Site icon Vistara News

SCSP TSP Scheme: ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನ ಶೇ.100 ಖರ್ಚು ಮಾಡದಿದ್ರೆ ಕಠಿಣ ಕ್ರಮ; ಸಿಎಂ ವಾರ್ನಿಂಗ್‌

SCSP TSP Scheme

ಬೆಂಗಳೂರು: ಎಸ್‌ಸಿ-ಎಸ್‌ಟಿ ಸಮುದಾಯ ಅಭಿವೃದ್ಧಿಗಾಗಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ (SCSP TSP Scheme) ಬಿಡುಗಡೆಯಾಗುವ ಅನುದಾನವನ್ನು ಆಯಾಯ ವರ್ಷವೇ ಶೇ.100 ರಷ್ಟು ಖರ್ಚು ಮಾಡಬೇಕು. ಒಂದು ವೇಳೆ ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಾವು ಮಾತ್ರ. ನಮ್ಮ ಸರ್ಕಾರ ಮಾತ್ರ. 2024-25ನೇ ಸಾಲಿನಲ್ಲಿ 39121.46 ಕೋಟಿ ಇದ್ದರೆ, ಹಿಂದಿನ ವರ್ಷ 35221.84 ಕೋಟಿ ಇತ್ತು. ಇದರಲ್ಲಿ ಬಿಡುಗಡೆ ವೆಚ್ಚದ ಶೇ 99.64 ಕೋಟಿಯಷ್ಟು ಖರ್ಚಾಗಿದೆ. ಉಳಿದದ್ದು ಏಕೆ ಆಗಿಲ್ಲ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಆಯಾಯ ವರ್ಷವೇ ಶೇ 100 ರಷ್ಟು ಖರ್ಚು ಮಾಡಬೇಕು ಎನ್ನುವ ಕಾನೂನು ಮಾಡಿದ್ದು ನಾವೇ. ಖರ್ಚು ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ನಿಯಮವನ್ನೂ ಮಾಡಿದ್ದೇವೆ. ಯಾರು ನಿರ್ಲಕ್ಷ್ಯ ಮಾಡಿದ್ದಾರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯಕ್ಕೆ ಕ್ಷಮೆ ಇಲ್ಲ. ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಎಸ್‌.ಸಿ.ಎಸ್‌.ಪಿ., ಟಿ.ಎಸ್.ಪಿ. ಕಾಯ್ದೆ 2013 ನ್ನು ಜಾರಿಗೆ ತಂದು, ಸರ್ಕಾರದ ಒಟ್ಟಾರೆ ಅಭಿವೃದ್ಧಿ ಆಯವ್ಯಯದ ಶೇ. 24.1 ರಷ್ಟನ್ನು ಈ ಸಮುದಾಯಗಳ ಅಭಿವೃದ್ಧಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | HD Kumaraswamy: ಸಿಎಂ ಕುರ್ಚಿ ಮೇಲೆ ಟವಲ್‌ ಹಾಕಿದವರಿಂದಲೇ ಮುಡಾ ಹಗರಣ ಬಯಲು: ಎಚ್‌ಡಿಕೆಇದನ್ನೂ ಓದಿ |

ಸಭೆಯಲ್ಲಿ ಮುಖ್ಯಮಂತ್ರಿಗಳ ಸೂಚನೆಗಳು

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ್‌ ಖರ್ಗೆ, ಡಾ. ಎಂ.ಸಿ. ಸುಧಾಕರ್‌, ಪರಿಷತ್ತಿನ ಸದಸ್ಯರಾಗಿರುವ ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್,ನರೇಂದ್ರಸ್ವಾಮಿ, ಕೃಷ್ಣಾನಾಯಕ್ , ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಲೋಕಸಭಾ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌ ಗೋಯೆಲ್‌, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್‌ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Exit mobile version