Site icon Vistara News

Ron Election Results: ರೋಣ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜಿ.ಎಸ್‌ ಪಾಟೀಲ ಕೊರಳಿಗೆ ಗೆಲುವಿನ ಹಾರ

ron assembly constituency winner congress gs patil

ಗದಗ: ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪಾಟೀಲ 94,865 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕಳಕಪ್ಪ ಬಂಡಿ 70,175 ಮತ ಪಡೆದು, 24,690 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ಈ ಬಾರಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಎಸ್. ಪಾಟೀಲ, ಜೆಡಿಎಸ್‌ ಅಭ್ಯರ್ಥಿಯಾಗಿ ಮುಗಧಮ್‌ ಸಾಬ್‌ ಮುಧೋಳ, ಆಪ್‌ನಿಂದ ಆನೇಕಲ್‌ ದೊಡ್ಡಯ್ಯ, ಬಿಜೆಪಿಯಿಂದ ಕಳಕಪ್ಪ ಬಂಡಿ ಕಣದಲ್ಲಿದ್ದರು.

2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜಿ.ಕಳಕಪ್ಪ ಬಂಡಿ 83,735 ಮತ ಪಡೆದು ಗೆಲುವು ಸಾಧಿಸಿದ್ದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಗುರುಪಾದಗೌಡ ಸಂಗನಗೌಡ ಪಾಟೀಲ 7334 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು.

ಇಲ್ಲಿ ಇರುವ ಒಟ್ಟು ಮತಗಳು 221,059. ಪುರುಷರು 111,475 ಹಾಗೂ ಸ್ತ್ರೀಯರು 109,570.

Exit mobile version