Site icon Vistara News

Sangolli Rayanna | ಸಾವರ್ಕರ್ ಫ್ಲೆಕ್ಸ್‌ ಬಳಿಕ ಈಗ ರಾಯಣ್ಣ ಭಾವಚಿತ್ರ ಹರಿದ ಕಿಡಿಗೇಡಿಗಳು!

sangoli rayannna

ಬೆಳಗಾವಿ: ಇಲ್ಲಿನ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Sangolli Rayanna) ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಸಾವರ್ಕರ್ ಫ್ಲೆಕ್ಸ್‌ ವಿವಾದ ನಡೆಯುತ್ತಿರುವ ಹೊತ್ತಿನಲ್ಲಿಯೇ ತಡರಾತ್ರಿ‌ ಸಂಗೊಳ್ಳಿ ರಾಯಣ್ಣರ ಭಾವಚಿತ್ರ ಹರಿದು ವಿಕೃತಿ ಮೆರೆದಿದ್ದಾರೆ.

ಖನಗಾಂವ ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಿ ರಾಯಣ್ಣರ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಆದರೆ, ಕಿಡಿಗೇಡಿಗಳು ಈ ಬೋರ್ಡ್‌ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹರಿದು ಬಿಸಾಡಿ ಹೋಗಿದ್ದಾರೆ.

ರಾಯಣ್ಣ ಅಭಿಮಾನಿಗಳ ಆಕ್ರೋಶ

ಪ್ರತಿಭಟನೆಗೆ ಮುಂದಾದ ಗ್ರಾಮಸ್ಥರು

ವಿಷಯ ತಿಳಿಯುತ್ತಿದ್ದಂತೆ ಕಿಡಿಗೇಡಿಗಳ ಕೃತ್ಯ ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಟಯರ್‌ಗೆ ಬೆಂಕಿ ಹಚ್ಚಿ ಖನಗಾಂವ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ ನಿಯಂತ್ರಿಸಿದ್ದಾರೆ.

ಇದನ್ನೂ ಓದಿ | ತುಮಕೂರಲ್ಲಿ ಸಾವರ್ಕರ್‌ ಪಾರ್ಕ್‌ ಸ್ಥಾಪಿಸಿದ್ದೇ ಕಾಂಗ್ರೆಸ್‌, ಸ್ವಾತಂತ್ರ್ಯ ವೀರ ಅಂದಿದ್ದರು ಕಾಂಗ್ರೆಸ್‌ ನಾಯಕರು!

Exit mobile version