Site icon Vistara News

Sagara News | 30ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ, ಫುಡ್ ಪಾಯಿಸನ್ ಶಂಕೆ

Food Poisoning sarkari samudaya arogya kendra

ಸಾಗರ: (Sagara News)ತಾಲೂಕಿನ ಆನಂದಪುರಂ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ (ಡಿ.೨೬) ವಾಂತಿ ಭೇದಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ವಾಂತಿ ಭೇದಿಯಿಂದ ೩೦ಕ್ಕೂ ಹೆಚ್ಚು ಜನರು ಸಾಲುಸಾಲಾಗಿ ಬಂದು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ದಿಢೀರನೇ ವಾಂತಿ ಭೇದಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸಾರ್ವಜನಿಕರು ಹೆದರುವ ಅಗತ್ಯವಿಲ್ಲ. ಮನೆಯಲ್ಲಿ ಕುದಿಸಿ ಆರಿಸಿದ ನೀರು ಉಪಯೋಗಿಸುವ ಜೊತೆಗೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ವಾಂತಿ ಭೇದಿ ಕಾಣಿಸಿಕೊಂಡವರು ಆಸ್ಪತ್ರೆಗೆ ತಕ್ಷಣ ಬಂದು ತಪಾಸಣೆಗೆ ಒಳಪಡಬೇಕು ಎಂದು ವೈದ್ಯರು ಸಲಹೆ ನೀಡಿದರು.

ಇದನ್ನೂ ಓದಿ | Congress Protest | ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ 10 ಅಡಿ ಆಳದ ಚರಂಡಿಗೆ ಬಿದ್ದ ಯೂತ್‌ ಕಾಂಗ್ರೆಸ್ ಕಾರ್ಯಕರ್ತ

ಈ ಕುರಿತು ಮಾತನಾಡಿದ ವೈದ್ಯ ಡಾ. ಕಾಂತೇಶ್ ಜೆ. ಕುಮಾರ್, ಬೆಳಗ್ಗೆಯಿಂದ ೩೦ಕ್ಕೂ ಹೆಚ್ಚು ಜನರು ವಾಂತಿ ಭೇದಿ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ಬಂದು ದಾಖಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಸ್ವರೂಪ ಕಾಣಿಸಿಕೊಂಡಿಲ್ಲ. ಭಾನುವಾರ (ಡಿ.೨೫) ರಾತ್ರಿ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿದ್ದರಿಂದ ಫುಡ್ ಪಾಯಿಸನ್ ಆಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಲಾಗಿದ್ದು, ಶುದ್ಧವಾದ ನೀರು ಪೂರೈಕೆ ಮಾಡಲು ತಿಳಿಸಲಾಗಿದೆ. ಸಾರ್ವಜನಿಕರು ಸಹ ಸ್ವಚ್ಛತೆ ಕಾಯ್ದುಕೊಳ್ಳುವತ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ಇದನ್ನೂ ಓದಿ | Border Dispute | ಕರ್ನಾಟಕ ಆಕ್ರಮಿತ ಮಹಾರಾಷ್ಟ್ರವನ್ನು ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ, ಉದ್ಧವ್‌ ಹೊಸ ಉಪಟಳ

Exit mobile version