Site icon Vistara News

Sagara News: ಕರ್ನಾಟಕದಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಶಾಸಕ ಹರತಾಳು ಹಾಲಪ್ಪ

MLA Haratalu Halappa sagara

#image_title

ಸಾಗರ: “ಈಶಾನ್ಯ ರಾಜ್ಯಗಳಾದ (north-eastern states) ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ” ಎಂದು ಶಾಸಕ ಎಚ್. ಹರತಾಳು ಹಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈಶಾನ್ಯ ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಹಿನ್ನೆಲೆಯಲ್ಲಿ ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ನಗರ ಮಂಡಲ ವತಿಯಿಂದ ಗುರುವಾರ (ಮಾ.9) ಹಮ್ಮಿಕೊಳ್ಳಲಾಗಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನೂ ಓದಿ: Lokayukta Raid: ಬಿಜೆಪಿ ಟಿಕೆಟ್‌ ಆಕಾಂಕ್ಷೆಗೂ ಸಿಜೆಐ ಪತ್ರಕ್ಕೂ ಸಂಬಂಧವಿಲ್ಲ: ಮಾಡಾಳ್‌ ಪ್ರಕರಣದ ಕುರಿತು ವಿವೇಕ್‌ ರೆಡ್ಡಿ ಹೇಳಿಕೆ

“ಹಿಂದಿನ ಎಲ್ಲ ಸರ್ಕಾರಗಳು ಈಶಾನ್ಯ ರಾಜ್ಯವನ್ನು ಕಡೆಗಣಿಸಿದ್ದವು. ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ಈಶಾನ್ಯ ರಾಜ್ಯಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದರು. ಶಿಕ್ಷಣ, ಆರೋಗ್ಯ ಮತ್ತು ರಕ್ಷಣೆಗೆ ಹೆಚ್ಚಿನ ಒತ್ತು ನೀಡಿದ್ದರು. ಇದು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ಸು ಕಂಡಿದ್ದು, ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಸಹ ಅಭಿವೃದ್ಧಿ ಆಗಿದೆ. ಜಿಲ್ಲೆ, ತಾಲೂಕು ಕೇಂದ್ರಗಳು ಸಮಗ್ರ ಅಭಿವೃದ್ಧಿ ಕಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನರು ಬಿಜೆಪಿಯನ್ನು ಆಶೀರ್ವದಿಸಲಿದ್ದಾರೆ” ಎಂದು ಹೇಳಿದರು.

“ಮಾ. 17ರಂದು ಸಾಗರಕ್ಕೆ ಕೆ.ಎಸ್.ಈಶ್ವರಪ್ಪ ನೇತೃತ್ವದ ವಿಜಯ ಸಂಕಲ್ಪ ಯಾತ್ರೆ ಬರಲಿದ್ದು, ಸುಮಾರು 25 ಸಾವಿರ ಜನರನ್ನು ಒಳಗೊಂಡ ಬೃಹತ್ ಸಮಾವೇಶ ನಡೆಯಲಿದೆ” ಎಂದು ಹೇಳಿದರು.

ಇದನ್ನೂ ಓದಿ: NIMMBUS App : ಬಿಎಂಟಿಸಿಯ ನಿಮ್ಮಬಸ್‌ ಆ್ಯಪ್ ಮುಂದಿನ ವಾರ ಬಿಡುಗಡೆ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, “ಈಶಾನ್ಯ ರಾಜ್ಯಗಳ ಫಲಿತಾಂಶ ಕರ್ನಾಟಕ ರಾಜ್ಯದ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಸಹ ಬಿಜೆಪಿ ಅತಿ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚನೆ ಮಾಡಲಿದೆ. ಮೋದಿಯವರ ನೇತೃತ್ವದಲ್ಲಿ ಮುಂದಿನ ದಿನಗಳಲ್ಲಿ ದೇಶದ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸ್ಥಾಯಿ ಸಮಿತಿಯ ಅಧ್ಯಕ್ಷ ಅರವಿಂದ ರಾಯ್ಕರ್, ಪ್ರಮುಖರಾದ ಆರ್. ಶ್ರೀನಿವಾಸ್ ಮೇಸ್ತ್ರಿ, ಬಿ.ಎಚ್.ಲಿಂಗರಾಜ್, ಮೈತ್ರಿ ಪಾಟೀಲ್, ಎಂ.ಆರ್.ಮಹೇಶ್, ರಾಜು ಮೇಸ್ತ್ರಿ, ಭಾವನಾ ಸಂತೋಷ್, ಸವಿತಾ ವಾಸು, ಪ್ರೇಮ ಸಿಂಗ್, ಭಾಷಾ ಸಾಬ್, ಸತೀಶ್ ಮೊಗವೀರ, ಸಂತೋಷ್ ಶೇಟ್, ವಿನಾಯಕ ರಾವ್ ಇನ್ನಿತರರು ಹಾಜರಿದ್ದರು.

Exit mobile version