Site icon Vistara News

Karnataka Election: ಬಸ್ ನಿಲ್ದಾಣದಲ್ಲಿ ಕುಳಿತು ಊಟ ಮಾಡಿದ ಎಸ್.ಟಿ. ಸೋಮಶೇಖರ್

#image_title

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ಬಸ್ ನಿಲ್ದಾಣದಲ್ಲಿ ಕುಳಿತು ಊಟ ಮಾಡಿದ್ದಾರೆ. ಜನಸಾಮಾನ್ಯರಂತೆ ರಸ್ತೆ ಬದಿಯಲ್ಲಿ ಊಟ ಮಾಡಿದ ಸಚಿವರ ಸರಳತೆಯನ್ನು ಕಂಡು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದಾದ್ಯಂತ ಎಸ್.ಟಿ.ಸೋಮಶೇಖರ್ ಪ್ರಚಾರ ನಡೆಸುತ್ತಿದ್ದಾರೆ. ಶನಿವಾರ ದೊಡ್ಡಬಿದರಕಲ್ಲು ವಾರ್ಡ್‌ನಲ್ಲಿ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಕಾರ್ಯಕರ್ತರೊಂದಿಗೆ ಕುಳಿತು ಅನ್ನ, ರಸಂ ಸೇವಿಸಿದ್ದಾರೆ.

ಮನೆಮನೆ ಪ್ರಚಾರ

ಅಂಧ್ರಹಳ್ಳಿ, ದೊಡ್ಡಬಿದರಕಲ್ಲು ವಾರ್ಡ್‌ನಲ್ಲಿ ಎಸ್.ಟಿ.ಸೋಮಶೇಖರ್ ಅವರು ಮನೆಮನೆ ಪ್ರಚಾರ ನಡೆಸಿದರು. ಪ್ರಚಾರ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡಬಿದರಕಲ್ಲು ವಾರ್ಡ್‌ನ ಜನತೆ ಈ ಬಾರಿ ಬಿಜೆಪಿಯನ್ನು ಬೆಂಬಲಿಸಲಿದ್ದಾರೆ. ಅತಿ ಹೆಚ್ಚು ಮತಗಳು ಈ ಭಾಗದಿಂದ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ | KS Eshwarappa: ಬಿಜೆಪಿಯ ಕೋಟಿ ಕಾರ್ಯಕರ್ತರಲ್ಲಿ ನನ್ನ ಮಗನೂ ಒಬ್ಬ; ಎಲ್ಲರಿಗೂ ನ್ಯಾಯ ಕೊಡಿಸಲಾಗಿಲ್ಲ: ಈಶ್ವರಪ್ಪ

198 ವಾರ್ಡ್‌ಗಳಲ್ಲಿ ದೊಡ್ಡಬಿದರಕಲ್ಲು ವಾರ್ಡ್ ಎರಡನೇ ಅತಿದೊಡ್ಡ ವಾರ್ಡ್. ಇಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ನಿಜಕ್ಕೂ ಸವಾಲಿನ ಕೆಲಸ. ವಾರ್ಡ್‌ನ ಬಹುತೇಕ ರಸ್ತೆಗಳಲ್ಲಿ ಡಾಂಬರೀಕರಣ ಮಾಡಲಾಗಿದೆ. ಒಳಚರಂಡಿ, ರಾಜಕಾಲುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.

Exit mobile version