ದಾವಣಗೆರೆ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಅವಹೇಳನ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರ ದಾವಣಗೆರೆಯ ಮಗಾನಹಳ್ಳಿ ರಸ್ತೆಯಲ್ಲಿರುವ ಮಿಲ್ಲತ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಎಸ್‌ಡಿಪಿಐ ಸಮಾವೇಶವನ್ನು ರದ್ದುಗೊಳಿಸಲಾಗಿದೆ.
ಜೂನ್ 12ರಂದು ಎಸ್‌ಡಿಪಿಐ ವತಿಯಿಂದ ಜನಾಧಿಕಾರ ಸಮಾವೇಶ ಆಯೋಜನೆ ಮಾಡಲಾಗಿತ್ತು. ಶನಿವಾರ ಎಸ್ಪಿ ಕಚೇರಿಯಲ್ಲಿ ಎಸ್‌ಡಿಪಿಐ ಮುಖಂಡರನ್ನು ಕರೆದು ಸಭೆಯಲ್ಲಿ ಚರ್ಚಿಸಿ ಸಮಾವೇಶ ನಡೆಸದಂತೆ ಎಸ್ಪಿ ಸಿ.ಬಿ ರಿಷ್ಯಂತ್ ಮುಖಂಡರ ಮನವೊಲಿಸಿದ್ದಾರೆ.
ಇದನ್ನು ಓದಿ| ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ; ಪೊಲೀಸರತ್ತ ಆಕ್ರೋಶದಿಂದ ಕಲ್ಲು ಎಸೆದ ಮಕ್ಕಳು !
ಇನ್ನು ಈ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರತಿಕ್ರಿಯಿಸಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಸಮಾವೇಶ ನಡೆಸುವುದು ಸೂಕ್ತವಲ್ಲದ ಕಾರಣ ರದ್ದು ಮಾಡಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಜಾರಿ ಇರಲಿದ್ದು, ಇಂದು ಸಂಜೆ 6ರಿಂದ ನಾಳೆ ರಾತ್ರಿ 10 ಗಂಟೆವರೆಗೆ 144 ಸೆಕ್ಷನ್ ಜಾರಿ ಇರಲಿದೆ ಎಂದು ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಭೆ, ಸಮಾರಂಭ ಹಾಗೂ ಜನರು ಗುಂಪು ಸೇರದಂತೆ ಪೊಲೀಸರು ತಾಕೀತು ಮಾಡಿದ್ದಾರೆ.
ಇದನ್ನು ಓದಿ|ಮುಸ್ಲಿಮರಿಂದ ಪ್ರತಿಭಟನೆ ಭೀತಿ: ರಾಜ್ಯದಲ್ಲಿ ಕಟ್ಟೆಚ್ಚರ, ಮುಲಾಜಿಲ್ಲದೆ ಕ್ರಮಕ್ಕೆ ಸಿಎಂ ಬೊಮ್ಮಾಯಿ ಸೂಚನೆ