Savarkar's Rath Yatra| ಸಿದ್ದರಾಮಯ್ಯ ತವರಿನಲ್ಲಿ ಸಾವರ್ಕರ್‌ ರಥಯಾತ್ರೆಗೆ ಬಿಎಸ್‌ವೈ ಚಾಲನೆ - Vistara News

ಕರ್ನಾಟಕ

Savarkar’s Rath Yatra| ಸಿದ್ದರಾಮಯ್ಯ ತವರಿನಲ್ಲಿ ಸಾವರ್ಕರ್‌ ರಥಯಾತ್ರೆಗೆ ಬಿಎಸ್‌ವೈ ಚಾಲನೆ

ಸಾವರ್ಕರ್‌ ಫ್ಲೆಕ್ಸ್‌ ವಿವಾದ ಎಲ್ಲೆಡೆ ಹಬ್ಬುತ್ತಿದ್ದಂತೆ ಈಗ ಸಾವರ್ಕರ್ ಪ್ರತಿಷ್ಠಾನದಿಂದ (Savarkar’s Rath Yatra) ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಾವರ್ಕರ್‌ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ.

VISTARANEWS.COM


on

Savarkar's Rath Yatra
ರಥಯಾತ್ರೆಗೆ ಅಂತಿಮ ಸಿದ್ಧತೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ರಾಜ್ಯದಲ್ಲಿ ಸಾವರ್ಕರ್‌ ಫ್ಲೆಕ್ಸ್‌ ವಿವಾದ ತಾರಕಕ್ಕೇರುತ್ತಿರುವಾಗಲೇ (Savarkar’s Rath Yatra) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರು ಮೈಸೂರಿನಲ್ಲಿ ಸಾವರ್ಕರ್ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ವೀರ ಸಾವರ್ಕರ್ ಹೆಸರಲ್ಲಿ ಸರಣಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿದ್ದು, ರಾಜ್ಯಾದ್ಯಂತ ಸಾವರ್ಕರ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಮೊದಲ ಭಾಗವಾಗಿ ಮೈಸೂರಲ್ಲಿ ಸಾವರ್ಕರ್ ರಥಯಾತ್ರೆ ನಡೆಸಲಾಗುತ್ತಿದೆ.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಬಳಿ ಬೆಳಗ್ಗೆ 11.೩೦ಕ್ಕೆ ರಥಯಾತ್ರೆಗೆ ಬಿಎಸ್‌ವೈ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾವಿರಾರು ಹಿಂದು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. 4 ವಿಧಾನಸಭಾ ಕ್ಷೇತ್ರದ 30 ಕಿಲೋಮೀಟರ್‌ವರೆಗೆ ರಥಯಾತ್ರೆ ಕ್ರಮಿಸಲಿದೆ.

ರಥಯಾತ್ರೆ ರೂಟ್‌ ಮ್ಯಾಪ್‌ ಹೀಗಿದೆ

ಅರಮನೆಯ ಕೋಟೆ ಆಂಜನೇಯ ದೇವಸ್ಥಾನದಿಂದ ಪ್ರಾರಂಭಗೊಳ್ಳುವ ರಥಯಾತ್ರೆ ಬನ್ನೂರು ರಸ್ತೆ ಮಾರ್ಗವಾಗಿ ಸಂಚಾರ ಮಾಡಲಿದೆ. ಬಳಿಕ ಯರಗನಹಳ್ಳಿ ವೃತ್ತ, ರಾಜ್‌ಕುಮಾರ್ ರಸ್ತೆ ಮೂಲಕ ಸಾಗಿ ಗಾಯಿತ್ರಿಪುರಂ ಬಳಸಿ ಕ್ಯಾತಮಾರನಹಳ್ಳಿ ಟೆಂಟ್ ವೃತ್ತ ಪ್ರವೇಶಿಸಲಿದೆ.

ನಂತರ ಉದಯಗಿರಿ ರಸ್ತೆ ಮುಖಾಂತರ ರಾಜೇಂದ್ರ ನಗರದ 1008 ಗಣಪತಿ ವೃತ್ತ, ಎಲ್.ಐ.ಸಿ ವೃತ್ತ, ಸಯ್ಯಾಜಿರಾವ್ ರಸ್ತೆ, ತಿಲಕ್‌ನಗರದಿಂದ ಬಂದು ಶನಿ ಮಹಾತ್ಮ ವೃತ್ತ, ಬಂಬೂಬಜಾರ್‌, ಪಡುವಾರಳ್ಳಿ ಬಳಸಿ ಮಾತೃಮಂಡಳಿ ವೃತ್ತದಲ್ಲಿ ರಥಯಾತ್ರೆ ಸಂಚಾರಿಸಲಿದೆ.

ಹುಣಸೂರು ರಸ್ತೆ, ಜೆಸಿಇ ಕಾಲೇಜು ರಸ್ತೆ, ಶಾರದಾದೇವಿನಗರ, ಹೈಟೆನ್ ರಸ್ತೆ, ರಾಮಕೃಷ್ಣ ಪರಮಹಂಸ ವೃತ್ತ, ವಿವೇಕಾನಂದ ವೃತ್ತ , ಡಿ.ಸಿ. ವೃತ್ತ , ನೃಪತುಂಗ ರಸ್ತೆ , ಪಂಚಮಂತ್ರ ಗಲ್ಲಿ ದಾಟಿ ಅಕ್ಷಯ ಭಂಡಾರ್, ನ್ಯೂ ಕಾಂತ ರಾಜೇ ಅರಸ್ ರಸ್ತೆ – ಜೆ.ಎಲ್.ಬಿ. ರಸ್ತೆ, ಚಾಮುಂಡಿಪುರಂ ವೃತ್ತದಿಂದ ಅಗ್ರಹಾರದಲ್ಲಿ ರಥಯಾತ್ರೆ ಮುಕ್ತಾಯವಾಗಲಿದೆ.

Savarkar's Rath Yatra
ಪೊಲೀಸ್‌ ಬಂದೋಬಸ್ತ್‌

ಬಿಗಿ ಭದ್ರತೆ

ಸಾವರ್ಕರ್ ರಥಯಾತ್ರೆ ಹಿನ್ನೆಲೆ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರೀಯ ದಳದಿಂದ ವೇದಿಕೆ ಬಳಿ ಇಂಚಿಂಚು ಜಾಗ ಪರಿಶೀಲನೆ ಮಾಡಲಾಗುತ್ತಿದೆ.

ಇದನ್ನೂ ಓದಿ | ವಿಜಯಪುರ ಕಾಂಗ್ರೆಸ್‌ ಕಚೇರಿಗೆ ಸಾವರ್ಕರ್‌ ಫೋಟೊ, ಮುತ್ತಿಗೆ; 20ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Karnataka Weather Forecast : ಹಲವು ದಿನದಿಂದ ಬಿಡುವು ಕೊಟ್ಟಿದ್ದ ವರುಣ ಮತ್ತೆ (Rain News) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಹಾಸನದಲ್ಲಿ ಸಿಡಿಲು ಬಡಿದು 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದಾರೆ.

VISTARANEWS.COM


on

By

Karnataka weather forecast
Koo

ಚಿಕ್ಕಬಳ್ಳಾಪುರ/ಹಾಸನ: ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಮಳೆ (Karnataka Weather Forecast) ಜತೆಗೆ ಸಿಡಿಲು ಬಡಿದು ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸುಮಾರು ಹದಿನೈದು ಮಂದಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಘಟನೆ ನಡೆದಿದೆ.

ಕೆ.ಬಿ.ಚಂದ್ರು ಎಂಬುವವರಿಗೆ ಸೇರಿದ ಗದ್ದೆಯಲ್ಲಿ 25 ಮಂದಿ ನಾಟಿ ಮಾಡುತ್ತಿದ್ದರು. ಈ ವೇಳೆ ಗುಡುಗು, ಸಿಡಿಲು ಸಹಿತ ದಿಢೀರ್ ಮಳೆ ಶುರುವಾಗಿತ್ತು. ಭತ್ತದ ಗದ್ದೆಯಲ್ಲಿ ನಾಟಿ ಮಾಡುತ್ತಿದ್ದ ವೇಳೆಯೇ ಸಿಡಿಲಾಘಾತಕ್ಕೆ ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದೆ.

ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಸೇರಿ ಹದಿನೈದು ಮಂದಿಗೆ ಸಿಡಿಲು ಬಡಿದಿದೆ. ಎಲ್ಲರಿಗೂ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಿಂಗಳ ಬಳಿಕ ಚಿಕ್ಕಬಳ್ಳಾಪುರದಲ್ಲಿ ವರುಣ ಪ್ರತ್ಯಕ್ಷ

ಇಷ್ಟು ದಿನ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು, ಉತ್ತರ ಒಳನಾಡಿನ ಸುತ್ತಮುತ್ತ ಮಳೆಯು ಅಬ್ಬರಿಸಿತ್ತು. ದಕ್ಷಿಣ ಒಳನಾಡಿನಲ್ಲಿ ಕಣ್ಮರೆಯಾಗಿದ್ದ ಮಳೆಯು ಇದೀಗ ಕಳೆದೆರಡು ದಿನಗಳಿಂದ‌ ವ್ಯಾಪಿಸಿದೆ. ಉತ್ತರ ಧ್ರುವದಿಂದ ದಕ್ಷಿಣ ಧ್ರುವದ ಕಡೆ ಮಳೆರಾಯ ಮುಖ ಮಾಡಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದು ತಿಂಗಳಿನಿಂದ ಬಿಡುವು ಕೊಟ್ಟಿದ್ದ ಮಳೆಯು ಭಾನುವಾರ ರಾತ್ರಿ ಇಡೀ ಗುಡುಗು, ಮಿಂಚು ಸಮೇತ ಸುರಿದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿದ್ದ ರೈತರು ಸಂತಸಗೊಂಡಿದ್ದರು.

ಇದನ್ನೂ ಓದಿ: Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

ನಾಳೆ ಚಾಮರಾಜನಗರ, ರಾಮನಗರದಲ್ಲಿ ಭಾರಿ ಮಳೆ

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆದರೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯೊಂದಿಗೆ ಗುಡುಗು ಇರಲಿದೆ. ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನ ಇರಲಿದೆ. ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Teachers Recruitment: ಶಿಕ್ಷಕರ ಕೊರತೆ ನೀಗಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

VISTARANEWS.COM


on

Teachers Recruitment
Koo

ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ತೀವ್ರ ಒತ್ತಾಯಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 12 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ (Teachers Recruitment) ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿರುವ ಸಚಿವರು, ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 12 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಸಂಬಂಧಿಸಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದ್ದು, ಅನುಮತಿ ಸಿಕ್ಕ ನಂತರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ತಕ್ಷಣಕ್ಕೆ ಸಮಸ್ಯೆ ಪರಿಹರಿಸಲು ಈ ಶೈಕ್ಷಣಿಕ ವರ್ಷಾರಂಭದಲ್ಲೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಅನುದಾನಿತ ಶಾಲೆಗಳಲ್ಲಿ 2016ರಿಂದ 2020ರ ವರೆಗೆ ಖಾಲಿ ಇರುವ ಶಿಕ್ಷಕರ ಭರ್ತಿಗೆ ಆದೇಶ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನುಳಿದ ಹುದ್ದೆಗಳ ಭರ್ತಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 2 ಸಾವಿರ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು, 1,008 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32 ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮುಂದಿನ ವರ್ಷದ ವೇಳೆಗೆ ಇನ್ನೂ 500 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ನಾಲ್ಕು ವರ್ಷಗಳಲ್ಲಿ ಹಂತಹಂತವಾಗಿ ಇಂತಹ 3 ಸಾವಿರ ಶಾಲೆ ತೆರೆಯಲು ಉದ್ದೇಶಿಸಲಾಗಿದೆ. ಇದರಿಂದ 45 ಲಕ್ಷ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದೆ ಎಂದಿದ್ದಾರೆ.

ಇದಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, ‘ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

ಶಿಕ್ಷಕರ ಬೇಡಿಕೆಗಳ ಬಗ್ಗೆ ಸಿಎಂ ಜತೆ ಚರ್ಚೆ

ಶಿಕ್ಷಕರ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಶಿಕ್ಷಕರಿಂದ ಕೆಲ ಬೇಡಿಕೆಗಳಿವೆ. ನಾಲ್ಕೈದು ದಿನಗಳ ಹಿಂದೆ ಸಭೆ ಕರೆದಿದ್ದೆ. ನಾವು ಪ್ರತಿಭಟನೆ ಕರೆದುಬಿಟ್ಟಿದ್ದೀವಿ, ಹೀಗಾಗಿ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ. ನಾನು ಹೋಗಿ ಮನವಿ ಪಡೆದು ಬಳಿಕ ಏನು ಮಾಡಬೇಕೋ ಪರಿಶೀಲನೆ ಮಾಡುತ್ತೇನೆ. ಇದು ನನ್ನ ಅವಧಿಯಲ್ಲಿ ಆಗಿರುವ ಸಮಸ್ಯೆಯಲ್ಲ. 2017ರಲ್ಲಿ ಆಗಿರೋ ವಿಚಾರ ಇದು, ಆಗಲೇ ಇವರು ಸ್ವಲ್ಪ ಒತ್ತಡ ಹಾಕಬೇಕಿತ್ತು. ಆದರೆ ಇಲ್ಲಿಯವರೆಗೂ ಅದು ಎಳೆದುಕೊಂಡು ಬಂದಿದೆ. ಅದು ನನ್ನ ಮಟ್ಟದಲ್ಲಿ ಅನ್ನೋಕ್ಕಿಂತ, ಮುಖ್ಯಮಂತ್ರಿ ಮಟ್ಟದಲ್ಲಿ ನಿರ್ಧಾರ ಆಗೋ ವಿಚಾರ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಅವರಿಗೆ ನಿವೃತ್ತಿ ಸಮಯದಲ್ಲಿ ಪ್ರಮೋಷನ್ ಆಗೋ ಆಸೆ ಇರುತ್ತೆ. ಹೀಗಾಗಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Continue Reading

ಬೆಂಗಳೂರು

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

KSET Updates : ಇದೇ ಆ.17 ರಂದು ಹಾಜರಾಗಿ ಕೆಸೆಟ್ ಪ್ರಮಾಣ ಪತ್ರ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

VISTARANEWS.COM


on

By

KSET updates
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕೆಸೆಟ್ (KSET 2024) ಪರೀಕ್ಷೆಯಲ್ಲಿ ಅರ್ಹತೆ ಪಡೆದು, ವಿವಿಧ ಕಾರಣಗಳಿಂದ ಮೂಲ ದಾಖಲೆಗಳ ಪರಿಶೀಲನೆಗೆ ಒಳಪಡದವರ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ (ಆ.12) ಪ್ರಕಟಿಸಿದೆ. ಅಂತಹವರು ಇದೇ ಆ.17 ರಂದು ಹಾಜರಾಗಿ ಕೆಸೆಟ್ ಪ್ರಮಾಣ ಪತ್ರ ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಜುಲೈ 11 ರಿಂದ 22 ಹಾಗೂ 31ರಂದು ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳನ್ನು ಪರಿಶೀಲನೆ ಮಾಡಿ, ಪ್ರಮಾಣ ಪತ್ರ ಕೂಡ ನೀಡಲಾಗಿದೆ. ಕೆಲವರು ಆ ಸಂದರ್ಭದಲ್ಲಿ ಹಾಜರಾಗಿದ್ದರೂ ಪ್ರಮಾಣ ಪತ್ರ ಕೊಟ್ಟಿರಲಿಲ್ಲ. ಅಂತಹವರು ನಂತರ ಮೂಲ ದಾಖಲೆಗಳನ್ನು ಕೊಟ್ಟು ಮನವಿ ಮಾಡಿದ್ದರ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ಪರಿಶೀಲಿಸಿ, ಯಾರೆಲ್ಲ ಪ್ರಮಾಣ ಪತ್ರ ಪಡೆಯಲು ಅರ್ಹರು ಎಂಬುದನ್ನು ತೀರ್ಮಾನಿಸಿದೆ. ಅಂತಹವರ ಪಟ್ಟಿಯನ್ನು ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಆ.17ರಂದು ಬೆಳಗ್ಗೆ 10ಗಂಟೆಗೆ ಮೂಲ ದಾಖಲೆ ಸಮೇತ ಹಾಜರಾಗಿ ಪ್ರಮಾಣ ಪತ್ರ ಪಡೆಯಬಹುದು. ಅನಿವಾರ್ಯ ಕಾರಣಗಳಿಂದ ಪರಿಶೀಲನೆ ಸಂದರ್ಭದಲ್ಲಿ ಗೈರುಹಾಜರಾಗಿದ್ದವರೂ ಅಂದು ಬಂದು ಪ್ರಮಾಣ ಪತ್ರಗಳನ್ನು ಪಡೆಯಬಹುದು.

ಇದನ್ನೂ ಓದಿ:KSET 2024: ಕೆಸೆಟ್‌ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆ.22 ಕೊನೆ ದಿನ; ವೇಳಾಪಟ್ಟಿ ಹೀಗಿದೆ

ಆಗಸ್ಟ್‌ 5ರಿಂದ ನೀಟ್‌ ರೋಲ್‌ ನಂಬರ್‌ ದಾಖಲಿಸಲು ಅವಕಾಶ, ಲಿಂಕ್‌ ಪಡೆಯಲು ಹೀಗೆ ಮಾಡಿ

ಬೆಂಗಳೂರು: ಈಗಾಗಲೇ ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ (NEET 2024) ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್‌ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೋಮವಾರ ಲಿಂಕ್ ಬಿಡುಗಡೆ ಮಾಡಲಿದೆ. ಆಗಸ್ಟ್ 5ರ ಬೆಳಗ್ಗೆ 11ಕ್ಕೆ ಕೆಇಎ ವೆಬ್‌ಸೈಟ್‌ನಲ್ಲಿ (KEA Website) ಯುಜಿ ನೀಟ್-2024 ಲಿಂಕ್ ಬಿಡುಗಡೆ ಮಾಡಲಾಗುತ್ತದೆ. ಆಗಸ್ಟ್ 7 ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್‌ಅನ್ನು ಎನ್‌ಟಿಎ ಡೇಟಾದೊಂದಿಗೆ ತಾಳೆ ಮಾಡಿ ಯುಜಿ ನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೇರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಆ.7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಇನ್ನೂ ಅರ್ಜಿ ಸಲ್ಲಿಸದೇ ಇದ್ದಲ್ಲಿ ಅಂತಹವರು ಆ.7ರಿಂದ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ವಿವರಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್ ಸೈಟ್‌ಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಜುಲೈ 26ರಂದು ನೀಟ್‌ ಯುಜಿ 2024 ಪರೀಕ್ಷೆಯ ಪರಿಷ್ಕೃತ ಫಲಿತಾಂಶವನ್ನು ಪ್ರಕಟಿಸಿದೆ. ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಮೇ 5ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯ ಫಲಿತಾಂಶವು ಜೂನ್‌ 4ರಂದು ಪ್ರಕಟವಾಗಿತ್ತು. ಆದರೆ, ಇದಾದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ಆರೋಪ ಕೇಳಿಬಂದ ಕಾರಣ ಸುಪ್ರೀಂ ಕೋರ್ಟ್‌ ಪ್ರಕರಣದ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಕೊನೆಗೆ ಮರು ಪರೀಕ್ಷೆ ಬೇಡ ಎಂದಿದ್ದ ನ್ಯಾಯಾಲಯವು, ಪರಿಷ್ಕೃತ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Teachers Protest: ಶಿಕ್ಷಕರ ಪ್ರತಿಭಟನೆ; ಬಡ್ತಿ, ವರ್ಗಾವಣೆ, ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಲು ಆಗ್ರಹ

Teachers Protest: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದ ವಿವಿಧೆಡೆಯಿಂದ ಸಾವಿರಾರು ಶಾಲಾ ಶಿಕ್ಷಕರು ಆಗಮಿಸಿದ್ದಾರೆ.

VISTARANEWS.COM


on

Teachers Protest
Koo

ಬೆಂಗಳೂರು: ಬಡ್ತಿ, ವರ್ಗಾವಣೆ ಹಾಗೂ ಸೇವಾ ಜ್ಯೇಷ್ಠತೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ (Teachers Protest) ನಡೆಸಲಾಗಿದೆ. ಹೋರಾಟದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಸಾವಿರಾರು ಶಿಕ್ಷಕರು ಭಾಗಿಯಾಗಿದ್ದರು.

2017ರ ನಂತರ ನೇಮಕ ಆದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಅರ್ಹತೆ ಆಧಾರದ ಮೇಲೆ ಶಿಕ್ಷಕರ ಮುಂಬಡ್ತಿ ನೀಡುವುದು, ಎಲ್ಲ ಶಿಕ್ಷಕರನ್ನು ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆ ಆಧಾರದ ಮುಂಬಡ್ತಿ ನೀಡಬೇಕು ಎಂದು ಶಿಕ್ಷಕರು ಒತ್ತಾಯಿಸಿದ್ದಾರೆ.

1ರಿಂದ 5ನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರು ಪದವೀಧರರಾಗಿದ್ದಲ್ಲಿ, ಅವರನ್ನು 6ರಿಂದ 8ನೇ ತರಗತಿವರೆಗೆ ಪಾಠ ಮಾಡುವ ಜಿಪಿಟಿ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. ಈ ಬಡ್ತಿಗೆ ಅಡ್ಡಿಯಾಗಿರುವ ವೃಂದ ನೇಮಕಾತಿ ನಿಯಮ-2017ಕ್ಕೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಈ ಹೋರಾಟಕ್ಕೆ ಸರ್ಕಾರ ಸ್ಪಂದಿಸದೆ ಇದ್ದಲ್ಲಿ ಪ್ರತಿಭಟನೆ ಮುಂದಿನ ಹಂತಕ್ಕೆ ಹೋಗಲಿದೆ. ಬೋಧನೆ ಹಾಗೂ ಇತರೆ ಚಟುವಟಿಕೆ ಬಂದ್ ಮಾಡುವುದಾಗಿ ಸರ್ಕಾರಕ್ಕೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್‌, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೇರಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಶಿಕ್ಷಕರು ಇದ್ದರು.

ಶಿಕ್ಷಕರ ಹಕ್ಕೋತ್ತಾಯಗಳು

  1. 2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಉಲ್ಲೇಖ (1)ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜ್ಯೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು” ಪದನಾಮೀಕರಿಸುವುದು.
  2. ಉಲ್ಲೇಖ (1)ರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ: 1-7,8ನೇ ತರಗತಿಗೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5 ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು.
  3. ಅರ್ಹ ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು.
  4. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜ್ಯೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

ಇದನ್ನೂ ಓದಿ | DK Shivakumar: ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಹಿಂಪಡೆದ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

Continue Reading
Advertisement
Karnataka weather forecast
ಮಳೆ2 mins ago

Karnataka Weather : ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾಗಲೇ ಬಡಿದ ಸಿಡಿಲು; 15 ಮಂದಿ ಆಸ್ಪತ್ರೆ ಪಾಲು

Rent Agreement
ವಾಣಿಜ್ಯ11 mins ago

Rent Agreement: ಬಾಡಿಗೆ ಒಪ್ಪಂದ 11 ತಿಂಗಳ ಅವಧಿಗೆ ಮಾತ್ರ ಯಾಕೆ ಅನ್ನೋದು ಗೊತ್ತಾ?

NIRF 2024 Rank
ಶಿಕ್ಷಣ29 mins ago

NIRF 2024 Rank: ದೇಶದಲ್ಲೇ ಮದ್ರಾಸ್ ಐಐಟಿ ಬೆಸ್ಟ್; ಬೆಂಗಳೂರಿನ ಐಐಎಸ್‌ಸಿ ನೆಕ್ಸ್ಟ್;‌ ಇಲ್ಲಿದೆ ಪೂರ್ಣ ಪಟ್ಟಿ

Rakshabandhan Shopping 2024
ಫ್ಯಾಷನ್37 mins ago

Rakshabandhan Shopping 2024: ವಾರಕ್ಕೆ ಮುನ್ನವೇ ಶುರುವಾಯ್ತು ರಕ್ಷಾ ಬಂಧನದ ಶಾಪಿಂಗ್‌!

Viral News
Latest39 mins ago

Viral News : ಪತ್ನಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಭೀಕರವಾಗಿ ಕೊಂದ ಪತಿ

Teachers Recruitment
ಕರ್ನಾಟಕ40 mins ago

Teachers Recruitment: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; ಶೀಘ್ರವೇ 12 ಸಾವಿರ ಶಿಕ್ಷಕರ ನೇಮಕಾತಿ

Hindenburg Report
ಪ್ರಮುಖ ಸುದ್ದಿ52 mins ago

Hindenburg Report : ಭಾರತೀಯ ಷೇರು ಮಾರುಕಟ್ಟೆಗೆ ಘಾಸಿ ಮಾಡುವ ಸಂಚು ವಿಫಲ; ಠುಸ್​ ಆದ ಹಿಂಡೆನ್​ಬರ್ಗ್ ವರದಿ

Independence Day 2024
ದೇಶ1 hour ago

Independence Day 2024: ಈ ಬಾರಿ ಆಚರಿಸುತ್ತಿರುವುದು ಎಷ್ಟನೇ ಸ್ವಾತಂತ್ರ್ಯೋತ್ಸವ? 77 or 78?

KSET updates
ಬೆಂಗಳೂರು1 hour ago

KSET Updates: ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಆ.17ಕ್ಕೆ ದಾಖಲೆ ಪರಿಶೀಲನೆ

Indian Dessert 2024
Latest1 hour ago

Indian Dessert 2024: ವಿಶ್ವದ ಪ್ರಸಿದ್ಧ ʼಸಿಹಿತಿಂಡಿ ತಾಣʼಗಳ ಪಟ್ಟಿಯಲ್ಲಿ ಸ್ಥಾನ ಪಡೆದ 10 ಭಾರತೀಯ ಸ್ವೀಟ್‌ ಸ್ಟಾಲ್‌ಗಳಿವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌