Site icon Vistara News

Denotification Case: ಸ್ಟೇ ತೆರವಿಗೆ ಸುಪ್ರೀಂ ಕೋರ್ಟ್ ನಕಾರ, ಯಡಿಯೂರಪ್ಪ ನಿರಾಳ

SC rejects plea and Yediyurappa continue with stay, about Denotification Case

ನವದೆಹಲಿ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ (B S Yediyurappa) ವಿರುದ್ಧ ಅಕ್ರಮ ಡಿನೋಟಿಫಿಕೇಷನ್ (Denotification Case) ಪ್ರಕರಣವೊಂದರಲ್ಲಿ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಹಾಗಾಗಿ, ಯುಡಿಯೂರಪ್ಪ ಅವರ ಮತ್ತೆ ನಿರಾಳರಾಗಿದ್ದಾರೆ.

ಜಸ್ಟೀಸ್ ಬಿ. ಆರ್. ಗವಾಯಿ ಹಾಗೂ ಜಸ್ಟೀಸ್ ವಿಕ್ರಮ್ ನಾಥ್ ಅವರಿದ್ದ ಪೀಠವು, ಈ ಆದೇಶವನ್ನು ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 30ಕ್ಕೆ ವಿಚಾರಣೆ ನಡೆಯಲಿದೆ. ಹಾಗಾಗಿ, ಈಗ ಮಧ್ಯಂತರ ರಕ್ಷಣೆಯನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಸ್ಟೇ ತೆರವುಗೊಳಿಸುವಂತೆ ಅರ್ಜಿದಾರ ಆಲಂ ಪಾಶಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆಗ ನ್ಯಾಯಾಲಯವು ಅವರಿಗೆ ಮಧ್ಯಂತರ ರಕ್ಷಣೆಯನ್ನು ಒದಗಿಸಿತ್ತು.

ಏನಿದು ಪ್ರಕರಣ?

ದೇವನಹಳ್ಳಿಯ ಬಳಿ 27 ಎಕರೆ ಜಮೀನು ಡಿನೋಟಿಫಿಕೇಷನ್ ಮಾಡಿದ್ದ ಆರೋಪವನ್ನು ಬಿ.ಎಸ್.ಯಡಿಯೂರಪ್ಪ ಅವರು ಎದುರಿಸುತ್ತಿದ್ದಾರೆ. ಆಗ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿದ್ದರು. ಇಬ್ಬರು ಸೇರಿ ಜಾಗವನ್ನು ಡಿನೋಟಿಫೈ ಮಾಡಿದ್ದರು ಎಂದು ಅರ್ಜಿದಾರ ಆರೋಪಿಸಿದ್ದಾರೆ. ತಮ್ಮ ಹೆಸರನ್ನು ನಕಲು ಮಾಡಿ, ತಮಗೆ ನಿಗದಿಯಾಗಿದ್ದ ಭೂಮಿಯನ್ನು ಬೇರೆ ಬಿಲ್ಡರ್‌ಗೆ ಡಿ ನೋಟಿಫಿಕೇಷನ್ ಮಾಡಲಾಗಿತ್ತು ಎಂಬುದು ಅರ್ಜಿದಾರರ ವಾದವಾಗಿದೆ.

ಇದನ್ನೂ ಓದಿ: ಬೆಳಂದೂರು ಡಿನೋಟಿಫಿಕೇಶನ್ ಪ್ರಕರಣ: ಬಿಎಸ್‌ವೈಗೆ ಜಾಮೀನು ಮಂಜೂರು

ಈ ಪ್ರಕರಣಕ್ಕೆ ಸಂಬಂದಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದೂರು ದಾಖಲಾಗಿತ್ತು. ಆ ಬಳಿಕ, ಲೋಕಾಯುಕ್ತ ವಿಚಾರಣೆ ನಡೆಸಿ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಲೋಕಾಯಕ್ತ ಕ್ರಮವನ್ನು ಬಿಎಸ್ ವೈ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ತನಿಖೆಗೆ ಹೈಕೋರ್ಟ್‌ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ತಮ್ಮನ್ನು ಈ ಪ್ರಕರಣದಲ್ಲಿ ಬಂಧಿಸಿದಂತೆ ಕೋರಿ, ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ಅಂದಿನ ಸಿಜೆಐ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಬಂಧನದಿಂದ ರಕ್ಷಣೆ ಒದಗಿಸಿದ್ದರು. ಆದರೆ, ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ. ಹಾಗಾಗಿ, ಅವರಿಗೆ ನೀಡಲಾದ ರಕ್ಷಣೆಯನ್ನು ಕೈ ಬಿಡುವಂತೆ ಪಾಷಾ ಮತ್ತೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಲಯವು ಅವರ ಅರ್ಜಿಯನ್ನು ವಜಾ ಮಾಡಿದೆ.

Exit mobile version