Site icon Vistara News

Contaminated Water: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಬಿಡುಗಡೆ

contaminated water compensation release

ರಾಯಚೂರು: ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು (Contaminated Water) ಸೇವಿಸಿ ಐದು ವರ್ಷದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಕ್ಕೆ ಮುಖ್ಯಮಂತ್ರಿ ನಿಧಿಯಿಂದ 5 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗಿದೆ. ಸಿಎಂ ಜಂಟಿ ಕಾರ್ಯದರ್ಶಿ ಪಿ.ಎ‌. ಗೋಪಾಲ ಈ ಆದೇಶವನ್ನು ಹೊರಡಿಸಿದ್ದಾರೆ.

ಕಲುಷಿತ ನೀರು ಸೇವಿಸಿ ರೇಖಲಮರಡಿ ಗ್ರಾಮದ 5 ವರ್ಷದ ಬಾಲಕ‌ ಹನುಮೇಶ್ (5) ಮೃತಪಟ್ಟಿದ್ದ. ಬಾಲಕನ ಸಾವಿನ ಕುರಿತು ತನಿಖೆ ಮಾಡಿದಾಗ ಕಲುಷಿತ ನೀರಿನಿಂದ ಮೃತಪಟ್ಟಿರುವುದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿತ್ತು. ಸದ್ಯ ಹಣ ಬಿಡುಗಡೆಗೊಳಿಸಿ ಸರ್ಕಾರದಿಂದ ಆದೇಶ ಮಾಡಲಾಗಿದೆ.

ಜಿಪಂ ಸಿಇಒಗೆ ನೋಟಿಸ್‌

ಲಿಂಗಸುಗೂರು ತಾಲೂಕು ಗೋರೆಬಾಳ ಹಾಗೂ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕ ಮೃತಪಟ್ಟಿದ್ದಲ್ಲದೆ, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ತನಿಖೆಯಿಂದ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿಗಳ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯಿತಿ ಸಿಇಒಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಂಗಳವಾರ (ಮೇ 30) ನೋಟಿಸ್‌ ನೀಡಿತ್ತು.

ಜನರ ಆರೋಗ್ಯ ದೃಷ್ಟಿಯಿಂದ ಶುದ್ಧ ನೀರು ಪೂರೈಕೆ ಮಾಡುವುದು ಹಾಗೂ ನೀರಿನ ಮೂಲಗಳಾದ ಕೊಳವೆ ಬಾವಿ, ಕೆರೆ, ಬಾವಿ ಹಾಗೂ ಹಳ್ಳಗಳ ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ಅವಶ್ಯಕ. ಆದರೆ, ಜಲ ಕಾಯ್ದೆ 1974ರ ಸೆಕ್ಷನ್‌ 24, 25 ರ ಪ್ರಕಾರ ಜಲಮೂಲಗಳನ್ನು ಕಲುಷಿತಗೊಳಿಸುವುದು ಶಿಕ್ಷಾರ್ಹ ಅಪರಾಧ. ಹೀಗಾಗಿ ಘಟನೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ವಿರುದ್ಧ ಈವರೆಗೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುವುದಕ್ಕೆ 7 ದಿನಗಳೊಳಗೆ ಸಮಾಜಾಯಿಷಿ ನೀಡಿ ಎಂದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಅವರಿಗೆ ನೋಟಿಸ್‌ ನೀಡಲಾಗಿತ್ತು.

ಇದನ್ನೂ ಓದಿ | Weather Report: ಇನ್ನೈದು ದಿನ ಭಾರಿ ಮಳೆ; ಇರಲಿದೆ ಗುಡುಗಿನ ಅಬ್ಬರ, ಬಿಸಿಲೂ ಬರಲಿದೆ: ಎಲ್ಲೆಲ್ಲಿ ಹೇಗಿದೆ?

ಕಲುಷಿತ ನೀರು ಸೇವನೆಯಿಂದ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಹನುಮೇಶ್‌ (5) ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಅದೇ ಲಿಂಗಸುಗೂರು ತಾಲೂಕಿನ ಗೋರೆಬಾಳದಲ್ಲಿ ಅನೇಕ ಮಂದಿ ಅಸ್ವಸ್ಥಗೊಂಡಿದ್ದರು. ಇದರ ಬೆನ್ನಲ್ಲೇ ತಾಲೂಕಿನ ಜೂಲಗುಡ್ಡ ಗ್ರಾಮದಲ್ಲೂ ಸೋಮವಾರ 8 ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದರು. ಹೀಗಾಗಿ ಈಗ ಸರ್ಕಾರ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

Exit mobile version