ಉತ್ತರ ಕನ್ನಡ
Sagara News: ಸಾಗರ ಮಾಜಿ ಶಾಸಕ ಬಿ.ಧರ್ಮಪ್ಪ ನಿಧನ; ಇಂದು ಅಂತ್ಯಕ್ರಿಯೆ
ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
ಸಾಗರ: ಇಲ್ಲಿನ ಮಾಜಿ ಶಾಸಕ ಬಿ.ಧರ್ಮಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 87ವರ್ಷ ವಯಸ್ಸಾಗಿತ್ತು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಇವರಿಗೆ ಪತ್ನಿ ಸುನಂದಮ್ಮ, ಪುತ್ರ ಸಂತೋಷ್ ಮತ್ತು ಪುತ್ರಿ ರೂಪಾ ಇದ್ದಾರೆ. ಬಿ.ಧರ್ಮಪ್ಪ ನಿಧನಕ್ಕೆ ಅವರ ಅಪಾರ ಅಭಿಮಾನಿಗಳು, ಬಂಧುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಸ್ವಗ್ವಾಮ ಗಿಳಾಲಗುಂಡಿಯಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಧರ್ಮಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದರು. ರಾಮಕೃಷ್ಣ ಹೆಗಡೆ, ಕಾಗೋಡು ತಿಮ್ಮಪ್ಪನವರ ಸಮಕಾಲೀನರು. 80ರ ದಶಕದಲ್ಲಿ ಜನತಾದಳದಿಂದ ಸ್ಪರ್ಧಿಸಿ, ಕಾಂಗ್ರೆಸಿನ ಎಲ್.ಟಿ. ತಿಮ್ಮಪ್ಪ ಹೆಗಡೆಯವರನ್ನು ಸೋಲಿಸಿ ಸಾಗರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಶಾಸಕರಾಗಿದ್ದ ಸಂದರ್ಭದಲ್ಲಿ ಸಾಗರದ ಮುಳುಗಡೆ ಪ್ರಾಂತ್ಯವಾದ ತುಮರಿ, ಬ್ಯಾಕೋಡು ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿ ಜನಮನ್ನಣೆ ಪಡೆದುಕೊಂಡಿದ್ದರು. ಆಗಿನ ತಾಲೂಕು ಬೋರ್ಡ್‍ಗೆ (ಈಗಿನ ತಾಲೂಕು ಪಂಚಾಯತ್) ಆನಂದಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು, ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ: ಪತ್ನಿ-ಮಕ್ಕಳನ್ನು ನೋಡಿ ಬರುತ್ತೇನೆ ಎಂದು ಅಮೆರಿಕಕ್ಕೆ ಹೊರಟ ಶಾಸಕ; 10 ದಿನ ಲಭ್ಯವಿರೋಲ್ಲ ಇವರು
ಇವರ ನಿಧನಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಾಜಿ ವಿಧಾನ ಸಭಾಧ್ಯಕ್ಷರಾದ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಹರತಾಳು ಹಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯೆ ಪ್ರಫುಲ್ಲ ಮಧುಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಆರ್. ಜಯಂತ್,ನಗರಸಭಾ ಸದಸ್ಯ ತಸ್ರೀಫ್ ಇಬ್ರಾಹಿಂ, ಮಹಮ್ಮದ್ ಖಾಸಿಂ,ಸಾಗರ ವಕೀಲರ ಸಂಘದ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಉತ್ತರ ಕನ್ನಡ
Uttara Kannada News: ಕಬ್ಬು ಬೆಳೆಗಾರರಿಗೆ ಸಮಸ್ಯೆಯಾಗದಂತೆ ಕಾರ್ಯ ನಿರ್ವಹಿಸಿ: ಡಿಸಿ ಗಂಗೂಬಾಯಿ ಮಾನಕರ್
Uttara Kannada News: ಕಾರವಾರ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರವಾರ: ಪ್ರಸಕ್ತ ಸಾಲಿನ ಕಬ್ಬು (Sugarcane) ಅರೆಯುವ ಹಂಗಾಮು ನವೆಂಬರ್ 1 ರಿಂದ 15ರ ವರೆಗೆ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆ (Sugar Factory) ವತಿಯಿಂದ ಜಿಲ್ಲೆಯ ಕಬ್ಬು ಬೆಳೆಗಾರರರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ, ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳು ಮತ್ತು ಜಿಲ್ಲೆಯ ಕಬ್ಬು ಬೆಳಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 2022-23 ರಲ್ಲಿ 10,18,382 ಮೆ. ಟನ್ ಕಬ್ಬು ನುರಿಸಲಾಗಿದ್ದು, 1,19,478 ಮೆ.ಟನ್ ಸಕ್ಕರೆ ಉತ್ಪಾದಿಸುವುದರೊಂದಿಗೆ 11.97% ಶೇಕಡಾ ಇಳುವರಿ ದಾಖಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 6,633 ಹೆಕ್ಟೇರ್ ಹೊಸ ಕಬ್ಬು ಹಾಗೂ 8,005 ಹೆಕ್ಟೇರ್ ಕುಳೆ ಕಬ್ಬು ಸೇರಿದಂತೆ ಒಟ್ಟು 14,638 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದೆ.
ಪ್ರಸಕ್ತ ಸಾಲಿನ ಕಬ್ಬು ಬೆಳೆಗೆ ಹಳಿಯಾಳ ತಾಲೂಕಿನ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಇವರು ಪ್ರತಿ ಟನ್ ಗೆ ರೂ.3678 ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ನಿಗಧಿಪಡಿಸಿದ್ದಾರೆ. ಜಿಲ್ಲೆಯ ಕಬ್ಬು ಬೆಳಗಾರರಿಂದ ಕಬ್ಬು ಖರೀದಿಸುವ ಸಂದರ್ಭದಲ್ಲಿ ಬೆಳಗಾರರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಪರಸ್ಪರ ಸಮನ್ವಯದಿಂದ ಕಬ್ಬು ಖರೀದಿಯ ಎಲ್ಲಾ ಪ್ರಕ್ರಿಯೆಯನ್ನು ನಡೆಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಇ.ಐ.ಡಿ.ಪ್ಯಾರಿ (ಇಂಡಿಯಾ) ಲಿ ಅವರು ರೈತರು ಕಾರ್ಖಾನೆಗೆ ತರುವ ಕಬ್ಬನ್ನು ತೂಕ ಮಾಡುವಾಗ ಬೆಳಗಾರರು ಮತ್ತು ಕಾರ್ಖಾನೆಯ ನಡುವೆ ಗೊಂದಲಗಳು ಇದ್ದು, ಈ ಪ್ರಕ್ರಿಯೆಯಲ್ಲಿ ಪಾರದರ್ಶಕವಾಗಿ ತೂಕ ಮಾಡುವಂತೆ ಮತ್ತು ತೂಕದ ಪ್ರಮಾಣವನ್ನು ಬೆಳಗಾರರು ನೋಡಲು ಅನುಕೂಲವಾಗುವಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮಾಡುವಂತೆ ಹಾಗೂ ಮುಂದಿನ ಅವಧಿಯ ವೇಳೆಗೆ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿಯೇ ತೂಕ ಪರೀಕ್ಷಿಸಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದಲ್ಲಿ ಹೆಚ್ಚಿನ ದರ ಪಡೆಯುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ರೈತ ಮುಖಂಡರು, ಇತರೆ ಜಿಲ್ಲೆಯಲ್ಲಿ ಪ್ರತಿ ಟನ್ ಗೆ 772 ದರ ಇದ್ದು, ಜಿಲ್ಲೆಯಲ್ಲಿ 893 ರೂ. ದರ ಇದೆ ಎಂದು ಅಸಮದಾನ ವ್ಯಕ್ತಪಡಿಸಿ, ಹಿಂದಿನ ಆದೇಶದ ಪ್ರಕಾರ ದರ ಪಡೆಯುವಂತೆ ತಿಳಿಸಿದರು. ಈ ಕುರಿತಂತೆ ಕಾರ್ಖಾನೆಯ ಅಧಿಕಾರಿಗಳು ಪರಿಶೀಲಿಸಿ ದರ ಕಡಿಮೆಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕಾರ್ಖಾನೆಗೆ ತೆಗೆದುಕೊಂಡು ಬಂದ ಕಬ್ಬನ್ನು ಕೂಡಲೇ ತೂಕ ಮಾಡದೇ 2-3 ದಿನ ತಡವಾಗಿ ತೂಕ ಮಾಡುವುದರಿಂದ ಕಬ್ಬು ಒಣಗಿ ತೂಕ ಕಡಿಮೆಯಾಗುತ್ತಿದೆ. ಅಲ್ಲದೇ ಪ್ಲಾಂಟೇಷನ್ ಸ್ಲಿಪ್ ಮತ್ತು ಆದ್ಯತಾ ಪಟ್ಟಿ ನೀಡಬೇಕು. ಪ್ರತಿದಿನ ರಿಕವರಿಯನ್ನು ಪಾರದರ್ಶಕವಾಗಿ ತೋರಿಸುವಂತೆ ರೈತರು ಆಗ್ರಹಿಸಿದರು. ಜಿಲ್ಲೆಯ ಕಬ್ಬು ಬೆಳಗಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ಗೊಂದಲ ಮತ್ತು ಸಮಸ್ಯೆಗಳಿಗೆ ಆಸ್ಪದ ನೀಡದಂತೆ ಸಕ್ಕರೆ ಕಾರ್ಖಾನೆಯು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
ಉಳಿದಂತೆ ಹಿಂದಿನ ದಾಖಲೆಗಳನ್ನು ಪರಿಶೀಲಿಸಿ 2016-17 ರಲ್ಲಿನ ಎಫ್.ಆರ್.ಪಿ ಮೇಲಿನ ಹೆಚ್ಚುವರಿ ಬಾಕಿ ಮೊತ್ತ ರೂ.305 ರೂಪಾಯಿಗಳನ್ನು ಬೆಳಗಾರರಿಗೆ ಪಾವತಿಸುವಂತೆ ತಿಳಿಸಿದರು. ಈ ಹಿಂದೆ ರೈತರ ಮೇಲೆ ಕಾರ್ಖಾನೆ ದಾಖಲಿಸಿರುವ ಪ್ರಕರಣಗಳ ವಿವರ ಪಡೆದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಕಾರವಾರ ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್, ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್, ಇ.ಐ.ಡಿ.ಪ್ಯಾರಿ (ಇಂಡಿಯಾ) ಪ್ರೈ.ಲಿ ವ್ಯವಸ್ಥಾಪಕ ವೆಂಕಟರಾವ್, ಕಬ್ಬು ಬೆಳಗಾರರ ಮುಖಂಡರು ಮತ್ತು ರೈತ ಮುಖಂಡರು ಮತ್ತಿತರರು ಭಾಗವಹಿಸಿದ್ದರು.
ಉತ್ತರ ಕನ್ನಡ
Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
Sirsi News: ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ಮನೆಯ ಹಿಂಬಾಗದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ ತುಂಡುಗಳನ್ನು ಅರಣ್ಯ ಸಂಚಾರಿದಳ ವಶಪಡಿಸಿಕೊಂಡಿದ್ದಾರೆ.
ಶಿರಸಿ: ಮನೆಯ ಹಿಂಬಾಗದಲ್ಲಿ ಅಕ್ರಮವಾಗಿ (Illegal) ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ 15 ಶ್ರೀಗಂಧದ (Sandalwood) ತುಂಡುಗಳನ್ನು ಅರಣ್ಯ ಸಂಚಾರಿದಳ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೂರು ಗ್ರಾಮದಲ್ಲಿ ನಡೆದಿದೆ.
ನರೂರು ಗ್ರಾಮದ ಸದಾನಂದ ಬಸಪ್ಪ ಗೌಡ ಅವರ ಮನೆಯ ಹಿಂಬಾಗದಲ್ಲಿ ಕಾನೂನು ಬಾಹಿರವಾಗಿ ಶ್ರೀಗಂಧದ ತುಂಡುಗಳನ್ನು ದಾಸ್ತಾನು ಇಟ್ಟಿರುವ ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಸುಮಾರು 2 ಲಕ್ಷ 25 ಸಾವಿರ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತನಾದ ಸದಾನಂದ ಬಸಪ್ಪ ಗೌಡ ತಲೆಮರೆಸಿಕೊಂಡಿದ್ದು ಆರೋಪಿಗೆ ಹುಡುಕಾಟ ನಡೆದಿದೆ.
ಇದನ್ನೂ ಓದಿ: Oscars 2024: ಮುಂದಿನ ʻಆಸ್ಕರ್ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?
ಅರಣ್ಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀಜ್ ಅಹಮದ್ ಶೇಖ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಂ. ವಾಲಿ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಅಜಯ್ ನಾಯ್ಕ್, ಉಪ ವಲಯ ಅರಣ್ಯಾಧಿಕಾರಿಗಳಾದ ಇಲಿಯಾಸ್ ಶೇಖ್,ರಾಜು ಪೂಜಾರ,ಚಿದಂಬರ ಗೌಡ ಹಾಗೂ ಚಾಲಕ ನಂದೀಶ್ ಗಾಡಿಗೇರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಉತ್ತರ ಕನ್ನಡ
ದೇವಾಲಯದ ಅವಶೇಷಕ್ಕೆ ಕಲ್ಲೆಸೆದ ಅನ್ಯಕೋಮಿನ ಯುವಕರು; ಹಿಂದು ಸಂಘಟನೆಗಳು ಕಿಡಿ
ಅನ್ಯಕೋಮಿನ ಯುವಕ ಗುಂಪೊಂದು ಶಿವನ ದೇವಾಲಯದ ಅವಶೇಷಕ್ಕೆ ಕಲ್ಲೆಸೆದು ಹಾನಿ ಮಾಡಿರುವ ಘಟನೆ ನಡೆದಿದೆ.
ಕಾರವಾರ: ಇಲ್ಲಿನ ಜೋಯಿಡಾ ರಾಮನಗರದ ನಾಗೋಡಾ ಕ್ರಾಸ್ ಬಳಿ ಜಲಾಶಯ ವ್ಯಾಪ್ತಿಯಲ್ಲಿದ್ದ ಶಿವ ದೇವಾಲಯದ ಅವಶೇಷಕ್ಕೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.
ಅನ್ಯಕೋಮಿನ ಯುವಕರು ಈ ಕೃತ್ಯ ಎಸಗಿದ್ದು, ಹಿಂದು ಸಂಘಟನೆಗಳು ಕಿಡಿಕಾರಿದ್ದಾರೆ. ಸೂಪಾ ಜಲಾಶಯದಲ್ಲಿ ಶಿವನ ದೇವಾಲಯವು ಮುಳುಗಡೆಯಾಗಿತ್ತು. ಸದ್ಯ ಮಳೆ ಇಲ್ಲದೆ ನೀರು ಕಡಿಮೆಯಾಗುವ ವೇಳೆ ದೇವಾಲಯ ಕಾಣಿಸಿಕೊಳ್ಳುತ್ತದೆ. ಹೀಗೆ ಕಂಡ ದೇವಾಲಯದ ಕಲ್ಲುಗಳಿಗೆ ಹಾನಿ ಮಾಡಿದ್ದಾರೆ.
ಸೆ.18 ರಂದು ಅನ್ಯಕೋಮಿನ ಯುವಕರ ಗುಂಪು ಶಿವನ ದೇವಾಲಯದ ಅವಶೇಷಗಳನ್ನು ಕಲ್ಲಿನಿಂದ ಹೊಡೆದು ಹಾಕಿದ್ದಾರೆ. ದಾಂಡೇಲಿ ಮೂಲದ 6 ಮಂದಿ ಈ ದುಷ್ಕೃತ್ಯ ವೆಸಗಿದ್ದಾರೆ.
ಅವಶೇಷಗಳಿಗೆ ಹಾನಿ ಮಾಡುವುದನ್ನು ಸೆಲ್ಫಿ ವಿಡಿಯೋ ಮಾಡಿ ಹಾಕಿಕೊಂಡು ಹುಸೈನ್ ಶೇಖ್ ಎಂಬಾತ ತನ್ನ ಫೇಸ್‌ಬುಕ್‌ನಲ್ಲಿ ಹಾಕಿಕೊಂಡಿದ್ದಾನೆ. ಹಿಂದೂ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುತ್ತಿರುವವರ ಬಂಧನಕ್ಕೆ ಒತ್ತಾಯಿಸಿದ್ದಾರೆ. ಹಿಂದು ಸಂಘಟನೆಯ ಕಾರ್ಯಕರ್ತರು ರಾಮನಗರ ಪೊಲೀಸರಿಗೆ ಮನವಿ ಪತ್ರವನ್ನು ನೀಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!
Rain News : ರಾಜ್ಯದ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇರುವುದಿಲ್ಲ. ವಾರಾಂತ್ಯದವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು ಟು ಮೈಸೂರು ಭಾರಿ ಮಳೆ
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ರಾತ್ರಿಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕೆಲವೆಡೆ ಬಿರುಗಾಳಿ ಸಾಧ್ಯತೆ
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಇದನ್ನೂ ಓದಿ: Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಪ್ರಮುಖ ಸುದ್ದಿ19 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ11 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ17 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ43 mins ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್13 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ12 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ12 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಉತ್ತರ ಕನ್ನಡ13 hours ago
ದೇವಾಲಯದ ಅವಶೇಷಕ್ಕೆ ಕಲ್ಲೆಸೆದ ಅನ್ಯಕೋಮಿನ ಯುವಕರು; ಹಿಂದು ಸಂಘಟನೆಗಳು ಕಿಡಿ