ಮಂಗಳೂರು: ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಮನೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘ ಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ (Mangalore News) ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ನಡೆದಿದೆ.
ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ಆರೋಪಿ. ಈತ ಹಿಂದು ಜಾಗರಣ ವೇದಿಕೆ ಪಕ್ಷಿಕೆರೆ ಘಟಕದ ಸಕ್ರೀಯ ಕಾರ್ಯಕರ್ತ ಎಂದು ತಿಳಿದು ಬಂದಿದೆ. ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದ್ದು, ಶುಕ್ರವಾರ ಬೆಳಕಿಗೆ ಬಂದಿದೆ.
ಇದನ್ನೂ ಓದಿ |
ಆರೋಪಿ ಸುಮಂತ್ ತನ್ನ ನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮೊಬೈಲ್ ಕ್ಯಾಮೆರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್‌ನನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಮುಲ್ಕಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಸಹಿತ ಆತನನ್ನು ವಶಕ್ಕೆ ಪಡೆದು ಠಾಣೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.