ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Sindhuri vs Roopa) 1 ಕೋಟಿ ರೂಪಾಯಿ ಪರಿಹಾರ ಕೇಳಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಬಹಿರಂಗ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ಮೂಲಕ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಒಟ್ಟು 21 ಅಂಶಗಳನ್ನು ಉಲ್ಲೇಖಿಸಿ ಲೀಗಲ್ ನೋಟಿಸ್ ನೀಡಿದ್ದು, ಕ್ಷಮೆ ಕೇಳದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸ್‌ನಲ್ಲಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಡಿ.ರೂಪಾ ಅವರು ಫೇಸ್‌ಬುಕ್‌ನಲ್ಲಿ ಮಾಡಿದ್ದ ಭ್ರಷ್ಟಾಚಾರ ಆರೋಪಗಳು ಹಾಗೂ ಪೋಟೊಗಳನ್ನು ಶೇರ್ ಮಾಡಿರುವುದು ಸೇರಿ ಎಲ್ಲವನ್ನೂ ಉಲ್ಲೇಖಿಸಿ ನೋಟಿಸ್ ನೀಡಲಾಗಿದೆ.
ನೋಟಿಸ್ ತಲುಪಿದ 24 ಗಂಟೆಯೊಳಗೆ ಫೇಸ್‌ಬುಕ್ ಪೇಜ್‌ನಲ್ಲಿ ಬಹಿರಂಗ ಕ್ಷಮಾಪಣೆ ಕೋರಬೇಕು, ಇಲ್ಲವಾದಲ್ಲಿ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.