Sanjay Dutt: ಕನ್ನಡದ 'ಕೆ.ಡಿ' ಸಿನಿಮಾ ಶೂಟಿಂಗ್‌ ವೇಳೆ ಸಂಜಯ್‌ ದತ್‌ಗೆ ಗಾಯ? ಸುದ್ದಿ ಅಲ್ಲಗಳೆದ ಅಧೀರ - Vistara News

ಕರ್ನಾಟಕ

Sanjay Dutt: ಕನ್ನಡದ ‘ಕೆ.ಡಿ’ ಸಿನಿಮಾ ಶೂಟಿಂಗ್‌ ವೇಳೆ ಸಂಜಯ್‌ ದತ್‌ಗೆ ಗಾಯ? ಸುದ್ದಿ ಅಲ್ಲಗಳೆದ ಅಧೀರ

Sanjay Dutt: ಬೆಂಗಳೂರಿನ ಮಾಗಡಿ ರಸ್ತೆಯ ಸೀಗೇನಹಳ್ಳಿಯಲ್ಲಿ ಶೂಟಿಂಗ್‌ ಮಾಡುವಾಗ ಸಂಜಯ್‌ ದತ್‌ ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ಆದರೆ, ಈ ವರದಿಗಳನ್ನು ಬಾಲಿವುಡ್‌ ನಟ ತಿರಸ್ಕರಿಸಿದ್ದಾರೆ.

VISTARANEWS.COM


on

Sanjay Dutt rubbishes baseless reports of getting injured on the sets of KD Kannada Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೆಜಿಎಫ್‌-ಚಾಪ್ಟರ್‌ 2 ಸಿನಿಮಾದ ಮೂಲಕ ಕರ್ನಾಟಕದ ಸಿನಿಪ್ರಿಯರ ಮನಗೆದ್ದಿರುವ ಬಾಲಿವುಡ್‌ ಖ್ಯಾತ ನಟ ಸಂಜಯ್‌ ದತ್‌ (Sanjay Dutt) ಅವರಿಗೆ ಧ್ರುವ ಸರ್ಜಾ ನಟನೆಯ ಕೆ.ಡಿ ಚಿತ್ರದ ಶೂಟಿಂಗ್‌ ವೇಳೆ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಮಾಗಡಿ ರಸ್ತೆಯ ಸೀಗೇನಹಳ್ಳಿಯಲ್ಲಿ ಶೂಟಿಂಗ್‌ ಮಾಡುವಾಗ ಸಂಜಯ್‌ ದತ್‌ ಅವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಆದರೆ, ಸಿನಿಮಾ ಶೂಟಿಂಗ್‌ ಬಳಿಕ ಸ್ಪಷ್ಟನೆ ನೀಡಿರುವ ಸಂಜಯ್‌ ದತ್, “ನನಗೆ ಗಾಯಗಳಾಗಿವೆ ಎಂಬ ವರದಿಯೇ ಸುಳ್ಳು” ಎಂದು ಟ್ವೀಟ್‌ ಮಾಡಿದ್ದಾರೆ.

“ನನಗೆ ಗಾಯಗಳಾಗಿವೆ ಎಂಬ ವರದಿ ಕೇಳಿಬಂದಿವೆ. ಆದರೆ, ಈ ವರದಿಗಳೆಲ್ಲ ಆಧಾರರಹಿತ ಎಂಬುದಾಗಿ ನಿಮಗೆಲ್ಲ ಸ್ಪಷ್ಟಪಡಿಸಲು ಇಚ್ಛಿಸುತ್ತೇನೆ. ದೇವರ ಆಶೀರ್ವಾದದಿಂದ ನಾನು ಆರೋಗ್ಯವಾಗಿದ್ದೇನೆ. ನಾನು ಕೆ.ಡಿ ಸಿನಿಮಾ ಶೂಟಿಂಗ್‌ನಲ್ಲಿ ನಿರತನಾಗಿದ್ದು, ಇಡೀ ತಂಡವು ಹೆಚ್ಚಿನ ಕಾಳಜಿ ವಹಿಸುತ್ತಿದೆ. ನಿಮ್ಮ ಕಾಳಜಿಗೆ ಧನ್ಯವಾದಗಳು” ಎಂದು ಸಂಜಯ್‌ ದತ್‌ ಅವರು ಟ್ವೀಟ್‌ ಮೂಲಕ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಜಿಎಫ್‌-ಚಾಪ್ಟರ್‌ 2 ಚಿತ್ರದಲ್ಲಿ ಅಧೀರನ ಪಾತ್ರದ ಮೂಲಕ ಸಂಜಯ್‌ ದತ್‌ ಅವರು ಕರ್ನಾಟಕದಲ್ಲಿ ಮತ್ತಷ್ಟು ಮನೆಮಾತಾಗಿದ್ದಾರೆ. ಹಾಗಾಗಿ, ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ನಟಿಸಲು ಉತ್ಸುಕರಾಗಿದ್ದಾರೆ. ಸದ್ಯ ಅವರು ಪ್ರೇಮ್‌ ನಿರ್ದೇಶನ, ಧ್ರುವ ಸರ್ಜಾ ನಟನೆಯ ಕೆ.ಡಿ: ದಿ ಡೆವಿಲ್‌ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕೆ.ಡಿ ಸಿನಿಮಾ ಕುರಿತು ಮಾತನಾಡಿದ ಅವರು, “ನಾನು ಕೆಜೆಎಫ್‌ ಸಿನಿಮಾದಲ್ಲಿ ನಟಿಸಿದ್ದೇನೆ. ಈಗ ಪ್ರೇಮ್‌ ನಿರ್ದೇಶನದಲ್ಲಿ ಕೆ.ಡಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಾನು ಈ ಸಿನಿಮಾದಲ್ಲಿ ಇನ್ನಷ್ಟು ಉತ್ತಮವಾಗಿ ನಟಿಸಲು ಯತ್ನಿಸುತ್ತಿದ್ದೇನೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಹಾಗೆಯೇ, ನನಗೆ ದಕ್ಷಿಣ ಭಾರತದ ಮತ್ತಷ್ಟು ಸಿನಿಮಾಗಳಲ್ಲಿ ನಟಿಸುವ ಇಚ್ಛೆ ಇದೆ” ಎಂದು ಅವರು ಹೇಳಿದ್ದಾರೆ.

ಕೆಜಿಎಫ್‌ 2 ಬಳಿಕ ಬಾಲಿವುಡ್‌ನಲ್ಲೂ ಸಂಜಯ್‌ ದತ್‌ ಅವರು ತುಂಬ ಬ್ಯುಸಿಯಾಗಿದ್ದಾರೆ. ಅಕ್ಷಯ್‌ ಕುಮಾರ್‌, ಸುನೀಲ್‌ ಶೆಟ್ಟಿ, ಪರೇಶ್‌ ರಾವಲ್‌ ನಟನೆಯ ಹೇರಾ ಫೇರಿ 2 ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಇದರಲ್ಲಿ ಅವರು ಅಂಧ ಡಾನ್‌ ಆಗಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Suniel Shetty: ಸುನೀಲ್‌ ಶೆಟ್ಟಿಗೆ ಅಮಿತಾಭ್‌ ಬಚ್ಚನ್‌, ಸಂಜಯ್‌ ದತ್ ʻಅಣ್ಣಾʼ ಅಂತ ಕರೆಯುವುದೇಕೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Muda Scam: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಅರ್ಜಿಯ ಆದೇಶ ಆ.20ಕ್ಕೆ ಕಾಯ್ದಿರಿಸಿದ್ದು, ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ದೂರಿನ ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆ.20ಕ್ಕೆ ಕಾಯ್ದಿರಿಸಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಖಾಸಗಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಮುಡಾದಲ್ಲಿ ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳನ್ನು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದೆ. ಮೊದಲಿಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ದೂರಿನ ಸಂಬಂಧ ಅಂತಿಮ ಆದೇಶವನ್ನು ಆ.20ಕ್ಕೆ ಕಾಯ್ದಿರಿಸಿದರು. ಅದೇ ರೀತಿ ಮಾಹಿತಿ ಆರ್‌ಟಿಐ ಟಿ.ಜೆ.ಅಬ್ರಹಾಂ ದಾಖಲಿಸಿದ್ದ ಅರ್ಜಿ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದರು.

ಟಿ.ಜೆ.ಅಬ್ರಹಾಂ ವಾದ ಮಂಡನೆ; ನಕಲಿ ದಾಖಲೆ ಸೃಷ್ಟಿಸಿ ಜಾಗ ಮಾರಾಟ ಆರೋಪ

ಪ್ರಕರಣದಲ್ಲಿ ದೂರುದಾರ ಅಬ್ರಹಾಂ ಅವರೇ ವಾದ ಮಂಡಿಸಿ, ಮೈಸೂರಿನ ಹೊರವಲಯದ ಕೆಸರೆ ಗ್ರಾಮ ಹಾಗೂ ದೇವನೂರು ಗ್ರಾಮಗಳಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಹಿತಿ ನೀಡಿದರು. ಕೆಸರೆ ಗ್ರಾಮದಲ್ಲಿ ದೇವನೂರು ಬಡವಾಣೆ ನಿರ್ಮಾಣ ಮಾಡಲಾಗಿದೆ. ಆದರೆ, ಅಲ್ಲಿ ಜಮೀನೇ ಇಲ್ಲದಿದ್ದರೂ ದೇವರಾಜ್ ನಕಲಿ‌ ದಾಖಲೆ ಸೃಷ್ಟಿಸಿದ್ದಾನೆ. ನಕಲಿ ದಾಖಲೆಗಳ ಮೂಲಕ‌ ಸೃಷ್ಟಿಸಿದ ಜಾಗವನ್ನು ಮಲ್ಲಿಕಾರ್ಜುನಗೆ ಮಾರಾಟ ಮಾಡಿದ್ದ ಎಂದು ತಿಳಿಸಿದರು.

ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರೆವಿನ್ಯೂ ಲ್ಯಾಂಡ್ ಅನ್ನು ಕನ್ವರ್ಷನ್ ಮಾಡಲಾಗಿದೆ. ಬಳಿಕ 2010ರಲ್ಲಿ ಕಾನೂನು ಬಾಹಿರವಾಗಿ ಗಿಫ್ಟ್ ಡೀಡ್ ಮಾಡಲಾಗಿದೆ. ಅದರ ಫಲಾನುಭವಿ ಸಿದ್ದರಾಮಯ್ಯ ಅವರ ಪತ್ನಿಯಾಗಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬೋಗಸ್ ಕನ್ವರ್ಷನ್ ಆಗಿದೆ. ಜಿಲ್ಲಾಧಿಕಾರಿ ಜಾಗವನ್ನು ಪರಿಶೀಲನೆ ಮಾಡಿ ಕನ್ವರ್ಷನ್ ಮಾಡ್ಡಿದ್ದೇವೆ ಎನ್ನುವುದು ಸುಳ್ಳು. 2010ರಲ್ಲಿ ಪಾರ್ವತಿಯವರಿಗೆ ಕಾನೂನು ಬಾಹಿರವಾಗಿ ದಾನ ನೀಡಲಾಗಿದೆ ಎಂದು ಟಿ‌.ಜೆ. ಅಬ್ರಹಾಂ ತಿಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಈ ಜಾಗದ ಮಾಹಿತಿಯನ್ನು ಸಿದ್ದರಾಮಯ್ಯ ಮುಚ್ಚಿಟ್ಟಿದ್ದಾರೆ. 2011 ರಿಂದ 2014 ರವರೆಗೆ ಲೋಕಾಯುಕ್ತಕ್ಕೆ ಸಿದ್ದರಾಮಯ್ಯ ನೀಡಿದ್ದ ಮಾಹಿತಿಯಲ್ಲೂ‌ ಮುಚ್ಚಿಡಲಾಗಿದೆ. ಇವರು ಹೇಗೆ ದೇವನೂರು ಬಡಾವಣೆಯನ್ನು ಕೆಸರೆ ಗ್ರಾಮ ಮಾಡುತ್ತಾರೆ. ಹೇಗೆ ಬಡಾವಣೆಯನ್ನು ಕೃಷಿ ಭೂಮಿಯಲ್ಲಿ ಮಾಡುತ್ತಾರೆ? ಆದರೂ ಬಹಳ ಅಭಿವೃದ್ಧಿ ಹೊಂದಿದ ಅರ್ಜಿಯನ್ನು 55 ಕೋಟಿ 80 ಲಕ್ಷ ಬೆಲೆಯ ಸೈಟ್‌ಗಳ ನೀಡಿದ್ದಾರೆ. ಅದು ಕೂಡ ತುಂಬಾ ಡೆವಲಪ್ಮೆಂಟ್ ಆಗಿರುವ ಲೇಔಟ್ ನಲ್ಲಿ ನೀಡ್ತಾರೆ.

ಸಿದ್ದರಾಮಯ್ಯ ಪತ್ನಿಯ ಸ್ವಾಧೀನದಲ್ಲೇ ಇಲ್ಲದ ಜಾಗವನ್ನು ಹೇಗೆ ರಿಲೀಸ್ ಡೀಡ್ ನೀಡಲು ಹೇಗೆ ಸಾಧ್ಯ.? ಪಾರ್ವತಿ ಅವರು ಕ್ಲೈಂ ಮಾಡುವ ರೀತಿ ಕೃಷಿ ಭೂಮಿ ಇರಲೇ ಇಲ್ಲ. ಕೇವಲ ದಾಖಲೆಗಳನ್ನು ಮಾತ್ರ ಸೃಷ್ಟಿ ಮಾಡಿ ಪರಿಹಾರ ಪಡೆದಿದ್ದಾರೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಖಾಸಗಿ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರ ಕಾಯಿದೆ 17A ಸಿದ್ದರಾಮಯ್ಯ ಅವರಿಗೆ ಅನ್ವಯ ಆಗಲ್ಲ. ಪಿ.ಸಿ.ಆ್ಯಕ್ಟ್ 19ರ ಅಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ಕೋರ್ಟ್‌ಗೆ ಟಿ.ಜೆ.ಅಬ್ರಹಾಂ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತು.

ಏನಿದು ಕೋರ್ಟ್​ ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿರುವ ನಡುವೆಯೇ ಬೆಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮತ್ತೊಂದು ದೂರು ಸಲ್ಲಿಸಿದ್ದರು.

ಮೂಲ ಜಮೀನಿಗೆ ಮಾಲೀಕರೇ ಇಲ್ಲ. ಆ ಜಮೀನು ಸಿದ್ದರಾಮಯ್ಯ ಸಂಬಂಧಿಕರ ಹೆಸರಿಗೆ ಬಂದಿದೆ. ಅಲ್ಲಿಂದ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಉಡುಗೊರೆಯಾಗಿ ಬಂದಿದ್ದು, ಅಂತಹ ಜಮೀನಿಗೆ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ. ಇಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ | Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

Continue Reading

ಕರ್ನಾಟಕ

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Lakshmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸಚಿವರ ಮನೆಯ ಬಳಿ ಗೃಹ ಕಚೇರಿಗೆ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

VISTARANEWS.COM


on

Lakshmi Hebbalkar
Koo

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.

Continue Reading

ಧಾರವಾಡ

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Physical Abuse: ಧಾರವಾಡದಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ ಲಾಡ್ಜ್‌ಗೆ ಕರೆದುಕೊಂಡ ಹೋದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜತೆಗೆ ಆಕೆಯೊಂದಿಗೆ ಇದ್ದ ವಿಡಿಯೊ ಮಾಡಿಕೊಂಡು ಎಲ್ಲೆಡೆ ಹರಿಬಿಟ್ಟಿದ್ದಾನೆ. ಇತ್ತ ಬೆಂಗಳೂರಿನಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಗೃಹಿಣಿಯೊಬ್ಬಳು ಮೃತಪಟ್ಟಿದ್ದಾಳೆ.

VISTARANEWS.COM


on

By

Physical abuse
Koo

ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾನೆ.

ಆಗಸ್ಟ್ 8 ರಂದು ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ.

ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

ಪ್ರೀತಿಸಿ ಮದುವೆಯಾದ ಯುವತಿ ಸಾವು

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿದ್ದಾಲೇ. ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆಯಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ದುರ್ದೈವಿ.

ಕಳೆದ ಎರಡು ವರ್ಷಗಳಿಂದ ದುರ್ಗಮ್ಮ ಮಾರುತಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪೋಷಕರ ವಿರೋಧದ ನಡುವೆ ಮದುವೆಯಾಗಿ ನಂತರ ಎರಡು ಕುಟುಂಬಗಳು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ‌ ಮಾಡಿಕೊಂಡು ಜೀವನ ಮಾಡುತ್ತಿದ್ದರು.

ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಮಾರುತಿ ಹೊಡೆದು ಕಿರುಕುಳ ನೀಡುತ್ತಿದ್ದ. ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ‌ ಮಾಡಿಕೊಂಡು ದುರ್ಗಮ್ಮ ಊರಿಗೆ ಹೋಗಿದ್ದಳು. ಆದರೆ 15 ದಿ‌‌ನಗಳ ಹಿಂದೆ ಪತ್ನಿಯ ಮನವೊಲಿಸಿ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಇದೀಗ ದುರ್ಗಮ್ಮ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

Murder Case : ಪರಸ್ತ್ರೀ ಮೇಲೆ ಕಣ್ಣು ಹಾಕಿದ್ದ ಕಿರಾತಕನೊಬ್ಬ, ಆಕೆಯನ್ನು ಒಲಿಸಿಕೊಳ್ಳಲು ಸುಪಾರಿ ಕೊಟ್ಟು ಮಹಿಳೆಯ ಗಂಡನನ್ನೇ ಕೊಲ್ಲಿಸಿದ್ದಾನೆ. ಸುಪಾರಿ ಪಡೆದವರು ಅರೆಸ್ಟ್‌ ಆಗಿದ್ದು, ಮುಖ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

By

Murder Case
ಕೊಲೆ ಆರೋಪಿ ನಾಗಪ್ಪ ಹಾಗೂ ಹತ್ಯೆಯಾದ ಕಾಡಪ್ಪ
Koo

ಬೆಳಗಾವಿ: ಪರಸ್ತ್ರೀಯನ್ನು ಒಲಿಸಿಕೊಳ್ಳಲು ಕಿರಾತಕನೊಬ್ಬ ಆಕೆಯ ಗಂಡನಿಗೆ ಚಟ್ಟ ಕಟ್ಟಿದ್ದಾನೆ. ಪಾರ್ಟಿ ಮಾಡೋಣ ಬಾ ಎಂದು ಕರೆದಿದ್ದಾನೆ. ಬಳಿಕ ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ಕೊಲೆ (Murder Case) ಮಾಡಿ ಪರಾರಿ ಆಗಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಾಡಪ್ಪ ಶಿಗರಸಂಗಿ (42) ಕೊಲೆಯಾದ ದುರ್ದೈವಿ. ನಾಗಪ್ಪ ರೈನಾಪುರ ಎಂಬಾತ ಕೊಲ್ಲಲ್ಲು ಸುಪಾರಿ ಕೊಟ್ಟವನು. ಕೊಲೆಯಾದ ಕಾಡಪ್ಪನ ಪತ್ನಿಯ ಮೇಲೆ ಕಣ್ಣು ಹಾಕಿದ ನಾಗಪ್ಪ ಆಕೆಯನ್ನು ವ್ಯಾಮೋಹಿಸಿದ್ದ. ಹೀಗಾಗಿ ಕಾಡಪ್ಪನನ್ನು ಕೊಲ್ಲಲು 2.5 ಲಕ್ಷ ರೂ. ಸುಪಾರಿ ಕೊಟ್ಟಿದ್ದ.

ಕೊಲೆ ಮಾಡಲು ವ್ಯವಸ್ಥಿತ ಪ್ರೀ ಪ್ಲಾನ್ ಮಾಡಿದ್ದ ನಾಗಪ್ಪ, ಸುಪಾರಿ ಕೊಟ್ಟ ಆರೋಪಿ ಲಕ್ಷ್ಮಣ ಜತೆ ಕಡೆಯದಾಗಿ ಬೆನಕಟ್ಟಿಯ ಪೆಟ್ರೋಲ್ ಪಂಪ್ ಒಂದರಲ್ಲಿ ಕಾಣಿಸಿಕೊಂಡಿದ್ದ. ಇವರಿಬ್ಬರ ಚಲನವಲನ ಅಲ್ಲಿನ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮೊದಲು ಲಕ್ಷ್ಮಣನನ್ನು ಸೆರೆಹಿಡಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆಯ ಸಂಪೂರ್ಣ ಸಂಚು ಬಯಲಾಗಿದೆ. ಸದ್ಯ ಐವರು ಆರೋಪಿಗಳ ಪೈಕಿ ಲಕ್ಷ್ಮಣ ವಿಠ್ಠಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ನಾಗಪ್ಪ, ಶಿವಾನಂದ ಬಸವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Muda Scam
ಕರ್ನಾಟಕ7 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ15 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ21 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್26 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್33 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ40 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್56 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌