Site icon Vistara News

ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಅಂಶಗಳಿರುವ ಪುಸ್ತಕ ಮಾರಾಟ; ಭದ್ರಾವತಿ ಠಾಣೆಯಲ್ಲಿ ಪ್ರಕರಣ ದಾಖಲು

ಮತಾಂತರ

ಶಿವಮೊಗ್ಗ: ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಅಂಶಗಳಿರುವ ಪುಸ್ತಕ ಮಾರಾಟಕ್ಕೆ ಕಡಿವಾಣ ಹಾಕಬೇಕು ಹಾಗೂ ಪುಸ್ತಕ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ʼಗೀತೆಯೇ ನಿನ್ನ ಜ್ಞಾನ ಅಮೃತʼ ಎಂಬ ಹೆಸರಿನ ಭಗವದ್ಗೀತೆ ಮುಖಪುಟ ಹೋಲುವ ಪುಸ್ತಕವನ್ನು ಜಿಲ್ಲೆಯ ಭದ್ರಾವತಿ ತಾಲೂಕಿನ ಹಲವೆಡೆ ಮಾರಾಟ ಮಾಡಲಾಗುತ್ತಿದೆ. ಪುಸ್ತಕದಲ್ಲಿ ಹಿಂದೂಗಳ ಭಾವನೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಅಂಶಗಳಿವೆ. 150 ರೂಪಾಯಿ ಬೆಲೆಯ ಪುಸ್ತಕವನ್ನು ಕೇವಲ 10 ರೂಪಾಯಿಗೆ ಪುಸ್ತಕ ಮಾರಾಟ ಮಾಡಲಾಗುತ್ತಿದೆ. ಇದರ ಹಿಂದೆ ಹಿಂದೂಗಳನ್ನು ಬೇರೆ ಧರ್ಮಕ್ಕೆ ಮತಾಂತರ ಮಾಡುವ ಹುನ್ನಾರವಿದ್ದು, ಹಿಂದೂಗಳಿಗೆ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಕಿರಣ್‌ ಎಂಬುವವರು ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೆನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತಾಂತ ನಿಷೇಧ ಕಾಯ್ದೆಯಡಿ ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಅಂಶಗಳಿರುವ ಪುಸ್ತಕ ಮಾರಾಟ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

ಇದನ್ನೂ ಓದಿ | ಶಿವಮೊಗ್ಗ ಯುವಕನ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

Exit mobile version