ಕೋಲಾರ: ವಿಧಾನಸಭಾ ಚುನಾವಣೆ (Mulbagal Election Results) ಫಲಿತಾಂಶ ಹೊರಬಿದ್ದಿದ್ದು, ಜಿಲ್ಲೆಯ ಮುಳಬಾಗಿಲು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಇವರು ಸಮೀಪದ ಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿ. ಆದಿ ನಾರಾಯಣ ವಿರುದ್ಧ 26,268 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ 94,254 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿ.ಆದಿ ನಾರಾಯಣ 67,986 ಮತಗಳು ಹಾಗೂ ಬಿಜೆಪಿ ಅಭ್ಯರ್ಥಿ ಸುಂದರ್ ರಾಜ್.ಕೆ 9,163 ಮತಗಳನ್ನು ಪಡೆದಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಎಚ್. ನಾಗೇಶ್ 74,213 ಮತ ಪಡೆದು ಗೆಲುವು ದಾಖಲಿಸಿದ್ದರು. ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ 67,498 ಮತ ಪಡೆದಿದ್ದರು.
ಇದನ್ನೂ ಓದಿ | Magadi Election Results: ಮಾಗಡಿಯಲ್ಲಿ ಕಾಂಗ್ರೆಸ್‌ನ ಎಚ್.ಸಿ.ಬಾಲಕೃಷ್ಣಗೆ ಜಯ
2013ರಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ 2018ರಲ್ಲಿ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರವನ್ನು ಹೈಕೋರ್ಟ್ ಅಸಿಂಧುಗೊಳಿಸಿದ್ದರಿಂದ ನಾಮಪತ್ರ ತಿರಸ್ಕೃತಗೊಂಡಿತ್ತು. ಹೀಗಾಗಿ ಕಳೆದ ಬಾರಿ ಕೊತ್ತೂರು ಮಂಜುನಾಥ್ ಬೆಂಬಲದಿಂದ ಪಕ್ಷೇತರ ಅಭ್ಯರ್ಥಿ ಎಚ್.ನಾಗೇಶ್ ಗೆದ್ದಿದ್ದರು. ಆದರೆ ಎಚ್.ನಾಗೇಶ್ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರು ಮಹದೇವಪುರ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಅಲ್ಲಿ ಬಿಜೆಪಿಯ ಮಂಜುಳಾ ಅರವಿಂದ ಲಿಂಬಾವಳಿ ವಿರುದ್ಧ ಸೋಲಾಗಿದೆ.