Site icon Vistara News

SCST ಮೀಸಲು | ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಅನುಮೋದನೆ: ಸಿಎಂ ಬೊಮ್ಮಾಯಿ ಭರವಸೆ

CM satement

ಬೆಂಗಳೂರು: ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳಿಗೆ ಮೀಸಲಾತಿ ಹೆಚ್ಚಳಕ್ಕೆ ಅಧ್ಯಾದೇಶ ಹೊರಡಿಸಲು ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳ ಅನುಮೋದನೆಯನ್ನು ಪಡೆಯಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಸೋಮವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವರ್ಗಗಳಿಗೆ ಕಾನೂನಿನ ರಕ್ಷಣೆಯನ್ನು ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಆಯೋಗಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆಯಾಗಲೀ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಏಕೆಂದರೆ ಏನೇ ಮಾಡಿದರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು. ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇಕಡಾ ೧೫ರಿಂದ ೧೭ಕ್ಕೆ, ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. ೩ರಿಂದ ಏಳಕ್ಕೆ ಹೆಚ್ಚಿಸಬೇಕು ಎಂದು ಜಸ್ಟಿಸ್‌ ನಾಗಮೋಹನದಾಸ್‌ ವರದಿಯ ಶಿಫಾರಸನ್ನು ರಾಜ್ಯ ಸರಕಾರ ಒಪ್ಪಿಕೊಂಡು ಸಂಪುಟದಲ್ಲಿ ಒಪ್ಪಿಗೆ ನೀಡಿದೆ. ಪ್ರತಿಪಕ್ಷಗಳು ಕೂಡಾ ಇದಕ್ಕೆ ಒಪ್ಪಿವೆ. ಇದೀಗ ಅದನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲಾಗಿದೆ.

ಇದನ್ನೂ ಓದಿ | Reservation in Karnataka | ವಾಲ್ಮೀಕಿ ಶ್ರೀಗಳ ಕೈಗೆ ಸುಗ್ರೀವಾಜ್ಞೆ ಪ್ರತಿಯಿತ್ತ ಸರ್ಕಾರ; 257 ದಿನದ ಪ್ರತಿಭಟನೆ ಅಂತ್ಯ

Exit mobile version