Scooter rider dies after being hit by bus wheel in chikkamagaluruBike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು - Vistara News

ಕರ್ನಾಟಕ

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

Bike Accident: ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಅಪಘಾತ ನಡೆದಿದೆ. ನಿಯಂತ್ರಣ ತಪ್ಪಿ ಸ್ಕೂಟರ್‌ ಸವಾರ ಬಸ್‌ನಡಿ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸವಾರ ಗಾಯಗೊಂಡಿದ್ದಾರೆ.

VISTARANEWS.COM


on

Bike Accident in Charmadi Ghat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ (ಕೆಕೆಆರ್‌ಟಿಸಿ) ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನ ಮೂರನೇ ತಿರುವಿನಲ್ಲಿ ಸೋಮವಾರ ನಡೆದಿದೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಸ್ಕೂಟರ್‌ ಸವಾರ ಬಸ್‌ ಕೆಳಗೆ ಬಿದ್ದಿದ್ದರಿಂದ ದುರಂತ (Bike Accident) ಸಂಭವಿಸಿದೆ.

ಮಾಗುಂಡಿ ಗ್ರಾಮದ ಇರ್ಫಾನ್ (29) ಮೃತ ಸವಾರ, ಮತ್ತೊಬ್ಬ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟ್‌ನಲ್ಲಿ ಧಾರಾಕಾರ ಮಳೆ‌ ಸುರಿಯುತ್ತಿತ್ತು. ಈ ವೇಳೆ ಸ್ಕೂಟರ್‌ನಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಸವಾರ ಕೆಳಗೆ ಬಿದ್ದಿದ್ದಾರೆ. ಇದೇ ವೇಳೆ ಬಸ್‌ ಹಿಂಬದಿ ಚಕ್ರ ಹರಿದಿದ್ದರಿಂದ ಗಂಭೀರವಾಗಿ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು – ದಕ್ಷಿಣಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ತೆರಳುತ್ತಿದ್ದ ಬಸ್‌ನಡಿ ಸಿಲುಕಿ ಸವಾರ ಮೃತಪಟ್ಟಿದ್ದಾರೆ.

ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್‌ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ

ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ತುಮಕೂರು: ನಗರದ ಅಂತಸರನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಬಳಿ ಕತ್ತು ಕೊಯ್ದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಬಿಹಾರ ಮೂಲದ ಲಖನ್ ಮಾಂಜಿ (36) ಮೃತ ವ್ಯಕ್ತಿ. 6 ತಿಂಗಳಿಂದ ಮಾರುಕಟ್ಟೆಯಲ್ಲಿ ಟಾಯ್ಲೆಟ್ ಕೀಪರ್ ಆಗಿದ್ದ ಲಖನ್ ಮಾಂಜಿ ಕೆಲಸ ಮಾಡುತ್ತಿದ್ದ. ಸಾರ್ವಜನಿಕ ಟಾಯ್ಲೆಟ್‌ನಲ್ಲಿ ಶವ ಪತ್ತೆಯಾಗಿದೆ. ತುಮಕೂರು ನಗರ ಠಾಣೆ ಇನ್ ಸ್ಪೆಕ್ಟರ್ ದಿನೇಶ್ ಕುಮಾರ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲಿಸಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

DK Shivakumar: ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದಾರೆ.

VISTARANEWS.COM


on

DK Shivakumar attack on HD Kumaraswamy
Koo

ಬೆಂಗಳೂರು: ನಾನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವವನ್ನು ಅವರಿಗೆ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದರು. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪರಸ್ಪರರ ನಡುವೆ ನಡೆಯುತ್ತಿರುವ ವಾಕ್ಸಮರದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತವಾಗಿ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ

ಎನ್‌ಒಸಿ ನೀಡಲು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ‌ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಡಿಕೆಶಿ ಒಕ್ಕಲಿಗ ನಾಯಕನಲ್ಲ ಎಂಬ ಆರ್. ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ನಾಯಕನೇ ಅಲ್ಲ. ಅವರು ನಾಯಕರು, ದೊಡ್ಡ ನಾಯಕರು. ನಾನು ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ರಾಹುಲ್ ಗಾಂಧಿ ಅವರು ನಾಳೆ (ಬುಧವಾರ – ಏಪ್ರಿಲ್‌ 17) ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು, ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Continue Reading

ಕರ್ನಾಟಕ

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

2nd PUC Exam: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನವಾಗಿತ್ತು. ಆದರೆ, ಇದೀಗ ಕೊನೆಯ ದಿನಾಂಕವನ್ನು ಇನ್ನೂ ಎರಡು ದಿನ ವಿಸ್ತರಿಸಲಾಗಿದೆ.

VISTARANEWS.COM


on

2nd PUC Exam
Koo

ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 (2nd PUC Exam) ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಏ.16 ಕೊನೆಯ ದಿನವಾಗಿತ್ತು. ಆದರೆ, ಇದೀಗ ಕೊನೆಯ ದಿನಾಂಕವನ್ನು ಏ.18ರ ಸಂಜೆ 5 ಗಂಟೆಯವರೆಗೆ ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಆದೇಶ ಹೊರಡಿಸಿದೆ.

2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಏ.18ರ ಸಂಜೆ 5ಗಂಟೆಯವರೆಗೆ ವಿಸ್ತರಿಸಲಾಗಿದೆ.
2024ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಹಾಗೂ ದಿನಾಂಕ: 31-03-2024 ಕ್ಕೆ 17 ವರ್ಷ ತುಂಬಿದ ಕಲಾ ಹಾಗೂ ವಾಣಿಜ್ಯ ವಿಭಾಗದ ಅರ್ಹ ವಿದ್ಯಾರ್ಥಿಗಳು 2024ರ ಪಿಯು ಪರೀಕ್ಷೆ-2ಕ್ಕೆ ಖಾಸಗಿ ಅಭ್ಯರ್ಥಿಯಾಗಿ ಕಾಲೇಜಿನಲ್ಲಿ ನೊಂದಾಯಿಸಿಕೊಳ್ಳಲು ಏ.18 ಕೊನೆಯ ದಿನಾಂಕವಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.

ಇದನ್ನೂ ಓದಿ | UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

ಏಪ್ರಿಲ್ 29ರಿಂದ ಮೇ 16ರವರೆಗೆ ದ್ವಿತೀಯ ಪಿಯುಸಿ-2 ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವು (2nd PUC Result) ಈಗಾಗಲೇ ಪ್ರಕಟವಾಗಿದೆ. ಕೆಲವರು ಅನುತ್ತೀರ್ಣರಾಗಿದ್ದರೆ, ಮತ್ತೆ ಕೆಲವರಿಗೆ ಅಂಕ ಕಡಿಮೆ ಬಂದಿದೆ ಎಂಬ ಅಸಮಾಧಾನ. ಹೀಗಾಗಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಯಲಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು (2nd PUC Exam) ನಡೆಸಲಾಗುವುದು. ಇದೇ ವೇಳೆ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸಲು ಮಂಗಳವಾರ (ಏಪ್ರಿಲ್‌ 16) ಕೊನೇ ದಿನವಾಗಿದೆ.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

  • ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ
  • ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ
  • 9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
  • 11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ
  • 13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ
  • 16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್

ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

ಉತ್ತರ ಪತ್ರಿಕೆಗಳ ಸ್ಯಾನ್ಸ್ ಪ್ರತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ

  1. ಮಂಡಳಿಯ ವೆಬ್‌ಸೈಟ್‌ https://kseab.karnataka.gov.in ರಲ್ಲಿನ ಮುಖಪುಟ (HOME PAGE) ದಲ್ಲಿ Application for Scanned copies, Re- valuation/Re-totalling ಎಂದು ಇರುತ್ತದೆ.
  2. ಅಲ್ಲಿ Link ಅನ್ನು ಕ್ಲಿಕ್ ಮಾಡಿದರೆ Calender of Events ಪುಟ ತೆರೆಯುತ್ತದೆ. ಇದರಲ್ಲಿ “How to Apply ಅನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳುವುದು.
  3. 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ನೋಂದಣಿ ಸಂಖ್ಯೆ (Register Number) ಯನ್ನು ಪ್ರವೇಶ ಪತ್ರದಲ್ಲಿರುವಂತೆ ನಮೂದಿಸಬೇಕು. ತಕ್ಷಣವೇ ವಿದ್ಯಾರ್ಥಿಗಳ ಮಾಹಿತಿ ಕಾಣುತ್ತದೆ.
  4. Scanned copy ಪಡೆಯಲು ಇಚ್ಚಿಸಿದ ವಿಷಯ/ ವಿಷಯಗಳನ್ನು ಒಂದೇ ಬಾರಿಗೆ ಆಯ್ಕೆ ಮಾಡಿಕೊಂಡು ವಿದ್ಯಾರ್ಥಿಯ/ಪೋಷಕರ ನಿಖರವಾದ ಮೊಬೈಲ್ ಸಂಖ್ಯೆ, ತಮ್ಮ ಖಾಸಗಿ ಇ-ಮೇಲ್ ಐಡಿ ಹಾಗೂ ಸ್ವ-ವಿಳಾಸವನ್ನು ಮಾತ್ರ ನಮೂದಿಸಬೇಕು. ನಂತರ Submit ಬಟನ್ ಕ್ಲಿಕ್ ಮಾಡಿದ ಕೂಡಲೇ ಚಲನ್ ಸಂಖ್ಯೆಯು Auto-Generate ಆಗುತ್ತದೆ.
  5. “Make payment” ಬಟನ್‌ ಕ್ಲಿಕ್‌ ಮಾಡಿದ ನಂತರ “Cash payment” ಅಥವಾ “Online payment” ನಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕು.

Cash payment ಆಯ್ಕೆ ಮಾಡಿಕೊಂಡರೆ?

  • UNION BANK OF INDIA (CORPORATION BANK), BANGALORE-ONE, KARNATAKA-ONE, GRAMA-ONE ಇವುಗಳಲ್ಲಿ ಯಾವುದಾದರೂ ಒಂದನ್ನು ಆಯ್ಕೆ ಮಾಡಿಕೊಂಡು ‘ Generate challan’ ಬಟನ್ ಕ್ಲಿಕ್ ಮಾಡಬೇಕು.
  • ಚಲನ್‌ನಲ್ಲಿ ತಾವು ದಾಖಲಿಸಿದ ಮಾಹಿತಿ ಕಾಣಿಸುತ್ತದೆ. ನಂತರ ಚಲನ್ ಪ್ರಿಂಟ್ ತೆಗೆದುಕೊಳ್ಳುವುದು.
  • ಆಯ್ಕೆ ಮಾಡಿದ ಚಲನ್ ಪ್ರಿಂಟ್ ತೆಗೆದುಕೊಂಡು, ನಂತರ ಚಲನ್ ಮುಖಾಂತರ ಹಣವನ್ನು ಮಂಡಲಿಯು ನಿಗದಿಪಡಿಸಿದ ದಿನಾಂಕದೊಳಗೆ ಸಂದಾಯ ಮಾಡುವುದು. ಮಂಡಲಿಯು ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಸಂದಾಯ ಮಾಡಲಾಗುವ ಚಲನ್/ಆನ್‌ಲೈನ್ ಪಾವತಿಗಳನ್ನು ಕಡ್ಡಾಯವಾಗಿ ಪರಿಗಣಿಸಲಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದೆ.
  • Cash payment ಮುಖಾಂತರ ಹಣ ಸಂದಾಯ ಮಾಡಿದ 5 ಗಂಟೆಗಳ ಒಳಗೆ ತಾವು ನಮೂದಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಬರುತ್ತದೆ. ಎಸ್.ಎಂ.ಎಸ್. ಬಾರದಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕ್‌ ಅನ್ನು ಸಂಪರ್ಕಿಸುವುದು.

Online payment ಆಯ್ಕೆ ಮಾಡಿಕೊಂಡರೆ?

  • Karnataka-one ಬಟನ್ ಕ್ಲಿಕ್ ಮಾಡುವುದು,
  • ನೀವು ದಾಖಲಿಸಿದ ಮಾಹಿತಿ ಕಾಣಿಸುತ್ತದೆ.
  • “pay now” ಬಟನ್ ಕ್ಲಿಕ್ ಮಾಡುವುದು.
  • Karnataka-one a continue for payment ಆಯ್ಕೆ ಮಾಡುವುದು.
  • ಇದರಲ್ಲಿ “Terms and conditions” ಅನ್ನು ಕಡ್ಡಾಯವಾಗಿ ಓದಿ “check box” ಮೇಲೆ ಕ್ಲಿಕ್‌ ಮಾಡುವುದು
  • continue for payment ಆಯ್ಕೆ ಮಾಡುವುದು.
  • ನಂತರ “pay now” ಕ್ಲಿಕ್ ಮಾಡುವುದು.
  • Processing ಆಗುವವರೆಗೆ “Back button”/”Close button” ಅಥವಾ ” “Refresh button”ಗಳನ್ನು ಒತ್ತಬೇಡಿ.
  • “Online payment” ಮುಖಾಂತರ ಹಣ ಸಂದಾಯ ಆದ ನಂತರ ನೀವು ನಮೂದಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಬರುತ್ತದೆ.
  • SMS ಸಂದೇಶ ಬಾರದಿದ್ದಲ್ಲಿ ಹಣ ಸಂದಾಯಿಸಿದ Karnataka-one ಅನ್ನು ಕೂಡಲೇ ಸಂಪರ್ಕಿಸಿ.

ಇದನ್ನೂ ಓದಿ: CET 2024: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

Continue Reading

ಮಳೆ

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Karnataka Weather : ಬರಗಾಲದಿಂದ ತತ್ತರಿಸಿರುವ ಜನತೆಗೆ ಮುಂಗಾರು ಮಳೆಯು ವರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದರ ಮಧ್ಯೆ ಈ ವಾರ ಪೂರ್ತಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ಇದೆ ಇಲ್ಲಿದೆ ಮಾಹಿತಿ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆಯು (Karnataka Weather Forecast) ದೀರ್ಘಕಾಲಿನ ಮುಂಗಾರು ಮಳೆ ಕುರಿತು ಗುಡ್ ನ್ಯೂಸ್ ನೀಡಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಕರ್ನಾಟಕ ಸೇರಿದಂತೆ ನೈರುತ್ಯ ಭಾರತದಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆ.ಮೀ ರಷ್ಟಿದೆ. ದೀರ್ಘಾಕಾಲಿನ ಮುಂಗಾರು ಮಳೆ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್‌ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀ ನಷ್ಟಿದ್ದು ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ.

2024ರ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಾದ್ಯಂತ ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಶೇಕಡಾ 5ರಷ್ಟು ವ್ಯತ್ಯಯದೊಂದಿಗೆ ಶೇಕಡಾ 106 ರಷ್ಟು ವಾಡಿಕೆಗಿಂತಾ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಕಳೆದ 1971-2020ರ ಸರಾಸರಿ ವಾಡಿಕೆ ಮಳೆ ಪ್ರಮಾಣ 87 ಸೆಂ.ಮೀ ನಷ್ಟಿದೆ . ಮುಂಗಾರು ಮಳೆ ಮುನ್ಸೂಚನೆ ಅನ್ವಯ ದೇಶದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿ ಸರಾಸರಿ ಶೇ. 104-110ರಷ್ಟು ಇರಲಿದೆ.

ಇದನ್ನೂ ಓದಿ: Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

ಇನ್ನೊಂದು ವಾರ ಮಳೆ ಅಬ್ಬರ

ನಾಳೆಯಿಂದ ಅಂದರೆ ಏಪ್ರಿಲ್‌ 17 ರಿಂದ 22ರವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಇದೆ. ರಾಜ್ಯಾದ್ಯಂತ ಬುಧವಾರದಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರುಗಿ ಹಾಗೂ ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರಿನ ಒಂದೆರಡು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಏಪ್ರಿಲ್‌ 19, 20 ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

UPSC Results 2023: ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದ ಬಳ್ಳಾರಿಯ ಶಾಂತಪ್ಪ ಕುರುಬರ್ ಅವರು, ಇದೀಗ ಯುಪಿಎಸ್‌ಸಿ ಫಲಿತಾಂಶದಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ. ಸದ್ಯ ಇವರು ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ನಾಗರಿಕ ಸೇವೆಗಳ ಅಂತಿಮ ಪರೀಕ್ಷೆ 2023ರ ಫಲಿತಾಂಶ ಪ್ರಕಟಿಸಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಪೈಕಿ ಕರ್ನಾಟಕ ಪೊಲೀಸ್‌ ಇಲಾಖೆಯಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬಳ್ಳಾರಿಯ ಶಾಂತಪ್ಪ ಕುರುಬರ್ (ಶಾಂತಪ್ಪ ಜಡೆಮ್ಮನವರ್‌) ಅವರು ನಾಗರಿಕ ಸೇವೆಗೆ (UPSC Results 2023) ಆಯ್ಕೆಯಾಗಿದ್ದು, ಇವರು ಕನ್ನಡದಲ್ಲೇ ಪರೀಕ್ಷೆ ಬರೆದು ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಕರ್ತವ್ಯದ ಜತೆಗೆ ಸಮಾಜಮುಖಿ ಕಾರ್ಯ

ಶಾಂತಪ್ಪ ಕುರುಬರ್ ಅವರು ಪೊಲೀಸ್‌ ಆಗಿ ಕೆಲಸ ನಿರ್ವಹಿಸುತ್ತಲೇ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿದ್ದಾರೆ. ಬೆಂಗಳೂರಿನ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕರಿಗಾಗಿ 10 ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಿದ್ದಾರೆ. ಇವರು ಮೊಬೈಲ್‌ ಟಾಯ್ಲೆಟ್‌ ವ್ಯವಸ್ಥೆ ಮಾಡಲು ಕಾರಣ ಅವರ ತಾಯಿ. ಈ ಮಾರ್ಗದಲ್ಲಿ ಬಸ್‌ಗಾಗಿ ಕಾಯುತ್ತಿದ್ದಾಗ ತಾಯಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದರು. ಆಗ ಹತ್ತಿರದಲ್ಲಿ ಯಾವುದೇ ಸಾರ್ವಜನಿಕ ಶೌಚಾಲಯ ಇಲ್ಲದ ಕಾರಣ ಶೌಚಕ್ಕೆ ಹೋಗಲು ತೊಂದರೆಯಾಗಿತ್ತು. ಇದರಿಂದ ತಮ್ಮ ತಾಯಿಗಾದ ಕಷ್ಟ ಯಾರಿಗೂ ಆಗಬಾರದು ಎಂದು ಸಾರ್ವಜನಿಕರಿಗೆ ನೆರವಾಗಲು ಮೊಬೈಲ್‌ ಟಾಯ್ಲೆಟ್‌ಗಳ ವ್ಯವಸ್ಥೆ ಮಾಡಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಪಿಯುಸಿ ಅನುತ್ತೀರ್ಣವಾಗಿದ್ದ ಶಾಂತಪ್ಪ ಕುರುಬರ್

ಯುಪಿಎಸ್‌ಸಿ ಫಲಿತಾಂಶದ ಬಗ್ಗೆ ಪಿಎಸ್‌ಐ ಶಾಂತಪ್ಪ ಕುರುಬರ್ ಪ್ರತಿಕ್ರಿಯಿಸಿ, ಕನ್ನಡದಲ್ಲಿ ಪರೀಕ್ಷೆ ಬರೆಯುವುದು ಎಂದರೆ ತುಂಬಾ ಕಷ್ಟ. ಪಿಯುಸಿ ಅನುತ್ತೀರ್ಣವಾಗಿದ್ದೆ, ಆಗ ಊರಿನಲ್ಲಿ ಜನ ಅಡಿಕೊಂಡಿದ್ದರು. ಅಗ ತೀರ್ಮಾನ ಮಾಡಿ ಓದಲು ಮುಂದೆ ಬಂದೆ. ನಂತರ ಸಬ್ ಇನ್ ಸ್ಪೆಕ್ಟರ್ ಆದೆ. ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿದೆ. ಈಗ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.

ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ 3 ವಿದ್ಯಾರ್ಥಿಗಳು ಪಾಸ್‌

ಶಾಂತಪ್ಪ ಕುರುಬರ್, ಭರತ್ ಸಿ ಯಾರಮ್ ಹಾಗೂ ಭಾನು ಪ್ರಕಾಶ್

ಯೂಪಿಎಸ್‌ಸಿ ಪರೀಕ್ಷೆಯಲ್ಲಿ ಬೆಂಗಳೂರಿನ ಅಚಾರ್ಯ ಐಎಎಸ್ ಕೋಚಿಂಗ್ ಸೆಂಟರ್‌ನ ಮೂವರು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಬಳ್ಳಾರಿಯ ಶಾಂತಪ್ಪ ಕುರುಬರ್ (644 ರ‍್ಯಾಂಕ್‌), ಮೈಸೂರಿನ ಭಾನು ಪ್ರಕಾಶ್ (600 ರ‍್ಯಾಂಕ್‌), ಶಿವಮೊಗ್ಗ ಭರತ್ ಸಿ ಯಾರಮ್ (667 ರ‍್ಯಾಂಕ್‌) ಉತ್ತೀರ್ಣರಾದವರು.

ಶಾಂತಪ್ಪ ಕುರುಬರ್ ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿದ್ದಾರೆ. ತಾಯಿ ಕೂಲಿ ಕೆಲಸ ಮಾಡುತ್ತಿದ್ದು, ಇವರು ಪಿಯುಸಿಯಲ್ಲಿ ಎರಡು ಬಾರಿ ಫೇಲ್‌ ಆಗಿದ್ದರೂ ಛಲ ಬಿಡದೇ ನಿರಂತರ ಅಧ್ಯಯನದೊಂದಿಗೆ ಪಿಎಸ್‌ಐ ಆಗಿ ನೇಮಕವಾಗಿದ್ದರು. ಇದೀಗ ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದಿದ್ದಾರೆ.

ಭಾನು ಪ್ರಕಾಶ್ ಅವರು ಮೂಲತಃ ಮೈಸೂರಿನವರಾಗಿದ್ದು, ಕಳೆದ ಬಾರಿ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದರು.
ಮತ್ತೆ ಐಎಎಸ್ ಮಾಡುವ ಕನಸಿನೊಂದಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದು ಈ ಬಾರಿ 600ನೇ ರ‍್ಯಾಂಕ್‌ ಪಡೆದಿದ್ದಾರೆ.

ಭರತ್ ಸಿ ಯಾರಮ್ ಅವರು ಶಿವಮೊಗ್ಗ ಮೂಲದವರಾಗಿದ್ದು, ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದು, ಇವರು 667 ರ‍್ಯಾಂಕ್‌ ಪಡೆದಿದ್ದಾರೆ.

2023ರ ಸೆಪ್ಟೆಂಬರ್ 15, 16, 17, 23 ಮತ್ತು 24ರಂದು ನಡೆದ ಪರೀಕ್ಷೆಗಳಲ್ಲಿ ನಾಗರಿಕ ಸೇವೆಗಳ ಮುಖ್ಯ ಸಂದರ್ಶನ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸೇವಾ ಆಯೋಗವು 2024ರ ಮೊದಲ ಎರಡು ತಿಂಗಳುಗಳಲ್ಲಿ ಸಂದರ್ಶಿಸಿತು.

ಇದನ್ನೂ ಓದಿ | UPSC Results 2023: ಕೋಚಿಂಗ್‌ ಇಲ್ಲದೆ ಓದಿದ ಅನನ್ಯಾ ರೆಡ್ಡಿಗೆ ಯುಪಿಎಸ್‌ಸಿಯಲ್ಲಿ 3ನೇ ರ‍್ಯಾಂಕ್!

2023ರ ಸೆಪ್ಟೆಂಬರ್‌ನಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ನಾಗರಿಕ ಸೇವೆಗಳ ಲಿಖಿತ ಪರೀಕ್ಷೆಯ ಫಲಿತಾಂಶ ಮತ್ತು 2024ರ ಜನವರಿ- ಏಪ್ರಿಲ್‌ಲ್ಲಿ ನಡೆದ ವ್ಯಕ್ತಿತ್ವ ಪರೀಕ್ಷೆಯ ಸಂದರ್ಶನಗಳ ಆಧಾರದ ಮೇಲೆ ಒಟ್ಟು 1,016 ಅಭ್ಯರ್ಥಿಗಳನ್ನು ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ವಿದೇಶಾಂಗ ಸೇವೆ, ಭಾರತೀಯ ಪೊಲೀಸ್ ಸೇವೆ ಮತ್ತು ಕೇಂದ್ರ ಸೇವೆಗಳಲ್ಲಿ ಗುಂಪು ʼಎʼ ಮತ್ತು ಗುಂಪು ʼಬಿʼ ಹುದ್ದೆಗಳಿಗೆ ಇವರು ನಿಯುಕ್ತರಾಗುತ್ತಾರೆ.

Continue Reading
Advertisement
Hardik Pandya
ಕ್ರೀಡೆ11 mins ago

Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

DK Shivakumar attack on HD Kumaraswamy
ಕರ್ನಾಟಕ24 mins ago

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

2nd PUC Exam
ಕರ್ನಾಟಕ42 mins ago

2nd PUC Exam: ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಏ.18ರವರೆಗೆ ಅವಕಾಶ

Lok Sabha Election
ದೇಶ45 mins ago

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Kanker Encounter
ದೇಶ50 mins ago

Kanker Encounter: ಎನ್‌ಕೌಂಟರ್‌ನಲ್ಲಿ 18 ಮಾವೋವಾದಿಗಳ ಹತ್ಯೆಗೈದ ಭದ್ರತಾ ಪಡೆ

Karnataka weather Forecast
ಮಳೆ1 hour ago

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Oil Pulling
ಆರೋಗ್ಯ1 hour ago

Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

UPSC Results 2023
ಪ್ರಮುಖ ಸುದ್ದಿ1 hour ago

UPSC Results 2023: ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆ ಬರೆದು ಪಾಸ್‌ ಆದ ಪೊಲೀಸ್‌ ಅಧಿಕಾರಿ!

Take action to close failed borewell says Vijayanagara DC MS Diwakar
ವಿಜಯನಗರ2 hours ago

Vijayanagara News: ವಿಫಲ ಕೊಳವೆಬಾವಿ ಮುಚ್ಚಲು ಕ್ರಮವಹಿಸಿ: ಡಿಸಿ ಎಂ.ಎಸ್. ದಿವಾಕರ್‌

Job Alert
ಉದ್ಯೋಗ2 hours ago

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ15 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌