ಯಾದಗಿರಿ: ನಗರದ ರೈಲ್ವೆ ನಿಲ್ದಾಣ ಬಳಿ ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಅಳಿಯನನ್ನು ಮಾವನೇ ಕೊಲೆ (Murder Case) ಮಾಡಿದ್ದು, ಇದೇ ವೇಳೆ ಮೂವರಿಗೆ ಗಾಯಗಳಾಗಿವೆ. ನಗರದ ಲಾಡಸಗಲ್ಲಿಯ ನಿವಾಸಿ ಸೋನು (30) ಕೊಲೆಯಾದ ವ್ಯಕ್ತಿ. ಮಾವ ಮೈಬೂಬ್ ಸೇರಿ ನಾಲ್ವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಕೊಲೆಯಾದ ಸೋನು ಹಾಗೂ ಆರೋಪಿ ಮೆಹಬೂಬ್ ಎರಡು ಕುಟುಂಬಸ್ಥರ ನಡುವೆ ಹಣಕಾಸಿನ ವಿಚಾರಕ್ಕೆ ವಾಗ್ವಾದ ನಡೆದಿದೆ. ನಂತರ ಗಲಾಟೆ ತಾರಕಕ್ಕೇರಿದಾಗ ಮೈಬೂಬ್ ಸೇರಿ ಮಾರಕಾಸ್ತ್ರಗಳಿಂದ ಸೋನುವನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿ.ಟಿ.ರವಿ ಹೆಸರಲ್ಲಿ ಪೋಸ್ಟ್ ಮಾಡಿದ್ದ ಆರೋಪಿ ಬಂಧನ
ಚಿಕ್ಕಮಗಳೂರು: ಲಿಂಗಾಯತ ಸಮುದಾಯಕ್ಕೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದು ಸಿ.ಟಿ.ರವಿ ಹೆಸರಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಹೊನ್ನಾಳಿ ಮೂಲದ ಹರೀಶ್ ಬಂಧಿತ ಆರೋಪಿಯಾಗಿದ್ದಾರೆ.
ಆರೋಪಿ ಬಂಧನ ವಿಚಾರ ತಿಳಿದ ಕೂಡಲೇ ಪೊಲೀಸ್ ಠಾಣೆ ಮುಂದೆ ನೂರಾರು ಬಿಜೆಪಿ ಕಾರ್ಯಕರ್ತರು ಜಮಾಯಿಸಿ, ಆರೋಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಸಿ.ಟಿ.ರವಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಈ ವೇಳೆ ಆರೋಪಿ ಹರೀಶ್ ಮಾತನಾಡಿ, ಇದನ್ನು ಮುಂದುವರಿಸುವುದು ಬೇಡ, ತಪ್ಪಾಯ್ತು ಎಂದು ಕ್ಷಮೆ ಕೇಳಿದ್ದಾರೆ.
ಅರೋಪಿ ಹರೀಶ್ ಹೊನ್ನಾಳಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಶಾಂತನಗೌಡ ಸಂಬಂಧಿ ಎನ್ನಲಾಗಿದೆ. ದಾವಣಗೆರೆಯ ಹೊನ್ನಾಳಿಯಲ್ಲಿ ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.