Site icon Vistara News

ನವೆಂಬರ್ 11ರಿಂದ 13ರವರೆಗೆ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ್ 11 ರಿಂದ 13 ರವರೆಗೆ ನಡೆಸಲು ನಿರ್ಧರಿಸಲಾಗಿದೆ.

ಕನಕದಾಸರ ಜಯಂತಿಯಂದು ಸಮ್ಮೇಳನ ಆರಂಭಿಸಲು ನಿರ್ಧಾರ ಕೈಗೊಂಡಿದ್ದು, ಕನ್ನಡ ಸಾಹಿತ್ಯ ಪರಿಷತ್ ಸಮ್ಮುಖದಲ್ಲಿ ಸರಕಾರ ಅಧಿಕೃತ ಘೋಷಣೆ ಹೊರಡಿಸಲಿದೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಕಲಬುರಗಿಯಲ್ಲಿ ಹೇಳಿದ್ದಾರೆ.

ಎರಡು ಮೂರು ದಿನಗಳಲ್ಲಿ ಸರ್ಕಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ೨೦೨೧ ರಲ್ಲಿ ನಡೆಯಬೇಕಾಗಿತ್ತು. ಆದರೆ, ಕೊರೊನಾ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ನಡೆಸಲು ಸಾಧ್ಯವಾಗಿರಲಿಲ್ಲ. ಅಂತೆಯೇ ೨೦೨೨ರ ಆರಂಭದಲ್ಲೂ ನಡೆಸಲು ಯೋಜನೆ ರೂಪಿಸಲಾಗಿತ್ತು. ಅದು ಕೂಡ ಕೈಗೂಡಿರಲಿಲ್ಲ. ಇದೀಗ ಹೊಸ ದಿನಾಂಕವನ್ನು ಕನ್ನಡ ಸಾಹಿತ್ಯ ಪರಿಷತ್‌ ಪ್ರಕಟಿಸಿದೆ. ಇದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರಲ್ಲಿ ನಡೆಯುವ ಕನ್ನಡದ ಬೃಹತ್‌ ಕಾರ್ಯಕ್ರಮವಾಗಿದೆ.

ಇದನ್ನೂ ಓದಿ | ಕನ್ನಡ ಸಾಹಿತ್ಯ ಪರಿಷತ್ತಿನ ಹಲವು ನಿಯಮಗಳಿಗೆ ತಿದ್ದುಪಡಿ; ಸರ್ಕಾರದಿಂದ ಒಪ್ಪಿಗೆ

Exit mobile version