ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ಕ್ರಿಕೆಟ್ ಆಡುವ ವೇಳೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, 10 ಯುವಕರಿಗೆ ಗಾಯಗಳಾಗಿವೆ. ಗಾಯಾಳುಗಳ ಪೈಕಿ 7 ಹಿಂದು, 3 ಮುಸ್ಲಿಂ ಯುವಕರು ಇದ್ದಾರೆ. ಇವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ (Shivamogga News) ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಲಭೆಗೆ ಕಾರಣವೇನು ಎಂಬುವುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಎಂಎಲ್‌ಸಿ ಡಿ.ಎಸ್. ಅರುಣ್, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ: ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ. ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ | Murder Case: ಹುಡುಗಿ ವಿಚಾರಕ್ಕೆ ಕಾಲೇಜಲ್ಲಿ ವಿದ್ಯಾರ್ಥಿ ಹತ್ಯೆ; ಕಗ್ಗೊಲೆ ಮಾಡಿದವನು ಈಗ ಕಂಬಿ ಹಿಂದೆ
ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು
ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ದುಬ್ಬನಸಸಿ ಬಳಿಯ ಕಡಲತೀರದಲ್ಲಿ ನಡೆದಿದೆ. ಸೂರ್ಯಶಿವ ನಾರಾಯಣ ಪಾಂಡೆ (24) ಮೃತ ಯುವಕ.
ದೆಹಲಿಯಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು 24 ಪ್ರವಾಸಿಗರ ತಂಡ ಆಗಮಿಸಿತ್ತು. ಸ್ಥಳೀಯ ರೆಸಾರ್ಟ್‌ವೊಂದರಲ್ಲಿ ಉಳಿದುಕೊಂಡಿದ್ದ ಇವರು, ಭಾನುವಾರ ಈಜಲು ಸಮುದ್ರಕ್ಕಿಳಿದಿದ್ದಾಗ ಅಲೆಗಳಿಗೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಮೃತದೇಹವನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ಡೆತ್‌ನೋಟ್ ಬರೆದಿಟ್ಟು 7ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ; ಮನನೊಂದಿದ್ದು ಯಾಕೆ?
ಮರ ಬಿದ್ದು ಬೈಕ್ ಸವಾರ ಮೃತ್ಯು
ವಿಜಯಪುರ: ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದ ಮುದ್ದಾಪುರ ಬಳಿ ಭಾನುವಾರ ನಡೆದಿದೆ. ಸರ್ಕಾರಿ ಶಾಲೆಯ ಶಿಕ್ಷಕ ಪ್ರಕಾಶ ಛಲವಾದಿ ಮೃತ ದುರ್ದೈವಿ. ಮುದ್ದಾಪುರದಿಂದ ಮುದ್ದೇಬಿಹಾಳಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.