ಬೆಂಗಳೂರು: ಹೆಚ್ಚೆಚ್ಚು ಆರ್‌ಟಿಐ ಹಾಕುತ್ತಿರುವವರು ಯಾರು ಎಂದು ಮಾಹಿತಿ ಸಂಗ್ರಹಕ್ಕೆ ರಾಜ್ಯ ಸರ್ಕಾರ ಕೈ ಹಾಕಿದೆ. ಆ ಮೂಲಕ, ಆರ್‌ಟಿಐ ಕಾರ್ಯಕರ್ತರ (RTI Activists) ಮೇಲೆ ನಿಯಂತ್ರಣ ಸಾಧಿಸಲು ರಾಜ್ಯ ಸರ್ಕಾರ (Karnataka Government) ಮುಂದಾಯಿತೇ ಎಂಬ ಪ್ರಶ್ನೆ ಎದ್ದಿದೆ.
ಹೆಚ್ಚು ಬಾರಿ ಆರ್‌ಟಿಐ ಅರ್ಜಿ ಸಲ್ಲಿಸುತ್ತಿರುವ ಅರ್ಜಿದಾರರ ಪಟ್ಟಿಯನ್ನು ಒದಗಿಸಲು ನಿರ್ದೇಶನ ನೀಡಲಾಗಿದೆ. 2023ರ ಏಪ್ರಿಲ್‌ನಲ್ಲೇ ಈ ಬಗ್ಗೆ ಕಲಬುರಗಿ ಪೀಠದ ಮಾಹಿತಿ ಆಯುಕ್ತರು ಪತ್ರ ಬರೆದಿದ್ದರು. ಆದರೆ ಬಿಜೆಪಿ ಸರ್ಕಾರ ಆ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಅದನ್ನನುಸರಿಸಿ ಮಾಹಿತಿ ಕಲೆ ಹಾಕಲು ಈಗಿನ ಸರ್ಕಾರ ಮುಂದಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್‌ಟಿಐ ಅರ್ಜಿದಾರರ ಮಾಹಿತಿ ನೀಡಲು ನಿರ್ದೇಶನ ನೀಡಿದೆ. ಮುಖ್ಯ ಕಾರ್ಯದರ್ಶಿ ಕಚೇರಿ, ಇಲಾಖೆಗಳು, ಸಚಿವಾಲಯಗಳಲ್ಲಿ ಮಾಹಿತಿ ಕೇಳುವವರ ಮಾಹಿತಿ ಕಲೆ ಹಾಕಲು ಮುಂದಾಗಿದೆ.
ಸರ್ಕಾರದ ನಿರ್ದೇಶನ ಈಗ ಆರ್‌ಟಿಐ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಆರ್‌ಟಿಐ ಕಾರ್ಯಕರ್ತರ ಮಾಹಿತಿ ಕಲೆಹಾಕಲು ಮುಂದಾಗಿದೆ. ಆರ್‌ಟಿಐ ಅಡಿ ಅರ್ಜಿದಾರರ ವಿವರಗಳ ಗೌಪ್ಯತೆ ಕಾಪಾಡುವುದು ಕಾನೂನಿನಲ್ಲಿದೆ. ಹೀಗಿದ್ದಾಗ ಸರ್ಕಾರವೇ ಮಾಹಿತಿ ಕಲೆ ಹಾಕಲು ಮುಂದಾಗಿರುವುದು ಸರಿಯಲ್ಲ ಎಂದು ಆರ್‌ಟಿಐ ಅರ್ಜಿದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದು ಸರ್ಕಾರಿ ಅಧಿಕಾರಿಗಳ ವಿಳಂಬದ್ರೋಹ ಅಥವಾ ಅವ್ಯವಹಾರ ಗೌಪ್ಯವಾಗಿಡುವ ಪ್ರಯತ್ನವೇ? ಆರ್‌ಟಿಐ ಅರ್ಜಿ ಹಾಕೋರ ಮಾಹಿತಿ ಪಡೆದು ರಾಜ್ಯ ಕಾಂಗ್ರೆಸ್ ಸರ್ಕಾರ ಏನು ಮಾಡಲು ಹೊರಟಿದೆ ಎಂದು ಪ್ರಶ್ನಸಿದ್ದಾರೆ.
ಇದನ್ನೂ ಓದಿ: Caste Certificate : ಜಾತಿ ಪ್ರಮಾಣಪತ್ರ ನೀಡುವುದು ವಿಳಂಬವಾದರೆ ಜಿಲ್ಲಾಧಿಕಾರಿ ಮೇಲೆಯೇ ಕ್ರಮ; ಸಿಎಂ ಎಚ್ಚರಿಕೆ