Site icon Vistara News

Robotic Technology | ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಮ್ಯಾಕೋ ರೋಬೊಟಿಕ್‌ ತಂತ್ರಜ್ಞಾನ

Robotic Technology ಫೋರ್ಟಿಸ್‌ ಆಸ್ಪತ್ರೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಫೋರ್ಟಿಸ್ ಆಸ್ಪತ್ರೆಯೂ ಇದೇ ಮೊದಲ ಬಾರಿಗೆ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಮ್ಯಾಕೋ ರೋಬೊಟಿಕ್‌ (Robotic Technology) ತಂತ್ರಜ್ಞಾನವನ್ನು ಪರಿಚಯಿಸಿದೆ. ಈ ತಂತ್ರಜ್ಞಾನದ ಮೂಲಕ ಕೇವಲ ಒಂದು ತಿಂಗಳಲ್ಲಿ 50ಕ್ಕೂ ಹೆಚ್ಚು ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮೂಳೆ ಮತ್ತು ಜಂಟಿ ಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ನಾರಾಯಣ ಹುಲ್ಸೆ, ಮ್ಯಾಕೋ ರೋಬೊಟಿಕ್ ಆರ್ಮ್ ಅಸಿಸ್ಟೆಡ್ ಟೆಕ್ನಾಲಜಿ ಬಳಸಿ ಬಹು ಅಸ್ವಸ್ಥತೆಯಿಂದ ಬಳಲುತ್ತಿದ್ದ 66 ವರ್ಷದ ಆಫ್ರಿಕನ್ ರೋಗಿಗೆ ಹೊಸ ಜೀವನ ನೀಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಈ ಆಫ್ರಿಕನ್‌ ರೋಗಿಯು ಕಳೆದ 15 ವರ್ಷಗಳಿಂದ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಕಾಲಕ್ರಮೇಣ ಅವರ ಆರೋಗ್ಯ ಸ್ಥಿತಿ ಕ್ಷೀಣಿಸತೊಡಗಿತು. ಮೊಣಕಾಲು ನೋವಿನ ಜತೆಗೆ ಅಧಿಕ ರಕ್ತದೊತ್ತಡ, ಆಸ್ತಮಾ, ಜನ್ಮಜಾತ ಹೃದಯ ದೋಷಗಳು ಅವರನ್ನು ಬಹುವಾಗಿ ಕಾಡಿತ್ತು. ರೋಗಿಯು ಸಂಧಿವಾತದಿಂದಾಗಿ ಅವರ ಎರಡೂ ಮೊಣಕಾಲುಗಳು ಸಂಪೂರ್ಣವಾಗಿ ಹಾನಿಗೊಳಗಾದವು. ರೋಗಿಯು ಫೊರ್ಟಿಸ್‌ ಆಸ್ಪತ್ರೆಗೆ ದಾಖಲಾದ ಬಳಿಕ ಅವರ ಎರಡೂ ಮೊಣಕಾಲುಗಳಿಗೆ ಪ್ರತ್ಯೇಕವಾಗಿ 3 ದಿನಗಳ ಅಂತರದಲ್ಲಿ ಶಸ್ತ್ರಚಿಕಿತ್ಸೆಯನ್ನು ನಡೆಸಿದೆವು. 3D ವರ್ಚುವಲ್ ಮಾದರಿ ಹಾಗೂ ಶಸ್ತ್ರಚಿಕಿತ್ಸೆ ನಡೆಸಲು ನೂತನ ತಂತ್ರಜ್ಞಾನವಾದ ಮ್ಯಾಕೋ ರೋಬೊಟಿಕ್ ತಂತ್ರಜ್ಞಾನವು ನಮಗೆ ಸಹಾಯ ಮಾಡಿತು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ರೊಬೊಟಿಕ್-ಆರ್ಮ್ ಮೂಳೆಯನ್ನು ಸರಿಯಾದ ಕೋನದಲ್ಲಿ ವಿಭಜಿಸಲು ನೆರವು ನೀಡಿತು. ಈ ಮೂಲಕ ಅವರಿಗೆ ಸೂಕ್ತ ರೀತಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ, ಅದರಲ್ಲಿ ಯಶಸ್ವಿ ಕಂಡೆವು ಎಂದು ವಿವರಿಸಿದರು.

ವೇಗ ಚೇತರಿಕೆ ಸಾಧ್ಯ
ಸಾಂಪ್ರದಾಯಿಕ ಮೊಣಕಾಲು ಅಥವಾ ಸೊಂಟ ಬದಲಿ ಶಸ್ತ್ರಚಿಕಿತ್ಸೆಗಳು ಕಳೆದ ಮೂರು ದಶಕಗಳಲ್ಲಿ ರೋಗಿಗಳ ಜೀವನದ ಗುಣಮಟ್ಟವನ್ನು ಗಣನೀಯವಾಗಿ ಸುಧಾರಿಸುತ್ತಾ ಬಂದಿದೆ. ಆದರೆ, ಈ ನೂತನ ಮ್ಯಾಕೋ ರೋಬೊಟಿಕ್‌ ತಂತ್ರಜ್ಞಾನವೂ ಮೂಳೆಗಳ ಜೋಡಣೆಯ ನಿಖರತೆಯನ್ನು ಇನ್ನಷ್ಟು ಸ್ವಷ್ಟಗೊಳಿಸಿದೆ. ತಂಡಾದ ಮೂಳೆ ಮತ್ತು ಮೃದು ಅಂಗಾಂಶಗಳ ಸಂರಕ್ಷಣೆ, ಶಸ್ತ್ರಚಿಕಿತ್ಸೆಯ ನಂತರದ ಅಸ್ವಸ್ಥತೆಯನ್ನು ಕಡಿಮೆ ಮಾಡಿದೆ. ವೇಗವಾಗಿ ಚೇತರಿಕೆಯಾಗುವುದರ ಜತೆಗೆ ರಕ್ತದ ನಷ್ಟವೂ ತಗ್ಗಲಿದೆ. ಇದೊಂದು ಅತ್ಯಂತ ಪ್ರಯೋಜನಕಾರಿ ತಂತ್ರಜ್ಞಾನವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನ ಫೋರ್ಟಿಸ್ ಹಾಸ್ಪಿಟಲ್‌ನ ಬಿಸಿನೆಸ್ ಹೆಡ್ ಅಕ್ಷಯ್ ಒಲೇಟಿ, ಮ್ಯಾಕೋ ಎಂಬ ರೋಬೊಟಿಕ್ ಪ್ಲಾಟ್‌ಫಾರ್ಮ್‌ ಅನ್ನು ಪರಿಚಯಿಸಲಾಗಿದ್ದು, ಒಂದೇ ವೇದಿಕೆಯಲ್ಲಿ ಮೊಣಕಾಲು ಮತ್ತು ಸಂಪೂರ್ಣ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆಯನ್ನು ಅತ್ಯಂತ ಸುಲಭಗೊಳಿಸಿದೆ ಎಂದಿದ್ದಾರೆ.

ಇದನ್ನೂ ಓದಿ | KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದ್ದೆ ಸರ್ಕಾರ!

Exit mobile version