ಕೋಲಾರ : ಕೋಲಾರ ಜಿಲ್ಲೆಯ (kolar News) ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಮಲಗಿದ್ದವರ ಮೇಲೆ ಚಾವಣಿ ಕುಸಿದು (Roof collapse) ಬಿದ್ದಿದೆ. 7 ಮಂದಿಗೆ ಗಾಯವಾಗಿದ್ದು, ಓರ್ವ ಬಾಲಕಿ ಸ್ಥಿತಿ ಗಂಭೀರವಾಗಿದೆ.
ಶ್ರೀನಿವಾಸ್, ಹೇಮಶ್ರಿ, ಶಿವ, ನಾಗಮ್ಮ, ಮುನಿವೆಂಕಟಮ್ಮ ಮಕ್ಕಳಾದ, ಮೇಘನಾ (6), ವೈಶಾಲಿ (7) ಗಾಯಾಳುಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶ್ರೀನಿವಾಸ್ ಮತ್ತು ಕುಟುಂಬದವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ತಡರಾತ್ರಿ ಏಕಾಏಕಿ ಕಲ್ಲು ಚಪ್ಪಡಿ ಮನೆಯ ಚಾವಣಿಯು ಕುಸಿದಿದೆ.
ಕುಸಿದ ರಭಸಕ್ಕೆ ಬಾಲಕಿ ಮೇಘನಾಗೆ ಬಡಿದಿದೆ. ಸದ್ಯ ಈಕೆ ಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ಗೆ ದಾಖಲು ಮಾಡಲಾಗಿದೆ. ಮುನಿವೆಂಕಟಮ್ಮರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಶ್ರೀನಿವಾಸ್ ಸೇರಿದ ಉಳಿದ ನಾಲ್ವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಸ್ಥಳಕ್ಕೆ ನಂಗಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಾವಣಿ ತೆರವು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಫೈಬರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಇರುವ ಫೈಬರ್ ಫ್ಯಾಕ್ಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹೊತ್ತಿ ಉರಿದಿದೆ. ರಾಘ ವಿಶ್ವೇಶ್ವರ ಹೆಗಡೆ ಮಸಿಗದ್ದೆ ಅವರಿಗೆ ಸೇರಿದ್ದ ಫೈಬರ್ ಫ್ಯಾಕ್ಟರಿ ಇದಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.