ಮೈಸೂರು: ಪೊಲೀಸರಿಂದ ತಪ್ಪಿಸಿಕೊಂಡು ತಿರುಗಾಡುತ್ತಿದ್ದ ಸ್ಯಾಂಟ್ರೋ ರವಿ(Santro Ravi)ಯನ್ನು ಕೊನೆಗೂ ಬಂಧಿಸಲಾಗಿದೆ. ಆತನನ್ನು ಮೈಸೂರು ಜೈಲಿಗೆ ಕಳುಹಿಸಲಾಗಿದೆ. ಆದರೆ, ಈ ಜೈಲಿನಲ್ಲಿ ಸ್ಯಾಂಟ್ರೋ ರವಿಗೆ ವಿಶೇಷ ಸೌಲಭ್ಯ ಸಿಗಬಹುದು ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ.
ಇದಕ್ಕೆ ಕಾರಣವೂ ಇದೆ. ಮಹೇಶ್ ಕುಮಾರ್ ಅವರು ಸದ್ಯ ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷರಾಗಿದ್ದಾರೆ. ಈ ಜೈಲು ಅಧೀಕ್ಷಕರ ವರ್ಗಾವಣೆಗೆ ಸ್ಯಾಂಟ್ರೋ ರವಿ ಸಹಾಯ ಮಾಡಿದ್ದ ಎನ್ನಲಾಗಿದೆ. ಈ ವಿಷಯವನ್ನು ಆತನೇ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿಕೊಂಡಿದ್ದ. ಹೀಗಾಗಿ, ರವಿಗೆ ವಿಶೇಷ ಸವಲತ್ತು ಸಿಗಬಹುದೇ ಎಂಬರ್ಥದಲ್ಲಿ ಚರ್ಚೆಗಳು ನಡೆದಿವೆ.
ಕೇಂದ್ರ ಕಾರಾಗೃಹದ ಅಧೀಕ್ಷಕ ಮಹೇಶ್ ಕುಮಾರ್ ಎಸ್. ಜಿಗಣಿಗೆ ಶಿಫಾರಸು ಮಾಡಲಾಗಿತ್ತು. ಅಂದರಂತೆ ಅವರನ್ನು 05/10/2021ರಂದು ವರ್ಗಾವಣೆ ಮಾಡಲಾಗಿತ್ತು. ಗ್ರಾಮೀಣಾಭಿವೃದ್ಧಿ ಸಚಿವರ ಶಿಫಾರಸು ಮೇರೆಗೆ, ಗೃಹ ಮಂತ್ರಿ ಅರಗ ಜ್ಞಾನೇಂದ್ರ ಅವರಿಂದ ವರ್ಗಾವಣೆಗೆ ಸೂಚಿಸಿದ್ದರು. ಶಿವಮೊಗ್ಗದಿಂದ ಬೆಂಗಳೂರು ಕಾರಾಗೃಹದ ವರ್ಗಾವಣೆಗೆ ಸೂಚನೆ. ಸದ್ಯ ಮೈಸೂರು ಕೇಂದ್ರ ಕಾರಾಗೃಹದ ಅಧೀಕ್ಷಕರಾಗಿದ್ದಾರೆ.
ಅಹಮದಾಬಾದ್‌ನಲ್ಲಿ ಬಂಧಿಸಲ್ಪಟ್ಟ ಸ್ಯಾಂಟ್ರೋ ರವಿಯನ್ನು ಶನಿವಾರ ಮುಂಜಾನೆ ಮೈಸೂರಿಗೆ ಕರೆ ತರಲಾಗಿದ್ದು, ಬಳಿಕ ಕೆಲ ಹೊತ್ತು ವಿಚಾರಣೆ ನಡೆಸಿದ ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಕೋರ್ಟ್ ಆತನನ್ನು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಬೇಕೆಂಬ ವಿಚಾರಕ್ಕೆ ಸ್ಪಂದಿಸಿದ ಕೋರ್ಟ್ ಸೋಮವಾರ ಮತ್ತೆ ಅರ್ಜಿ ಸಲ್ಲಿಸಲು ಸೂಚಿಸಿದೆ.
ಇದನ್ನೂ ಓದಿ | Santro Ravi case | ಸ್ಯಾಂಟ್ರೋ ರವಿ ಬಂಧನದ ಬೆನ್ನಲ್ಲೇ ನಿಮಿಷಾಂಬಾ ದೇವಿ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್