ಸಾಗರ: ತಾಲೂಕಿನ ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ (Kargal Primary Health Centre) ಬೀಗ ಹಾಕಿದ್ದ ಘಟನೆ ಸೋಮವಾರ ರಾತ್ರಿ (ಫೆ.೨೦) ನಡೆದಿದೆ.
ಆರೋಗ್ಯ ಇಲಾಖೆಯಲ್ಲಿ ನ್ಯಾಷನಲ್ ಹೆಲ್ತ್ ಮಿಷನ್ ಯೋಜನೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಳ ಗುತ್ತಿಗೆ ನೌಕರರು ಕಳೆದ 9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಸಾಗರ ತಾಲೂಕಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ವೈದ್ಯಕೀಯ ಸಿಬ್ಬಂದಿ, ಆಯುಶ್ ವೈದ್ಯಕೀಯ ಸಿಬ್ಬಂದಿ, ಅರೆ ವೈದ್ಯಕೀಯ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ, ಕಚೇರಿ ಸಿಬ್ಬಂದಿ, ಆರೋಗ್ಯ ನಿರೀಕ್ಷಕರು ಸೇರಿದಂತೆ ಹಲವರು ಹೋರಾಟದಲ್ಲಿ ಭಾಗವಹಿಸಲು ತೆರಳಿದ್ದಾರೆ.
ಇದನ್ನೂ ಓದಿ: Viral Video: ಹಿರಿಯ ನಟಿ ರೇಖಾರನ್ನು ನೋಡುತ್ತಿದ್ದಂತೆಯೇ ಓಡಿ ಹೋಗಿ ತಬ್ಬಿಕೊಂಡ ಅಲಿಯಾ ಭಟ್
ಒಳ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕೆಂಬುದು ನೌಕರರ ಬೇಡಿಕೆಯಾಗಿದೆ. ಕಳೆದ 9 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸಿಲ್ಲ. ಇದರಿಂದಾಗಿ ನೌಕರರು ಪ್ರತಿಭಟನೆ ಮುಂದುವರಿಸಿದ್ದು, ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆಯಿಂದ ಸಂಜೆ ಏಳು ಗಂಟೆಯವರೆಗೆ ಕರ್ತವ್ಯ ನಿರ್ವಹಿಸಿದ ವೈದ್ಯರು ಹಾಗೂ ಸಿಬ್ಬಂದಿ ದಿಢೀರನೆ ರಾತ್ರಿ 8 ಗಂಟೆಗೆ ಆಸ್ಪತ್ರೆಗೆ ಬೀಗ ಹಾಕಿ ಹೋಗಿದ್ದಾರೆ.
ಇದನ್ನೂ ಓದಿ: Prithvi Shaw: ಪೃಥ್ವಿ ಶಾ ಕಾರಿನ ಮೇಲೆ ದಾಳಿ: ನಟಿ ಸಪ್ನಾ ಗಿಲ್ ಸೇರಿ ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ
24X7 ಸೇವೆ ಒದಗಿಸುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಈ ರೀತಿ ಬೀಗ ಹಾಕಿದ್ದನ್ನು ಕಂಡ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೂಡ ನಡೆದಿದೆ. ಈ ಬಗ್ಗೆ ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಹಾಕಿದ ಬೀಗವನ್ನು ತಾಲೂಕು ಆರೋಗ್ಯ ಅಧಿಕಾರಿಗಳು ತೆಗೆಸಿದ್ದಾರೆ ಎನ್ನಲಾಗಿದೆ.