ಬೆಂಗಳೂರು: ಆನೇಕಲ್‌ನ ಅತ್ತಿಬೆಲೆ ಪಟಾಕಿ ಗೋದಾಮೊಂದರಲ್ಲಿ (Attibele Fire Accident) ಶನಿವಾರ (ಅ.7) ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ (Fireworks warehouse) ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ (Safety measures) ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರ ವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದರು.
ಇದನ್ನೂ ಓದಿ: Attibele Fire Accident : ಪಟಾಕಿ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ: ಎಚ್.ಡಿ. ಕುಮಾರಸ್ವಾಮಿ
ಅವಘಡಕ್ಕೇನು ಕಾರಣವೆಂದು ಶೀಘ್ರ ತನಿಖೆ
ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಮೃತಪಟ್ಟಿದ್ದಾರೆ. ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರ ತನಿಖೆ (Warehouse tragedy probe to be launched soon) ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಮುನ್ನೆಚ್ಚರಿಕೆ ವಹಿಸಲು ಸೂಚನೆ
ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ ಅಮಾಯಕರ ಸಾವು ಸಂಭವಿಸದಂತೆ ಮುನ್ನೆಚರಿಕೆ ವಹಿಸುತ್ತೇವೆ. ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ, ಯುವಕರ ಸಾವು ನೋವಿನ ಸಂಗತಿ. ಮುಖ್ಯಮಂತ್ರಿಗಳು ದುರಂತ ನಡೆದ ಸ್ಥಳ ಪರಿಶೀಲನೆಗೆ ಹೋಗುತ್ತಿದ್ದು, ನಾನು ಹೋಗುತ್ತಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದರು.
ಬೊಮ್ಮಾಯಿ ಹೇಳಿಕೆಯಂತೆ ನಡೆಯುತ್ತಿದ್ದೇವೆ
ಕ್ಷೇತ್ರಗಳಿಗೆ ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದ್ದು, ಬಿಜೆಪಿ ಈ ರೀತಿ ಮಾಡಿರಲಿಲ್ಲ ಎನ್ನುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಬೊಮ್ಮಾಯಿ ಅವರು ವಿಧಾನ ಪರಿಷತ್ತಿನಲ್ಲಿ ಏನು ಹೇಳಿಕೆ, ಉತ್ತರ ನೀಡಿದ್ದಾರೋ, ಅದನ್ನೇ ನಾವು ಪಾಲನೆ ಮಾಡುತ್ತಿದ್ದೇವೆ. ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ: Attibele Fire Accident : ಪಟಾಕಿ ಗೋದಾಮಿನ ಮಾಲೀಕನ ಮೇಲೆ ಕ್ರಮ: ಸಿಎಂ ಸಿದ್ದರಾಮಯ್ಯ
ಸೋಮವಾರ ಬ್ರಾಂಡ್ ಬೆಂಗಳೂರು ಸಭೆ
ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು, ಅವುಗಳನ್ನು ಒಂದು ಕಡೆ ಕ್ರೋಢೀಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. ನಾಗರಿಕರ ಧ್ವನಿ, ಕರ್ನಾಟಕದ ಧ್ವನಿಯಾಗಬೇಕು (Voice of the citizens, should be voice of the karnataka) ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ.
ಸೋಮವಾರ ಬೆಳಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.