Site icon Vistara News

Shivamogga Mall | ಸಾವರ್ಕರ್‌ ಭಾವಚಿತ್ರಕ್ಕೆ ಎಸ್‌ಡಿಪಿಐ ಆಕ್ಷೇಪ; ಬಿಜೆಪಿ ಪ್ರತಿಭಟನೆ, ನಾಲ್ವರು ವಶಕ್ಕೆ

ಶಿವಮೊಗ್ಗ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬ್ಯಾನರ್‌ನಲ್ಲಿ ವಿ.ಡಿ.ಸಾವರ್ಕರ್‌ ಭಾವಚಿತ್ರ ಇರುವುದನ್ನು ಕಂಡು ಎಸ್‌ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರಿಂದ ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ (Shivamogga Mall) ಶನಿವಾರ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಇದೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಮಾಲ್‌ ಬಂದ್‌ ಮಾಡಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ಮಾಲ್‌ನಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್‌ ನೆಹರು, ಭಗತ್‌ ಸಿಂಗ್‌, ಸರ್ದಾರ್‌ ವಲ್ಲಭಭಾಯಿ ಪಟೇಲ್‌, ಚಂದ್ರಶೇಖರ್‌ ಆಜಾದ್‌, ಡಾ.ಬಿ.ಆರ್.ಅಂಬೇಡ್ಕರ್‌, ಸುಭಾಷ್ ಚಂದ್ರ ಬೋಸ್‌ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಿ ಅಲಂಕರಿಸಲಾಗಿತ್ತು.

ಎಸ್‌ಡಿಪಿಐ ಕಾರ್ಯಕರ್ತ ವಿ.ಡಿ.ಸಾವರ್ಕರ್‌ ಭಾವಚಿತ್ರ ತೆರವುಗೊಳಿಸುವಂತೆ ಸೂಚಿಸಿದರು.

ಇದನ್ನೂ ಓದಿ | ನಾನು ಹೆಣ್ಮಕ್ಕಳನ್ನು ಅಪಮಾನಿಸಿಲ್ಲ, ನಿಜವಾಗಿ ಅಪಮಾನಿಸಿದ್ದು ಬಿಜೆಪಿ, ಅದು ಕ್ಷಮೆ ಕೇಳುತ್ತಾ?: ಪ್ರಿಯಾಂಕ್‌ ಸವಾಲ್‌

ಮಾಲ್‌ನಲ್ಲಿ ಸಾವರ್ಕರ್ ಭಾವಚಿತ್ರ ಗಮನಿಸಿದ ಎಸ್‌ಡಿಪಿಐ ಕಾರ್ಯಕರ್ತರು, ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ, ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌? ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ? ಎಂದು ಆಕ್ರೋಶ ವ್ಯಕ್ತಪಡಿಸಿ, ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಗಿದ್ದರಿಂದ ಸಾವರ್ಕರ್ ಭಾವಚಿತ್ರದೊಂದಿಗೆ ಅಬುಲ್ ಕಲಾಮ್ ಆಜಾದ್ ಅವರ ಭಾವಚಿತ್ರ ಹಾಕುವುದಾಗಿ ಮಾಲ್‌ ಸಿಬ್ಬಂದಿ ಹೇಳಿದ್ದರಿಂದ ಕಾರ್ಯಕರ್ತರು ಹಿಂತಿರುಗಿದ್ದಾರೆ ಎನ್ನಲಾಗಿದೆ. ನಂತರ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಸ್ವಾತಂತ್ರ್ಯ ಹೋರಾಟಗಾರರಿಗೆ ಎಸ್‌ಡಿಪಿಐ ಕಾರ್ಯಕರ್ತರು ಅವಮಾನ ಮಾಡಿದ್ದಾರೆ. ಕೆಲ ಮುಸ್ಲಿಂ ಕಿಡಿಗೇಡಿಗಳು ಭಾವಚಿತ್ರಗಳನ್ನು ತೆಗೆಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮಾಲ್ ಅನ್ನು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದರು.

ನಾಲ್ವರು ವಶಕ್ಕೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಡಿ.ಶರೀಫ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪಾಲಿಕೆ ಆಯುಕ್ತರು ನೀಡಿದ ದೂರಿನ ಅನ್ವಯ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆದು ತುಂಗಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವ್ಯಕ್ತಿಯನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ತುಂಗಾನಗರ ಠಾಣೆಯ ಮುಂದೆ ಮುಸ್ಲಿಂ ಸಮುದಾಯದ ಜನರು ಜಮಾಯಿಸಿದ್ದಾರೆ. ಈ ಮೂಲಕ ಒಟ್ಟ ನಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಂತಾಗಿದೆ. ಬಳಿಕ ವಿಚಾರಣೆಗೆ ಕರೆದುಕೊಂಡ ಬಂದ ವ್ಯಕ್ತಿಗಳ ಮೂಲಕವೇ ಸ್ಥಳದಲ್ಲಿ ಜಮಾಯಿಸಿದ್ದ ಜನರಿಗೆ ಮನೆಗೆ ಹೋಗುವಂತೆ ಹೇಳಿಸಿದ ಪೊಲೀಸರು.

ಇದನ್ನೂ ಓದಿ | ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ʼಜೀವನದಿʼ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Exit mobile version