Site icon Vistara News

Sand policy | ಬಡವರು, ಮಧ್ಯಮ ವರ್ಗಕ್ಕೂ ಮರಳು ಸಿಗಬೇಕು: ನೀತಿಯಲ್ಲಿ ತಿದ್ದುಪಡಿ ಮಾಡಲು ಸಿಎಂ ಸೂಚನೆ

sand mining

ಬೆಂಗಳೂರು: ಗಣಿಗಳ ಆಧುನೀಕರಣಕ್ಕೆ ಉನ್ನತ ಮಟ್ಟದ ಸಮಿತಿಯನ್ನು ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಸೂಚಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜತೆಗೆ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಅಗ್ಗದ ದರದಲ್ಲಿ ಮರಳು ಸಿಗುವಂತೆ ನೀತಿಗೆ ತಿದ್ದುಪಡಿ ತರುವಂತೆ ಸೂಚಿಸಿದರು.

ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವಷೇಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಮರಳು ನೀತಿ ತಿದ್ದುಪಡಿಗೆ ಸೂಚನೆ
ಬಡವರು ಮತ್ತು ಮಧ್ಯಮವರ್ಗದವರಿಗೆ ಸಹಾಯವಾಗುವಂತೆ ಮರಳು ನೀತಿಯನ್ನು ತಿದ್ದುಪಡಿ ಮಾಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು. ಕೆಲವರ ಕೈಯಲ್ಲಿರುವ ಮರಳು ಗಣಿಗಾರಿಕೆಯನ್ನು ಮುಕ್ತಗೊಳಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಎಂ ಎಸ್ ಎಂ ಈ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ| ಅಕ್ರಮ ಮರಳು ದಂಧೆ ಮಾಹಿತಿ ಕೊಟ್ಟ ವಿದ್ಯಾರ್ಥಿಗೆ ಚಿತ್ರಹಿಂಸೆ, ಜಿಲ್ಲಾಧಿಕಾರಿಗೆ ದೂರು

Exit mobile version