಿತರು ಇದನ್ನು ಪ್ರಶ್ನೆ ಮಾಡಿದರೆ ಆ ಜಾಗ ನಮ್ಮದು ಎಂದು ರೈತ ಬಸನಗೌಡ ಚೌರೆಡ್ಡಿ ವಾದ ಮಾಡುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ರೋಣ ತಹಸೀಲ್ದಾರ್‌ ಭೇಟಿ ನೀಡಿದ್ದು, ಜಾಗದ ಮಾಲೀಕರ ಮನವೊಲಿಕೆಗೆ ಯತ್ನಿಸಿದ್ದಾರೆ. ಆದರೆ, ಪಟ್ಟುಬಿಡದ ಕುಟುಂಬಸ್ಥರು ಬೇಲಿ ತೆಗೆಯುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಇತ್ತ ಊರೊಳಗೆ ಹೋಗಲು ಆಗದೆ ದಲಿತ ಸಮುದಾಯದವರು ಕಂಗಾಲಾಗಿದ್ದಾರೆ.

ಇದನ್ನೂ ಓದಿ | Bull attack | ಸೈಕಲ್‌ನಲ್ಲಿ ಹೋಗುತ್ತಿದ್ದ 7ರ ಬಾಲಕನ ಮೇಲೆ ಗೂಳಿ ದಾಳಿ: ಕೊಂಬಿನಿಂದ ಎತ್ತಿ ಎಸೆದ ಬೀಡಾಡಿಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿಕ್ಷಣ

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

2nd PUC Exam 2 Result: ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

VISTARANEWS.COM


on

2nd PUC Exam 2 Result tomorrow
Koo

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು (KSEAB) ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (PUC Exam 2024) ಅನ್ನು ನಡೆಸಿತ್ತು. ಇಂದು (ಮಂಗಳವಾರ – ಮೇ 21) ರಂದು ಫಲಿತಾಂಶವನ್ನು ಪ್ರಕಟ (2nd PUC Exam 2 Result) ಮಾಡುವುದಾಗಿ ಹೇಳಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ ಮೇಲೆ ಕ್ಲಿಕ್‌ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು:

  • karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.
    ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)
    ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ. ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಸಹ ಸ್ಪಷ್ಟನೆ ನೀಡಿದ್ದು, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದೆ.

ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ಗಾಗಿ (CET Result) ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಸ್ಪಷ್ಟನೆ ನೀಡಿದೆ. ಈಗ ಮಂಗಳವಾರ ಪಿಯು ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಿಇಟಿ ಫಲಿತಾಂಶದ ದಿನಾಂಕವನ್ನು ಕೆಇಎ ಪ್ರಕಟಿಸಬೇಕಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಸ್ಪಷ್ಟನೆ ನೀಡಿದ್ದು, ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುವುದು ಎಂದು ಹೇಳಲಾಗಿದೆ. ಹೀಗಾಗಿ ಎರಡನೇ ಪರೀಕ್ಷೆಯ ಫಲಿತಾಂಶಕ್ಕಾಗಿ ಕೆಇಎ ಕಾಯುವುದು ಅನಿವಾರ್ಯವಾಗಿದೆ.

ಅಧಿಕಾರಿಗಳ ಎಡವಟ್ಟು

ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರತಿ ವರ್ಷ ವೃತ್ತಿಪರ ಕೋಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಆದರೆ, ಈ ಬಾರಿಯ ಸಿಇಟಿ ಪರೀಕ್ಷೆ ಗೊಂದಲದ ಗೂಡಾಗಿತ್ತು. ಪರೀಕ್ಷೆಯಲ್ಲಿ 4 ವಿಷಯಗಳಲ್ಲಿ ಸುಮಾರು 50ಕ್ಕೂ ಹೆಚ್ಚು ಔಟ್‌ ಆಫ್‌ ಸಿಲಬಸ್‌ (Out of Syllabus) ಪ್ರಶ್ನೆಗಳನ್ನು ಕೇಳಲಾಗಿತ್ತು. ರಸಾಯನ ಶಾಸ್ತ್ರ ವಿಷಯದಲ್ಲಿ 6, ಭೌತಶಾಸ್ತ್ರ ವಿಷಯದಲ್ಲಿ 5, ಪ್ರಶ್ನೆಗಳು, ಜೀವಶಾಸ್ತ್ರ ಪರೀಕ್ಷೆಯಲ್ಲಿ 11 ಪ್ರಶ್ನೆಗಳು, ಗಣಿತದಲ್ಲಿ 9 ಪ್ರಶ್ನೆಗಳು ಪಠ್ಯಕ್ರಮದಿಂದ ಹೊರತಾಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದವು. ಬಳಿಕ ಆ 50 ಪ್ರಶ್ನೆಗಳನ್ನು ಕೈಬಿಟ್ಟು ಉಳಿದ ಪ್ರಶ್ನೆಗಳ ಮೌಲ್ಯ ಮಾಪನ ಮಾಡಲಾಗಿದೆ.

ಇದನ್ನೂ ಓದಿ: Public Exam: 5,8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌; ರಾಜ್ಯ ಸರ್ಕಾರದ ಮಹತ್ವ ನಿರ್ಧಾರ

ಸದ್ಯ ಸಿಇಟಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೌಲ್ಯಮಾಪನ ಮಾಡಿ ಸಿದ್ಧಪಡಿಸಿದೆ. ಇದರ ಜತೆಗೆ ಶೇ. 50ರಷ್ಟು ದ್ವಿತೀಯ ಪಿಯುಸಿ ಅಂಕ ಮತ್ತು ಬಿಎಸ್‌ಸಿ ಸೀಟು ಹಂಚಿಕೆಗಾಗಿ ಜಿಕೆವಿಕೆ ನಡೆಸುವ ಪ್ರಾಯೋಗಿಕ ಪರೀಕ್ಷೆ ಫಲಿತಾಂಶದ ಅಂಕ ಸೇರಿಸಬೇಕಾಗಿರುವುದರಿಂದ ಕೆಇಎ ಅದಕ್ಕಾಗಿ ಕಾಯುತ್ತಿದೆ. ಈ ಬಾರಿ 3.49 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದರು. ಪ್ರತಿ ವರ್ಷ ಮೇ, ಜೂನ್‌ನಲ್ಲಿ ಪರೀಕ್ಷೆ ನಡೆದರೆ ಈ ಬಾರಿ ಏಪ್ರಿಲ್‌ನಲ್ಲೇ ಪರೀಕ್ಷೆ ನಡೆಸಲಾಗಿತ್ತು.

Continue Reading

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Prajwal Revanna Case: ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿರುವ ಎಸ್‌ಐಟಿ, ಈ ಕೂಡಲೇ ಸಂಸದನ ಪಾಸ್‌ ಪೋರ್ಟ್‌ ರದ್ದು ಮಾಡಬೇಕು ಎಂದು ಕೋರಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ | Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

ಪ್ರಜ್ವಲ್‌ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Nikhil Kumaraswamy

ಬೆಂಗಳೂರು: ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್‌ ಕುಮಾರಸ್ವಾಮಿ, ಸಂತ್ರಸ್ತೆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡಿಯೂ ತೋರಿಸಿಲ್ಲ. ರಾಜಕಾರಣಕ್ಕಾಗಿ ಈ ರೀತಿ ಮಾಡುವುದು ಎಷ್ಟು ಸರಿ? ಇಡೀ ರಾಜ್ಯದ ಜನಕ್ಕೆ ಈ ರೀತಿಯ ತೋರಿಸಿದ್ದು ಯಾರು? ಅವರ ಬಗ್ಗೆ ಯಾಕೆ ತನಿಖೆ ಆಗುತ್ತಿಲ್ಲ? ಇದರಲ್ಲಿ ಯಾರ ಪಾತ್ರ ಇದೆಯೋ , ರಾಜ್ಯ ಸರ್ಕಾರದ ಜವಾಬ್ದಾರಿ ಇದೆ. ಇದು ಇವತ್ತು ರಾಷ್ಟ್ರದ ಮಟ್ಟದಲ್ಲಿ ಸುದ್ದಿ ಆಗಿದೆ. ಇದಕ್ಕೆ ಉತ್ತರ ಸಿಗಬೇಕು. ತನಿಖೆ ಪಾರದರ್ಶಕವಾಗಿ ಆಗಬೇಕು ಅಲ್ವಾ‌? ಎಂದು ನಿಖಿಲ್‌ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ | MLC Election: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಎನ್. ರವಿಕುಮಾರ್

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ ಹಿನ್ನೆಲೆಯಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಎಸ್ಐಟಿ ತನಿಖೆ ಎದುರಿಸುವುದು ಸೂಕ್ತ. ಘಟ‌ನೆ ಆದ ದಿನವೇ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಬೇಕು ಅಂತ. ಎಸ್‌ಐಟಿ ತನಿಖೆ ಮಾಡುತ್ತಲಿದೆ. ಹೀಗಾಗಿ ಸಂಸದರು ಎಸ್ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸಬೇಕು. ಇದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಪ್ರಜ್ವಲ್‌ ನನ್ನ ಜತೆಯಂತೂ ಸಂಪರ್ಕದಲ್ಲಿಲ್ಲ ಎಂದು ನಿಖಿಲ್‌ ಹೇಳಿದರು.

Continue Reading

ಕರ್ನಾಟಕ

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Self Harming: ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Self Harming
Koo

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್ ಬರೆದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

theft case

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
2nd PUC Exam 2 Result tomorrow
ಶಿಕ್ಷಣ13 mins ago

2nd PUC Exam 2 Result: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಇಂದು; ಸಿಇಟಿ ಫಲಿತಾಂಶ ಯಾವಾಗ?

Karnataka Weather Forecast
ಮಳೆ42 mins ago

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Tea Tips
ಆರೋಗ್ಯ42 mins ago

Tea Tips: ಹಾಲಿನ ಚಹಾ ಬದಲು ಬ್ಲ್ಯಾಕ್‌ ಟೀ ಕುಡಿಯಿರಿ!

Sambita Patra
ದೇಶ1 hour ago

Sambit Patra: ಭಗವಾನ್‌ ಜಗನ್ನಾಥನೇ ಮೋದಿಯ ಭಕ್ತ ಎಂದ ಬಿಜೆಪಿ ನಾಯಕ; ಭುಗಿಲೆದ್ದ ವಿವಾದ

Anti Terrorism Day
ದೇಶ2 hours ago

Anti Terrorism Day: ಇಂದು ಭಯೋತ್ಪಾದನಾ ವಿರೋಧಿ ದಿನ; ಏನು ಈ ದಿನದ ಹಿನ್ನೆಲೆ?

Dina Bhavishya
ಭವಿಷ್ಯ2 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ; ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ

Prajwal Revanna Case
ಕರ್ನಾಟಕ7 hours ago

Prajwal Revanna Case: ಪ್ರಜ್ವಲ್ ರೇವಣ್ಣ ಪಾಸ್‌ ಪೋರ್ಟ್ ರದ್ದು ಮಾಡಲು ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

Mobile
ದೇಶ7 hours ago

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿ 15 ವರ್ಷದ ಅಕ್ಕನನ್ನೇ ಗರ್ಭಿಣಿ ಮಾಡಿದ 13 ವರ್ಷದ ಬಾಲಕ!

Army Officer
Lok Sabha Election 20248 hours ago

101ನೇ ವಯಸ್ಸಿನಲ್ಲೂ ‘ಕರ್ತವ್ಯ’ ಮರೆಯದೆ ವೋಟ್‌ ಮಾಡಿದ ನಿವೃತ್ತ ಯೋಧ; ಸೆಲ್ಯೂಟ್‌ ಎಂದರು ಜನ

Congress Guarantee
ಪ್ರಮುಖ ಸುದ್ದಿ8 hours ago

Congress Guarantee: ಗ್ಯಾರಂಟಿ ಯೋಜನೆಗಳಿಗೆ ಒಂದು ವರ್ಷಕ್ಕೆ ಸರ್ಕಾರ ಮಾಡಿದ ಖರ್ಚು ಎಷ್ಟು ಸಾವಿರ ಕೋಟಿ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌