Sagar News | ಮನೆ ಮನೆಗೆ ಪೈಪ್‍ಗಳ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ಅನುಷ್ಠಾನ; ನಗರಸಭೆಯಲ್ಲಿ ಚರ್ಚೆ - Vistara News

ಕರ್ನಾಟಕ

Sagar News | ಮನೆ ಮನೆಗೆ ಪೈಪ್‍ಗಳ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ಅನುಷ್ಠಾನ; ನಗರಸಭೆಯಲ್ಲಿ ಚರ್ಚೆ

Sagar News | ಮನೆ ಮನೆಗೆ ಪೈಪ್‍ಗಳ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ಅನುಷ್ಠಾನ ಕುರಿತು ನಗರಸಭೆಯಲ್ಲಿ ಚರ್ಚೆ ನಡೆಯಿತು. ಶಾಸಕ ಹಾಲಪ್ಪ ಹರತಾಳು, ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಅನುಷ್ಠಾನಕ್ಕೆ ತರಲು ಸಲಹೆ ನೀಡಿದರು.

VISTARANEWS.COM


on

Nagara sabhe sagar
ಮನೆ ಮನೆಗೆ ಪೈಪ್‍ಗಳ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ಅನುಷ್ಠಾನ ಕುರಿತು ಶಾಸಕ ಹಾಲಪ್ಪ ಹರತಾಳು ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ: ಮನೆ ಮನೆಗೆ ಪೈಪ್‍ಗಳ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಯೋಜನೆ ಅನುಷ್ಠಾನ ಕುರಿತು ಶುಕ್ರವಾರ (ಡಿ.೩೦) ಸಾಗರ ನಗರಸಭೆಯಲ್ಲಿ (Sagar News) ಬಿಸಿಬಿಸಿ ಚರ್ಚೆ ನಡೆದು, ಅಂತಿಮವಾಗಿ ತಾತ್ಕಾಲಿಕವಾಗಿ ಪೈಪ್ ಮತ್ತು ಮೀಟರ್ ಅಳವಡಿಸಲು ಒಪ್ಪಿಗೆ ಸೂಚಿಸಿದೆ.

ಈಗಾಗಲೇ ಯೋಜನೆ ಅನುಷ್ಠಾನಗೊಂಡಿರುವ ನಗರಗಳನ್ನು ವೀಕ್ಷಣೆ ಮಾಡಿ ಪೂರ್ಣ ಪ್ರಮಾಣದ ಅನುಮತಿ ನೀಡುವ ನಿರ್ಣಯವನ್ನು ನಗರಸಭೆ ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಗಿದೆ.

ವಿಷಯ ಕುರಿತು ಮಾತನಾಡಿದ ಶಾಸಕ ಹಾಲಪ್ಪ ಹರತಾಳು, ಯೋಜನೆ ಅನುಷ್ಠಾನಕ್ಕೂ ಮೊದಲು ಸ್ಥಳೀಯ ಸಂಸ್ಥೆಗಳ ಒಪ್ಪಿಗೆ ಪಡೆಯುವುದು ಕಡ್ಡಾಯ. ಈಗಾಗಲೇ ಗ್ಯಾಸ್ ಪೈಪ್ ಅಳವಡಿಸಿರುವ ಊರುಗಳಿಗೆ ನಗರಸಭೆ ನಿಯೋಗ ಪ್ರವಾಸ ಮಾಡಿ ಯೋಜನೆ ಸಾಧಕ ಬಾಧಕಗಳ ಕುರಿತು ಪರಿಶೀಲನೆ ನಡೆಸಲಿದೆ. ಕೇಂದ್ರ ಸರ್ಕಾರದ ಮಹತ್ವದ ಯೋಜನೆ ಇದಾಗಿದ್ದು, ಸಾರ್ವಜನಿಕರಿಗೆ ಉಪಯುಕ್ತವಾಗುವ ರೀತಿಯಲ್ಲಿ ಅನುಷ್ಠಾನಕ್ಕೆ ತರಲು ಸಲಹೆ ನೀಡಿದರು.

ನಗರಸಭೆಯಿಂದ ಹೊರ ತಂದಿರುವ ಬಟ್ಟೆ ಚೀಲವನ್ನು ಶಾಸಕ ಹಾಲಪ್ಪ ಹರತಾಳು ಬಿಡುಗಡೆ ಮಾಡಿದರು.

ಇದನ್ನೂ ಓದಿ | Amit Shah | ಸಂಸದೆ ಸುಮಲತಾರನ್ನೂ BJP ಲೆಕ್ಕಕ್ಕೆ ಸೇರಿಸಿಕೊಂಡ ಅಮಿತ್‌ ಶಾ!: JDS-Congress ವಿರುದ್ಧ ವಾಗ್ದಾಳಿ

ಬಿಜೆಪಿ ಸದಸ್ಯ ಟಿ.ಡಿ.ಮೇಘರಾಜ್ ಮಾತನಾಡಿ, ಈಗಾಗಲೇ ಯೋಜನೆ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ಕೆಲಸವನ್ನು ಕಂಪನಿಯು ಪೂರ್ಣಗೊಳಿಸಿದೆ. ಇದಕ್ಕೂ ಮೊದಲು ನಗರಸಭೆಯಿಂದ ಯಾವುದೇ ಪರವಾನಗಿ ಪಡೆದಿಲ್ಲ. ಗ್ಯಾಸ್ ಪೈಪ್ ಅಳವಡಿಸಲು ಗುಂಡಿ ತೆಗೆಯುವುದರಿಂದ ರಸ್ತೆ ಹೊಂಡಗುಂಡಿ ಆಗುತ್ತದೆ. ಶಾಸಕರು, ನಗರಸಭೆ ಆಡಳಿತವು ಸರ್ಕಾರದಿಂದ ಕಷ್ಟಪಟ್ಟು ಅನುದಾನ ತಂದು ರಸ್ತೆ, ಚರಂಡಿ ನಿರ್ಮಿಸಲಾಗಿದೆ. ಯೋಜನೆ ಅನುಷ್ಠಾನದಿಂದ ನಗರಸಭೆಗೆ ಏನು ಲಾಭ ಎನ್ನುವುದು ತಿಳಿಸಿ ಎಂದರು.

ವಿರೋಧ ಪಕ್ಷದ ಸದಸ್ಯರಾದ ಗಣಪತಿ ಮಂಡಗಳಲೆ, ಎನ್.ಲಲಿತಮ್ಮ, ಸೈಯದ್ ಜಾಕೀರ್, ಉಮೇಶ್ ಮಾತನಾಡಿ, ಈಗಾಗಲೇ ಒಳ ಚರಂಡಿ ಯೋಜನೆಯಡಿ ಸಾಕಷ್ಟು ರಸ್ತೆಗಳನ್ನು ಅಗೆಯಲಾಗಿದ್ದು, ಈ ತನಕ ಟಾರ್ ಮಾಡಿಲ್ಲ. ಈಗ ಗ್ಯಾಸ್ ಪೈಪ್‍ಲೈನ್ ಅಳವಡಿಕೆ ಹೆಸರಿನಲ್ಲಿ ಮತ್ತೆ ರಸ್ತೆ ಗುಂಡಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ, ನಗರಸಭೆ ಒಪ್ಪಿಗೆಯನ್ನು ಸಹ ಪಡೆಯದೆ ಈಗಾಗಲೇ ಕೆಲವು ಮನೆಗಳಿಗೆ ಪೈಪ್‍ಲೈನ್ ಅಳವಡಿಸಲು ಪರವಾನಿಗೆ ನೀಡಿದವರು ಯಾರು ಎಂದು ಕೇಳಿದರು.

ಇದನ್ನೂ ಓದಿ | Teacher Transfer | ಮೊದಲು ಬಡ್ತಿ ನೀಡಿ ನಂತರ ವರ್ಗಾವಣೆ ಪ್ರಕ್ರಿಯೆ ನಡೆಸಿ: ಶಿಕ್ಷಕರ ಸಂಘ ಒತ್ತಾಯ

ಅಧ್ಯಕ್ಷೆ ಮಧುರಾ ಶಿವಾನಂದ್ ಮಾತನಾಡಿ, ಯೋಜನೆಯ ಸಾಧಕ ಬಾಧಕ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಯೋಜನೆಗೆ ತಾತ್ಕಾಲಿಕ ಒಪ್ಪಿಗೆಯನ್ನು ಸಭೆ ನೀಡುತ್ತಿದ್ದು, ಈಗಾಗಲೇ ಕಂಪನಿ ಬೇರೆ ಬೇರೆ ಊರುಗಳಲ್ಲಿ ಮಾಡಿರುವ ಕೆಲಸವನ್ನು ಗಮನಿಸಿ, ನಗರಸಭೆ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ನಂತರ ಇದನ್ನು ಪೈಲೆಟ್ ಪ್ರಾಜೆಕ್ಟ್ ಆಗಿ ಪರಿಗಣಿಸಿ ನಗರವ್ಯಾಪ್ತಿಯ 15000 ಮನೆಗಳಿಗೂ ಪೈಪ್‍ಲೈನ್ ಅಳವಡಿಸಿ ಗ್ಯಾಸ್ ಸಂಪರ್ಕ ಕಲ್ಪಿಸಲು ಪೂರ್ಣ ಪ್ರಮಾಣದ ಒಪ್ಪಿಗೆ ನೀಡಲಾಗುತ್ತದೆ ಎಂದು ಹೇಳಿದರು.

ರಸ್ತೆ ಅಪಘಾತ ತಡೆಯಲು ಕಟ್ಟುನಿಟ್ಟಿನ ಸೂಚನೆ
ನಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪಘಾತದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ ಶಾಸಕ ಹಾಲಪ್ಪ ಹರತಾಳು, ನಗರದ ಬೇರೆಬೇರೆ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇಂತಹ ರಸ್ತೆಗಳಲ್ಲಿ ಸಂಬಂಧಪಟ್ಟ ಇಲಾಖೆಯು ಎಚ್ಚರಿಕೆ ನಾಮಫಲಕ ಅಳವಡಿಸಬೇಕು. ಮುಂದಿನ ಮೂರು ದಿನಗಳಲ್ಲಿ ರಸ್ತೆಯಲ್ಲಿ ಎಚ್ಚರಿಕೆ ನಾಮಫಲಕ, ಬ್ಯಾರಿಕೇಡ್‍ಗಳನ್ನು ಹಾಕಬೇಕು. ರಸ್ತೆಯಲ್ಲಿ ನಡೆಯುವ ಪಾದಾಚಾರಿಗಳು ಹೊಸ ನಿಯಮದ ಪ್ರಕಾರ ಬಲ ಭಾಗದಲ್ಲಿಯೇ ನಡೆದು ಹೋಗಬೇಕು. ಆಗ ಎದುರಿನಿಂದ ಬರುವ ವಾಹನದಿಂದ ಜೀವ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಇಲಾಖೆಗಳು ವಿದ್ಯಾರ್ಥಿಗಳಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಲಹೆ ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷ ವಿ.ಮಹೇಶ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಾರಿಗೆ, ಪೊಲೀಸ್, ಪಿಡಬ್ಲ್ಯೂಡಿ ಸೇರಿದಂತೆ ನಗರಸಭೆ ಅಧಿಕಾರಿಗಳು, ಸದಸ್ಯರು ಹಾಜರಿದ್ದರು. ಇದೇ ಸಂದರ್ಭದಲ್ಲಿ ನಗರಸಭೆಯಿಂದ ಹೊರ ತಂದಿರುವ ಬಟ್ಟೆ ಚೀಲವನ್ನು ಶಾಸಕ ಹಾಲಪ್ಪ ಹರತಾಳು ಬಿಡುಗಡೆ ಮಾಡಿದರು.

ಇದನ್ನೂ ಓದಿ | Rishabh Pant | ಬೆಳಗಾಗುವ ಮೊದಲು ಮನೆ ತಲುಪಿ ಅಮ್ಮನಿಗೆ ಸರ್​ಪ್ರೈಸ್​ ಕೊಡಲು ಹೊರಟಿದ್ದರು ರಿಷಭ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Bengaluru’s Second Airport: ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಎಲ್ಲಿ‌ ನಿರ್ಮಿಸಬೇಕು ಎನ್ನುವ ಮಾತುಕತೆ ನಡೆಯತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

VISTARANEWS.COM


on

Bengaluru's Second Airport
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಸಮೀಪದ ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ (Bengaluru’s Second Airport) ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಸ್ಥಳ ಹುಡುಕಾಟ ಚುರುಕುಗೊಳಿಸಿದೆ. ಈ ಸಂಬಂಧ ಸಚಿವ ಎಂ.ಬಿ.ಪಾಟೀಲ್‌ ಅವರು, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಸಭೆ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಭಾನುವಾರ ಪ್ರತಿಕ್ರಿಯಿಸಿರುವ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್‌ ಅವರು, ರಾಜ್ಯದ ರಾಜಧಾನಿಯ ಸಮೀಪ ಮತ್ತೊಂದು ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದನ್ನು ಎಲ್ಲಿ‌ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಮತ್ತು ಮುಖ್ಯಮಂತ್ರಿಗಳ ಜತೆ ವಿಚಾರ ವಿನಿಮಯ ನಡೆಸಿ, ತೀರ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ಎರಡನೇ ಏರ್ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯಲ್ಲಿ ಒಂದು ಸಭೆ ನಡೆದಿದೆ. ಸದ್ಯಕ್ಕೆ ಬಿಐಎಎಲ್ ಜತೆ ಚಾಲ್ತಿಯಲ್ಲಿರುವ ಒಪ್ಪಂದದಲ್ಲಿ 2033ರವರೆಗೂ 150 ಕಿ.ಮೀ. ಅಂತರದಲ್ಲಿ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಬಾರದು ಎಂಬ ಷರತ್ತಿದೆ. ಆದರೆ, ನಾವು ಈಗಿನಿಂದಲೇ ಕಾರ್ಯ ಪ್ರವೃತ್ತರಾದರೆ ಇನ್ನು ಎಂಟು ವರ್ಷಗಳಲ್ಲಿ ಪ್ರಗತಿ ಸಾಧಿಸಬಹುದು ಎಂದರು.

ಪ್ರಯಾಣಿಕರ ಒತ್ತಡ ನೋಡಿದರೆ ಬೆಂಗಳೂರಿನ ದಕ್ಷಿಣ ಭಾಗ, ಕನಕಪುರ ಇತ್ಯಾದಿ ಭಾಗಗಳಿವೆ. ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪದಲ್ಲೇ ನೂತನ ವಿಮಾನ ನಿಲ್ದಾಣವು ಬರಬೇಕು ಎಂದಾದರೆ ದಾಬಸ್‌ಪೇಟೆ, ತುಮಕೂರು ಇತ್ಯಾದಿಗಳು ಬರುತ್ತವೆ. ಇವೆಲ್ಲವನ್ನೂ ಪರಿಗಣಿಸಿ ಸ್ಥಳ ನಿಗದಿ, ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ನುಡಿದರು.

ಮುಂಬೈ ನಗರದಲ್ಲಿ ಎರಡು ವಿಮಾನ ನಿಲ್ದಾಣಗಳ ನಡುವೆ ಕೇವಲ 36 ಕಿ.ಮೀ. ಅಂತರವಿದೆ. ನ್ಯೂಯಾರ್ಕ್ ಮತ್ತು ಲಂಡನ್ ನಗರಗಳಲ್ಲಿ ಕೂಡ ಹೆಚ್ಚು ದೂರವಿಲ್ಲ. ಜೊತೆಗೆ, ಬಿಐಎಎಲ್ ಹೊಂದಿರುವ ಷರತ್ತು ತಮಿಳುನಾಡಿಗೂ ಅನ್ವಯಿಸುತ್ತದೋ ಇಲ್ಲವೋ ಪರಿಶೀಲಿಸಬೇಕು ಎಂದು ವಿವರಿಸಿದರು.

ಇದನ್ನೂ ಓದಿ | Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮಾತನಾಡಿದ ಮೇಲೆ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ಏರ್ಪೋರ್ಟ್ ಕಟ್ಟುವುದಾಗಿ ಹೇಳುತ್ತಿದೆ. ಇದರ ಸಾಧಕಬಾಧಕಗಳನ್ನು ಅಧ್ಯಯನ ಮಾಡಲಾಗುವುದು ಎಂದು ಪಾಟೀಲ್‌ ಹೇಳಿದ್ದಾರೆ.

Continue Reading

ವಿಜಯನಗರ

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Self Harming : ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಜಾರಿದ್ದ ಆಟೋ ಚಾಲಕನೊಬ್ಬ ಮನನೊಂದು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದೆ.

VISTARANEWS.COM


on

By

Self harming
ಸಾಂದರ್ಭಿಕ ಚಿತ್ರss
Koo

ವಿಜಯನಗರ : ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ (Self Harming ) ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ವಿಜಯನಗರದ ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ನಡೆದಿದೆ.

ಲೊಟ್ಟನಕೆರೆ ಗ್ರಾಮದ ಆಟೋ ಚಾಲಕ ಪ್ರಕಾಶ್ (43) ಆತ್ಮಹತ್ಯೆ ಮಾಡಿಕೊಂಡವರು. ಲೊಟ್ಟನಕೆರೆ ಗ್ರಾಮ ಹೊರವಲಯದಲ್ಲಿ ಬೇವಿನ ಮರಕ್ಕೆ ನೇಣು ಹಾಕಿಕೊಂಡಿಕೊಂಡಿದ್ದಾರೆ. ಪ್ರಕಾಶ್‌ ಕಳೆದ ಎರಡು ವರ್ಷದಿಂದ ಹಗಲು-ರಾತ್ರಿ ನಿದ್ದೆ ಬಾರದೇ ಖಿನ್ನತೆಗೆ ಒಳಗಾಗಿದ್ದರು.

Self harming

ಮಾನಸಿಕ ಕಾಯಿಲೆಗೆ ಶಿವಮೊಗ್ಗದ ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ ಖಿನ್ನತೆಯಿಂದ ಹೊರಬಾರಲು ಆಗದೆ ಪ್ರಕಾಶ್‌ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ತಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಬರೆದಿರುವ ಡೆತ್‌ನೋಟ್‌ ಸಿಕ್ಕಿದೆ.

ಸದ್ಯ ಮೃತನ ತಮ್ಮನ ದೂರಿನ ಅನ್ವಯ ಕೊಟ್ಟೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಕೂಡ್ಲಿಗಿ ಶವಾಗಾರಕ್ಕೆ ರವಾನಿಸಿದ್ದಾರೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

ಮುಂಬೈ: ಪುಣೆ ಪೋರ್ಶ್‌ ಕಾರು ಹಿಟ್‌ ಆಂಡ್‌ ರನ್‌ ಕೇಸ್‌(Hit and Run Case) ಮಾಸುವ ಮುನ್ನವೇ ಮುಂಬೈನಲ್ಲೂ ಅಂತಹದ್ದೇ ಒಂದು ಘಟನೆ ವರದಿಯಾಗಿದೆ. ಮೀನು ತರಲೆಂದು ಮನೆಯಿಂದ ಹೊರಗೆ ಬಂದಿದ್ದ ದಂಪತಿಗೆ ಬಿಎಂಡಬ್ಲ್ಯೂ ಕಾರು(BMW Car) ಡಿಕ್ಕಿ ಹೊಡೆದಿದೆ. ಇನ್ನು ಕುಡಿದು ಕಾರು ಓಡಿಸಿದ ಚಾಲಕ ಘಟನೆ ಬಳಿಕ ಕಾರು ಸಮೇತ ಎಸ್ಕೇಪ್‌ ಆಗಿದ್ದಾನೆ. ಮುಂಬೈಯ ವರ್ಲಿಯಲ್ಲಿ ಈ ಘಟನೆ ನಡೆದಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ.

ಕೋಳಿವಾಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಕ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಶಿವಸೇನೆ ನಾಯಕನ ಪುತ್ರನಿಂದ ಡ್ರಂಕ್‌ ಆಂಡ್‌ ಡ್ರೈವ್‌

ಇನ್ನು ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಾರನ್ನು ಪತ್ತೆ ಹಚ್ಚಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆಯವರ ಶಿವಸೇನೆ ಬಣದ ಪಾಲ್ಗರ್‌ ಜಿಲ್ಲಾ ಉಪಾಧ್ಯಕ್ಷ ರಾಜೇಶ್‌ ಅವರ ಪುತ್ರನಿಂದ ಈ ಕೃತ್ಯ ನಡೆದಿದೆ ಎಂಬುದು ಬಯಲಾಗಿದೆ. ರಾಜೇಶ್‌ ಅವರ 24 ವರ್ಷದ ಪುತ್ರ ಮಿಹಿರ್‌ ಶಾ ಕುಡಿದು ವಾಹನ ಚಲಾಯಿಸಿ ಮಹಿಳೆಯ ಸಾವಿಗೆ ಕಾರಣವಾಗಿದ್ದಾನೆ. ಮಿಹಿರ್‌ ಮತ್ತು ಆತನ ಕಾರಿನ ಚಾಲಕ ಕಾರಿನಲ್ಲಿದ್ದರು ಎನ್ನಲಾಗಿದೆ.

ಮಿಹಿರ್‌ ನಾಪತ್ತೆ, ಪೊಲೀಸರ ಹುಡುಕಾಟ

ಇನ್ನು ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದಾನೆ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಸಿಎಂ ಪ್ರತಿಕ್ರಿಯೆ

ಇನ್ನು ಘಟನೆ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾತ್‌ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಈ ಘಟನೆ ದುರಾದೃಷ್ಟಕರವಾದುದು. ಕಾನೂನಿನ ಎದುರು ಎಲ್ಲರೂ ಸಮಾನ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ. ಪೊಲೀಸರು ಜೊತೆಗೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Land Dispute: ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

VISTARANEWS.COM


on

Land Dispute
Koo

ಬೆಂಗಳೂರು: ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್‌ಕೆಇಐ) ಕಾಂಪೌಂಡ್ ಕೆಡವಿದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಜೆಸಿಬಿ ಸಮೇತ 93 ವರ್ಷ ಹಳೆಯ ಶಾಲೆಯ ಆವರಣಕ್ಕೆ ನುಗ್ಗಿ ಗೋಡೆಯನ್ನು (Land Dispute) ಕೆಡವಿದ್ದರಿಂದ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮರಿಯಾ ಎಲಿಜಬೆತ್, ಮೊಹಮ್ಮದ್ ಜಬಿ ಮತ್ತು ಜೆರಾರ್ಡ್ ಸ್ಟೀಫನ್ ಹ್ಯಾರಿ ಆರೋಪಿಗಳು. ಜುಲೈ 5ರಂದು ಸಂಜೆ ಘಟನೆ ನಡೆದಿದೆ. ಹ್ಯಾರಿ, ಎಲಿಜಬೆತ್ ಮತ್ತು ಜಬಿ, ಜೆಸಿಬಿ ಸಮೇತವಾಗಿ ಶಾಲೆಯೊಳಗೆ ನುಗ್ಗಿ, ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಎಲಿಜಬೆತ್ ಮತ್ತು ಶಾಲಾ ಆಡಳಿತದ ನಡುವೆ 25 ವರ್ಷಗಳಿಂದ ಆಸ್ತಿ ವಿವಾದವಿದೆ ಎನ್ನಲಾಗಿದ್ದು, ಇದರಿಂದ ಘಟನೆ ನಡೆದಿದೆ ಎನ್ನಲಾಗಿದೆ. ಶಾಲಾ ಕ್ಯಾಂಪಸ್‌ನ ಒಂದು ಭಾಗ ತನಗೆ ಸೇರಿದೆ ಎಂದು ಎಲಿಜಬೆತ್ ಹೇಳಿದ್ದಾರೆ. ಆದರೆ ಶಾಲೆ ಆಡಳಿತ ಮಂಡಳಿ ಮಾತ್ರ ಕಾರ್ಪೊರೇಷನ್‌ನಿಂದ 10 ಎಕರೆ ಆಸ್ತಿಯನ್ನು ತಾವು ಖರೀದಿಸಿದ್ದೆವು ಎಂದು ಹೇಳುತ್ತಿದೆ.

ಈ ಬಗ್ಗೆ ಶಾಲೆಯ ಸಹಾಯಕ ಕಾರ್ಯದರ್ಶಿ ಅನುರಾಧಾ ಕೆ.ಪಿ ಅವರು ಪ್ರತಿಕ್ರಿಯಿಸಿ, ಶಾಲೆಯ ಆಡಳಿತ ಮಂಡಳಿಯು ಆಸ್ತಿಯ ಯಾವುದೇ ಹಕ್ಕುಗಳ ವಿರುದ್ಧ 2023ರಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದೆ. ಕೋರ್ಟ್‌ ತಡೆಯಾಜ್ಞೆ ನಡುವೆಯೂ ಎಲಿಜಬೆತ್ ಮತ್ತು ಅವರ ಗುಂಪು ಕ್ಯಾಂಪಸ್‌ ಅತಿಕ್ರಮಣ ಮಾಡಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಶಾಕಿಂಗ್‌ ಘಟನೆ! ಬುದ್ಧಿ ಹೇಳಿದ ಗುರುವನ್ನೇ ಚುಚ್ಚಿ ಕೊಂದ ವಿದ್ಯಾರ್ಥಿ

Viral News

ಗುವಾಹಟಿ: ಈಗಿನ ಕಾಲ ಹೇಗಿದೆ ಅಂದ್ರೆ ಸಂಬಂಧಗಳು ನಿಧಾನವಾಗಿ ಮರೆಯಾಗಿ ಎಲ್ಲರೂ ಯಾಂತ್ರಿಕವಾಗಿ ಬದುಕುತ್ತಿರುವ ಹಂತಕ್ಕೆ ತಲುಪಿದ್ದೇವೆ. ಈ ಯಾಂತ್ರಿಕ ಜೀವನದಲ್ಲಿ ಅಪ್ಪ-ಅಮ್ಮ, ಗುರು-ಶಿಷ್ಯ ಹೀಗೆ ಇಂತಹ ಸಂಬಂಧಗಳ ಮೇಲೆ ಭಾವನಾತ್ಮಕ ಬಂಧವೇ ಇಲ್ಲದಂತಾಗಿದೆ. ಅದಕ್ಕೆ ಉದಾಹರಣೆ ಎನ್ನುವಂತೆ ವಿದ್ಯೆ ಕಲಿಸಿದ ಗುರುವನ್ನೇ ವಿದ್ಯಾರ್ಥಿಯೊಬ್ಬ ಇರಿದು(Stabbed) ಕೊಂದಿದ್ದಾನೆ. ಬುದ್ಧಿ ಹೇಳಿದ ಶಿಕ್ಷಕನಿಗೆ ತಿಳಿಗೇಡಿ ವಿದ್ಯಾರ್ಥಿ ಯಮನಾಗಿ ಎದುರುನಿಂತು ಪ್ರಾಣವನ್ನೇ ತೆಗೆದಿದ್ದಾನೆ(Viral News).

ಅಸ್ಸಾಂನ ಶಿವಸಾಗರ್ ಜಿಲ್ಲೆಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, 11 ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲಿ ಇರಿದು ಕೊಂದಿದ್ದಾನೆ. ಕಳಪೆ ಸಾಧನೆಗಾಗಿ ಬೈದಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55) ಮೇಲೆ ಹಲ್ಲೆ ನಡೆಸಿ ಕೊಂದ 16 ವರ್ಷದ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬೆಜವಾಡ ಅವರು ರಸಾಯನಶಾಸ್ತ್ರವನ್ನು ಕಲಿಸುತ್ತಿದ್ದರು. ಜೊತೆಗೆ ಖಾಸಗಿ ಒಡೆತನದ ಶಾಲೆಯಲ್ಲಿ ನಿರ್ವಹಣಾ ಜವಾಬ್ದಾರಿಗಳನ್ನು ಸಹ ಹೊಂದಿದ್ದರು.ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ನಿನ್ನೆ ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಕೇಳಿದರು. ಇದ್ದಕ್ಕಿದ್ದಂತೆ ವಿದ್ಯಾರ್ಥಿ ಬೆಜವಾಡ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಪದೇ ಪದೇ ಇರಿದಿದ್ದಾನೆ.

ಇನ್ನು ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, ಕೋಚಿಂಗ್‌ ಸೆಂಟರ್‌ನಲ್ಲಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಬಂದು ನೋಡಿದಾಗ ತರಗತಿಯಲ್ಲಿ ರಕ್ತದ ಮಡುವಿನಲ್ಲಿ ಶಿಕ್ಷಕ ಬಿದ್ದಿದ್ದರು. ಅಲ್ಲೇ ಚಾಕು ಕೂಡ ಇತ್ತು. ಶಿಕ್ಷಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿಲಾಯಿತಾದರೂ ಆತ ಸಾವನ್ನಪ್ಪಿರುವುದನ್ನು ವೈದ್ಯರು ಖಚಿತಪಡಿಸಿದರು. ಇನ್ನು ವಿದ್ಯಾರ್ಥಿಯನ್ನು ಈಗಾಗಲೇ ವಶಕ್ಕೆ ಪಡೆದಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಇತರ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಶಿಕ್ಷಕ ವಿದ್ಯಾರ್ಥಿಗೆ ಈ ಹಿಂದೆ ಬೈದಿದ್ದರು ಎಂಬುದು ಬಯಲಾಗಿದೆ.

ಇದನ್ನೂ ಓದಿ:Mahadayi Water Dispute: ಮಹದಾಯಿ ಜಲಾನಯನ ಪ್ರದೇಶಕ್ಕೆ ಕೇಂದ್ರದ ಪ್ರವಾಹ್ ತಂಡ ಭೇಟಿ; ನಾಲೆಗಳ ಪರಿಶೀಲನೆ

ರಸಾಯನಶಾಸ್ತ್ರದಲ್ಲಿನ ಕಲಿಕೆಯ ಬಗ್ಗೆ ಶಿಕ್ಷಕರು ನಿನ್ನೆ ವಿದ್ಯಾರ್ಥಿಯನ್ನು ಗದರಿಸಿದ್ದರು. ಅಲ್ಲದೇ ಪೋಷಕರ ಸಭೆಗಾಗಿ ಪೋಷಕರನ್ನು ಶಾಲೆಗೆ ಕರೆದುಕೊಂಡು ಬಾ ಎಂದು ಹೇಳಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ದಿನದ ನಂತರ ವಿದ್ಯಾರ್ಥಿ ಕ್ಯಾಶುಯಲ್ ಬಟ್ಟೆಗಳಲ್ಲಿ ತರಗತಿಗೆ ಬಂದಿದ್ದ. ಶಿಕ್ಷಕರು ಅವನನ್ನು ಹೊರಹೋಗುವಂತೆ ಹೇಳಿದ್ದರು ಎನ್ನಲಾಗಿದೆ. ಇನ್ನು ಆರೋಪಿ ವಿದ್ಯಾರ್ಥಿ ತರಗತಿ ಮುಗಿಸಿ ಮನೆಗೆ ತೆರಳಿದ್ದ. ಇದಾದ ಕೆಲವೇ ಹೊತ್ತಲ್ಲಿ ಮತ್ತೆ ತರಗತಿಗೆ ಬಂದಿದ್ದಾನೆ. ಅವನು ತರಗತಿಗೆ ಪ್ರವೇಶಿಸಿದಾಗ, ಶಿಕ್ಷಕನು ಅವನನ್ನು ಮತ್ತೆ ಬೈಯಲು ಶುರು ಮಾಡಿದ್ದ. ಇದರಿಂದ ಕೋಪಗೊಂಡ ವಿದ್ಯಾರ್ಥಿ ಶಿಕ್ಷಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಸಹಪಾಠಿ ಹೇಳಿಕೊಂಡಿದ್ದಾನೆ.

Continue Reading

ರಾಯಚೂರು

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದ ಗ್ರಾಮಸ್ಥರು ಪಶು ಇಲಾಖೆಯ ಆಂಬ್ಯುಲೆನ್ಸ್‌ಗೆ ಹಾಕಿದ್ದಾರೆ. ಕಣ್ಮುಂದೆ ಇದ್ದ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ವಿಫಲರಾದರೂ, ರೊಚ್ಚಿಗೆದ್ದ ಗ್ರಾಮಸ್ಥರು ಚಿರತೆಯನ್ನು ಕೊಂದಿದ್ದಾರೆ.

VISTARANEWS.COM


on

By

leopard attack
Koo

ರಾಯಚೂರು: ಜಮೀನಿಗೆ ತೆರಳುತ್ತಿದ್ದ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಹಿಡಿದು ಗ್ರಾಮಸ್ಥರು ಹೊಡೆದು ಕೊಂದಿದ್ದಾರೆ. ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿತ್ತು.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ವೇಳೆ ಚಿರತೆ ಸೆರೆ ಸಿಗದ ಹಿನ್ನೆಲೆಯಲ್ಲೇ ಅಖಾಡಕ್ಕೆ ಇಳಿದ ಗ್ರಾಮಸ್ಥರೇ ಚಿರತೆ ಮೇಲೆ ದಾಳಿ ಮಾಡಿದ್ದರು. ಅರಣ್ಯ ಅಧಿಕಾರಿಗಳ ಎದುರೇ ಚಿರತೆಯನ್ನು ಕೊಂದು ಹಾಕಿದ್ದರು. ಇತ್ತ ಸ್ಥಳದಲ್ಲಿ ಸೇರಿದ್ದ ಸಾವಿರಾರು ಜನರನ್ನು ನಿಯಂತ್ರಿಸಲು ಆಗದೆ ಪೊಲೀಸರು ಹರಸಾಹಸ ಪಟ್ಟರು. ಮಾತ್ರವಲ್ಲದೇ ಲಘು ಲಾಠಿ ಪ್ರಹಾರ ಮಾಡಿ ಜನರನ್ನು ಚದುರಿಸಿದರು.

ಚಿರತೆಯನ್ನು ಕೊಂದು ಪಶು ಆಂಬ್ಯುಲೆನ್ಸ್‌ಗೆ ತಂದು ಹಾಕಿದರು. ಅರಣ್ಯ ಹಾಗೂ ಪೊಲೀಸರ ಅಧಿಕಾರಿ ಮುಂದೆಯೇ ಚಿರತೆ ಬಲಿಯಾಯಿತು. ಚಿರತೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಅಸಹಾಯಕರಾಗಿದ್ದರು. ಸಂಜೆಯಾಗುತ್ತಿದ್ದಂತೆ ರೊಚ್ಚಿಗೆದ್ದ ಜನರು ಚಿರತೆಯನ್ನು ಕೊಂದಿದ್ದಾರೆ. ಸದ್ಯ ದೇವದುರ್ಗ ತಾಲೂಕು ಪಶು ಆಸ್ಪತ್ರೆಯಲ್ಲಿ ಚಿರತೆ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಚಿರತೆ ದಾಳಿಗೆ ಮೂವರು ಗಂಭೀರ

ಕಾಡುಪ್ರಾಣಿಗಳ ಹಾವಳಿ (Wild Animal Attack) ಹೆಚ್ಚಾಗಿದ್ದು, ಜನ-ಸಾಮಾನ್ಯರು ಆತಂಕದಲ್ಲೇ ಓಡಾಡುವಂತಾಗಿದೆ. ಆಹಾರ ಅರಸಿ ನಾಡಿಗೆ ಕಾಲಿಡುತ್ತಿರುವ ಪ್ರಾಣಿಗಳು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಜತೆಗೆ ಸಾಕುಪ್ರಾಣಿಗಳನ್ನು ಕೊಂದು ಎತ್ತಿಕೊಂಡು ಹೋಗುತ್ತಿವೆ. ಜು.7ರ ಮುಂಜಾನೆ ರಾಯಚೂರಿನ ದೇವದುರ್ಗ ತಾಲ್ಲೂಕಿನ ಕಮದಾಳು ಗ್ರಾಮದಲ್ಲಿ ಮೂವರ ಮೇಲೆ ಚಿರತೆ (Leopard attack) ದಾಳಿ ನಡೆಸಿತ್ತು.

Leopard attack three in Raichur

ಚಿರತೆ ದಾಳಿಯಿಂದಾಗಿ ಮೂವರು ಗಂಭೀರ ಗಾಯಗೊಂಡಿದ್ದರು. ಮಲ್ಲಣ್ಣ, ರಂಗನಾಥ್‌, ಹನಮೇಶ ಕಮದಾಳ ಗಾಯಾಳುಗಳು. ಗಂಭೀರ ಗಾಯಗೊಂಡಿದ್ದ ಗಾಯಾಳುಗಳನ್ನು ದೇವದುರ್ಗ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಮೂವರು ಜಮೀನಿಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಚಿರತೆಯು ಮೂವರ ಮೇಲೂ ಎರಗಿ ದಾಳಿ ಮಾಡಿ ಗಾಯಗೊಳಿಸಿತ್ತು. ಚಿರತೆ ಪ್ರತ್ಯಕ್ಷವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿತ್ತು. ಇನ್ನೂ ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕಮದಾಳು,ಯರಮಸಾಳ, ಜೇರಬಂಡಿ, ಗುಂಡಗುರ್ತಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಕೂಡಲೇ ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದರು. ಆದರೆ ಯಾವಾಗ ಕಣ್ಮುಂದೆ ಇದ್ದ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ವಿಫಲರಾದರೂ, ರೊಚ್ಚಿಗೆದ್ದ ಗ್ರಾಮಸ್ಥರು ಚಿರತೆಯನ್ನು ಹೊಡೆದು ಕೊಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Puri Jagannath Yatra
ದೇಶ31 seconds ago

Puri Jagannath Yatra: ಪುರಿ ಜಗನ್ನಾಥನ ಅದ್ದೂರಿ ರಥಯಾತ್ರೆ; ರಾಷ್ಟ್ರಪತಿ ಮುರ್ಮು ಉಪಸ್ಥಿತಿ

Rahul Dravid
ಪ್ರಮುಖ ಸುದ್ದಿ5 mins ago

Rahul Dravid : ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ; ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ

Abhishek Sharma
ಪ್ರಮುಖ ಸುದ್ದಿ34 mins ago

Abhishek Sharma : ಜಿಂಬಾಬ್ವೆ ವಿರುದ್ಧ ಶತಕ ಬಾರಿಸಿ ಅಪರೂಪದ ದಾಖಲೆ ಬರೆದ ಅಭಿಷೇಕ್ ಶರ್ಮಾ

Bengaluru's Second Airport
ಕರ್ನಾಟಕ37 mins ago

Bengaluru’s Second Airport: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ? ಸಚಿವ ಎಂ.ಬಿ. ಪಾಟೀಲ್ ಸುಳಿವು

Mahua Moitra
ದೇಶ51 mins ago

Mahua Moitra: ಹೊಸ ಕಾನೂನಿನಂತೆ ಟಿಎಂಸಿ ಎಂಪಿ ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್;‌ ಕಾರಣ ಇಲ್ಲಿದೆ

Self harming
ವಿಜಯನಗರ1 hour ago

Self Harming : ನಿದ್ದೆ ಇಲ್ಲದೇ ಒದ್ದಾಟ; ಬೇವಿನ ಮರಕ್ಕೆ ನೇಣು ಬಿಗಿದುಕೊಂಡ ಆಟೋ ಚಾಲಕ

Land Dispute
ಕರ್ನಾಟಕ1 hour ago

Land Dispute: ಬೆಂಗಳೂರಿನ 93 ವರ್ಷದ ಹಳೇ ಶಾಲೆಯ ಕಾಂಪೌಂಡ್‌ ಧ್ವಂಸ; ಮೂವರ ವಿರುದ್ಧ ಕೇಸ್‌

Vastu Tips
ಧಾರ್ಮಿಕ1 hour ago

Vastu Tips: ಆರ್ಥಿಕ ಸಂಕಷ್ಟ ದೂರವಾಗಿ ಶ್ರೀಮಂತರಾಗಬೇಕೆ? ಈ ವಾಸ್ತು ನಿಯಮ ಪಾಲಿಸಿ

Union Budget 2024
ಬಜೆಟ್ 20242 hours ago

Union Budget 2024: ಘೋಷಣೆ ಸೋರಿಕೆಯಿಂದ ಹಲ್ವಾ ತಿನ್ನುವವರೆಗೆ; ಕೇಂದ್ರ ಬಜೆಟ್‌ನ 10 ಆಸಕ್ತಿದಾಯಕ ಸಂಗತಿಗಳಿವು

Sanath Jayasuriya
ಪ್ರಮುಖ ಸುದ್ದಿ2 hours ago

Sanath Jayasuriya : ಬ್ಯಾಟಿಂಗ್​ ದಿಗ್ಗಜ ಸನತ್​ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್​ ತಂಡದ ನೂತನ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Davanagere news
ಮಳೆ2 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ3 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ13 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ1 day ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ1 day ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌