Site icon Vistara News

Science Day: ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಮೂಲ ವಿಜ್ಞಾನ ಕುರಿತು ಅರಿವು ಮೂಡಿಸುವ ಅಗತ್ಯವಿದೆ: ಡಾ. ರಾಜನಂದಿನಿ ಕಾಗೋಡು

Dr Rajnandini Kagodu International Science Day sagara

#image_title

ಸಾಗರ: “ವಿಜ್ಞಾನ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿದೆ. ವಿಜ್ಞಾನ, ತಂತ್ರಜ್ಞಾನ (International Science Day) ಹೊರತುಪಡಿಸಿದ ಬದುಕು ನೆನಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರೋಟರಿ ರಕ್ತನಿಧಿ ಕೇಂದ್ರದ ಗೌರವಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ತಿಳಿಸಿದರು.

ಅಂತಾರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಇಲ್ಲಿನ ಜ್ಞಾನಸಾಗರ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಮತ್ತು ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಜೀವ ರಕ್ಷಕ ಪ್ರಥಮ ಚಿಕಿತ್ಸೆ ಮತ್ತು ಹೃದಯ ಮತ್ತು ಪ್ರಚೋದಕ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Sonia Gandhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಮತ್ತೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

“ಪ್ರಾಥಮಿಕ ಹಂತದಿಂದಲೇ ಮಕ್ಕಳಿಗೆ ಮೂಲ ವಿಜ್ಞಾನ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವುದನ್ನು ತರಬೇತಿ ಮೂಲಕ ಕಲಿತುಕೊಳ್ಳಬೇಕು. ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿ ಯಾವ್ಯಾವ ಔಷಧ ಇರುತ್ತದೆ. ಅದನ್ನು ಯಾವ ಸಂದರ್ಭದಲ್ಲಿ ಯಾವ ರೀತಿ ಬಳಕೆ ಮಾಡಬೇಕು. ಅಪಘಾತ ಇನ್ನಿತರೆ ಸಂದರ್ಭದಲ್ಲಿ ಯಾವ ರೀತಿ ತುರ್ತು ಚಿಕಿತ್ಸೆ ನೀಡಿ ಗಾಯಾಳುಗಳನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಬಹುದು ಎನ್ನುವುದರ ಕುರಿತು ಇಂತಹ ತರಬೇತಿ ಶಿಬಿರಗಳಲ್ಲಿ ಕಲಿತುಕೊಳ್ಳಬಹುದು” ಎಂದು ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಬಿ.ಜಿ. ಸಂಗಮ್ ಕಾರ್ಯದರ್ಶಿ ಡಾ. ಕಿಶನ್ ಭಾಗವತ್, ಡಾ. ಪುಟ್ಟಪ್ಪ ಬೇತೂರು, ಡಾ. ಶಿವಯೋಗಿ ಬಿ. ಮಂಡಕ್ಕಿ, ಸಂಜಯ ವಿದ್ಯಾ ಕೇಂದ್ರದ ಕಾರ್ಯದರ್ಶಿ ಅನುರಾಧಾ ಕಾಗೋಡು ಉಪಸ್ಥಿತರಿದ್ದರು.

ಇದನ್ನೂ ಓದಿ: SBI Account : ಹಲವು ಗ್ರಾಹಕರ ಎಸ್‌ಬಿಐ ಅಕೌಂಟ್‌ನಿಂದ 295 ರೂ. ಕಡಿತ; ಕಾರಣವೇನು?

Exit mobile version