ಶಿವಮೊಗ್ಗ: ನಿರಂತರ ಮಳೆಯಿಂದಾಗಿ ಬೀಸನಗದ್ದೆ ಗ್ರಾಮದ ರಸ್ತೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಸೈದೂರು ಗ್ರಾ.ಪಂ. ವ್ಯಾಪ್ತಿಯ ಬೀಸನಗದ್ದೆ ರಸ್ತೆಯನ್ನು ಆರು ತಿಂಗಳ ಹಿಂದಷ್ಟೇ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಅಭಿವೃದ್ಧಿ ಮಾಡಿದ್ದರು. ಈ ಮೂಲಕ ಕೋಟ್ಯಂತರ ರೂಪಾಯಿ ಕಾಮಗಾರಿಯು ನೀರಿನಲ್ಲಿ ಹೋಮ ಮಾಡಿದಂತೆ ವ್ಯರ್ಥವಾಗಿದೆ.
ಆದರೆ, ಒಂದೇ ಒಂದು ಮಳೆಗೆ ರಸ್ತೆಯ ನಿಜ ಬಣ್ಣ ಬಯಲಾಗಿದೆ. ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ ಹಾಗೂ ಕಳಪೆ ಎಂಬುದು ಗೊತ್ತಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದು, ಅಧಿಕಾರಿಗಳ ತಪ್ಪು ನಿರ್ಧಾರವೂ ಕಾರಣ ಎಂಬ ದೂರುಗಳು ಕೇಳಿಬರುತ್ತಿದೆ.
ರಸ್ತೆಯ ಮಧ್ಯೆ ಭಾಗದಲ್ಲಿ ಪೈಪ್ ಅಳವಡಿಸುವ ಬದಲು ಕಾಂಕ್ರೀಟ್ ವಾಲ್ ಮಾಡುವಂತೆ ಗ್ರಾಮಸ್ಥರು ಈ ಹಿಂದೆ ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳು ಮಾತು ಕೇಳಲಿಲ್ಲ. ಅವೈಜ್ಞಾನಿಕ ಕಳಪೆ ಕಾಮಗಾರಿ ವಿರುದ್ಧ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ | Weather Report: ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಣೆ