Site icon Vistara News

Karnataka Election: ಮೊಳಕಾಲ್ಮೂರಿನಲ್ಲಿ 6.39 ಕೋಟಿ ರೂ. ಮೌಲ್ಯದ ಚಿನ್ನ, ವಜ್ರಾಭರಣ ವಶ

Rs 6.39 crore Gold, diamond jewellery seized in Molakalmuru

Rs 6.39 crore Gold, diamond jewellery seized in Molakalmuru

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ (Karnataka Election) ಕರ್ನಾಟಕ-ಆಂಧ್ರಪ್ರದೇಶ ಗಡಿಭಾಗದ ಕಣಕುಪ್ಪೆ ಚೆಕ್‌ಪೋಸ್ಟ್ ಬಳಿ ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ ಸುಮಾರು ರೂ.6.39 ಕೋಟಿ ಮೌಲ್ಯದ ಚಿನ್ನ, ವಜ್ರ ಮುಂತಾದ ಬೆಲೆಬಾಳುವ ಆಭರಣಗಳನ್ನು ಮಂಗಳವಾರ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ‌ ತಿಳಿಸಿದ್ದಾರೆ.

ವಾಹನವು ಬಳ್ಳಾರಿಯಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ. ಪ್ರತಿಷ್ಠಿತ ಜ್ಯುವೆಲರಿಗಳಿಗೆ ಚಿನ್ನಾಭರಣಗಳನ್ನು ಸಾಗಣೆ ಮಾಡಲಾಗುತ್ತಿತ್ತು ಎಂದು ಸಾಗಣೆದಾರರು ಹೇಳಿದ್ದಾರೆ. ಅದಕ್ಕೆ ಪೂರಕ ದಾಖಲೆಗಳನ್ನು ಹಾಜರಿಪಡಿಸಿಲ್ಲ. ಹೆಚ್ಚಿನ ಪರಿಶೀಲನೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Drugs case: ಗಾಂಜಾ ಸಾಗಾಟಕ್ಕೆ ಪೆಡ್ಲರ್‌ಗಳ ಮಾಸ್ಟರ್‌ ಪ್ಲ್ಯಾನ್‌; ರೈಲು ಬೋಗಿ ಅಡಿಯಲ್ಲಿ ಬಚ್ಚಿಟ್ಟ ಕಿಡಿಗೇಡಿಗಳು

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮಾಡಲಾಗುತ್ತಿದೆ. ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸೂಕ್ತ ದಾಖಲೆ ಇಲ್ಲದೆ ಹಣ, ವಸ್ತು ಮುಂತಾದ ಸಾಮಗ್ರಿಗಳನ್ನು ಸಾಗಿಸುತ್ತಿದ್ದರೆ ವಶಕ್ಕೆ ಪಡೆದು ಪರಿಶೀಲನೆ ಮಾಡಲಾಗುತ್ತಿದೆ. ಚುನಾವಣೆ ಅಕ್ರಮಕ್ಕೆ ಬಳಕೆಯಾಗುವಂತಹ ವಸ್ತುಗಳು ಕಂಡುಬಂದರೆ ಜಪ್ತಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ತಿಳಿಸಿದ್ದಾರೆ.

ಇದನ್ನೂ ಓದಿ | Karnataka Election: ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೆಸ್‌ನ 24 ಅಭ್ಯರ್ಥಿಗಳಿಗೆ ಗೇಟ್ ಪಾಸ್

ಚುನಾವಣಾ ತರಬೇತಿ ಮುಗಿಸಿ ಹೋಗುವಾಗ ಶಿಕ್ಷಕ ಆಕಸ್ಮಿಕ ಸಾವು

ಧಾರವಾಡ: ಚುನಾವಣಾ ತರಬೇತಿ ಮುಗಿಸಿ, ಮನೆಗೆ ಹೋಗುವಾಗ ಶಿಕ್ಷಕರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕುಂದಗೋಳ ಪಟ್ಟಣದ ಹರಭಟ್ಟ ಪ್ರಾಥಮಿಕ ಶಾಲೆಯ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಮೃತರು.

ಜೆಎಸ್ಎಸ್ ಕಾಲೇಜಿನಲ್ಲಿ ಧಾರವಾಡ ವಿಧಾನಸಭಾ ಮತಕ್ಷೇತ್ರ-71 ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ನಿಯೋಜಿತರಾದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿತ್ತು. ಮಂಗಳವಾರ ತರಬೇತಿ ಮುಗಿಸಿ ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ ಅವರು ಮೆಟ್ಟಿಲು ಇಳಿದು ಮನೆಗೆ ಹೋಗುವಾಗ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಗಂಡುಮಕ್ಕಳಿದ್ದಾರೆ.

Exit mobile version